ETV Bharat / state

ಬಂಡೀಪುರದಲ್ಲಿ ಹಸಿರು ಸುಂಕಕ್ಕೆ ಫಾಸ್ಟ್​ಟ್ಯಾಗ್: ಟ್ರಾಫಿಕ್ ಕಿರಿಕಿರಿಗೆ ಬೀಳಲಿದೆ ಬ್ರೇಕ್ - FASTAG FOR GREEN TOLL

ರಾಷ್ಟ್ರೀಯ ಹೆದ್ದಾರಿ 67 ಮತ್ತು 766ರಲ್ಲಿ ಮೂರು ಫಾಸ್ಟ್​ಟ್ಯಾಗ್ ಕೇಂದ್ರ ತೆರೆಯಲಾಗಿದ್ದು, ಶೀಘ್ರದಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಲಿದ್ದಾರೆ.

Bandipur Tiger Reserve
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (ETV Bharat)
author img

By ETV Bharat Karnataka Team

Published : Dec 15, 2024, 5:29 PM IST

ಚಾಮರಾಜನಗರ: ಬಂಡೀಪುರದಿಂದ ಕೇರಳ ಮತ್ತು ಊಟಿ ಸೇರಿದಂತೆ ತಮಿಳುನಾಡಿಗೆ ತೆರಳುವ ವೇಳೆ ಎದುರಾಗುತ್ತಿದ್ದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್​ಗೆ ಮುಕ್ತಿ ಸಿಗುತ್ತಿದ್ದು, ನಗದು ಬದಲಾಗಿ ಫಾಸ್ಟ್​ಟ್ಯಾಗ್ ಆರಂಭಗೊಳ್ಳುತ್ತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ಎರಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರವಾಸಿಗರಿಂದ ಹಸಿರು ಸುಂಕ ವಸೂಲಿಗೆ ನಿರ್ಮಾಣವಾಗಿರುವ ಫಾಸ್ಟ್​ಟ್ಯಾಗ್ ಕೇಂದ್ರಕ್ಕೆ ಶೀಘ್ರದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಪ್ರಾಯೋಗಿಕ ನಿರ್ವಹಣೆ ಆರಂಭವಾಗಿದೆ.

ರಾಷ್ಟ್ರೀಯ ಹೆದ್ದಾರಿ 67 ಮತ್ತು 766ರಲ್ಲಿ ಮೂರು ಫಾಸ್ಟ್​ಟ್ಯಾಗ್ ಕೇಂದ್ರ ತೆರೆಯಲಾಗಿದೆ. ಮೇಲುಕಾಮನಹಳ್ಳಿ, ಕೆಕ್ಕನಹಳ್ಳ ಮತ್ತು ಮದ್ದೂರಿನ ಚೆಕ್​ಪೋಸ್ಟ್​ ಬಳಿ ಫಾಸ್ಟ್​ಟ್ಯಾಗ್ ಕೇಂದ್ರ ಪ್ರಾಯೋಗಿಕವಾಗಿ ಚಾಲನೆಯಾಗಿದ್ದು ಯಾವುದಾದರು ಸಮಸ್ಯೆ ಆಗುತ್ತಿದೆಯಾ ಎಂದು ಪರೀಕ್ಷೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಂಡೀಪುರದಲ್ಲಿ ಹಸಿರು ಸುಂಕದ ಫಾಸ್ಟ್​ಟ್ಯಾಗ್​ಗೆ ಚಾಲನೆ ನೀಡಲಿದ್ದಾರೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಪ್ರಭಾಕರನ್ ತಿಳಿಸಿದ್ದಾರೆ.

Bandipur Tiger Reserve
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (ETV Bharat)

ಏನಿದು ಹಸಿರು ಸುಂಕ? ಅರಣ್ಯ ಪ್ರದೇಶದಲ್ಲಿ ಕಸ ನಿರ್ವಹಣೆ, ಅಪಘಾತ ನಿರ್ವಹಣೆ ಸೇರಿ ವಿವಿಧ ಉದ್ದೇಶಗಳಿಗಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗುವ ವಾಹನಗಳಿಂದ ಲಘು ವಾಹನಗಳಿಗೆ 20 ರೂ., ಭಾರಿ ವಾಹನಗಳಿಗೆ 30 ರೂ. ನಂತೆ ಹಸಿರು ಸುಂಕ ವಸೂಲಿ ಮಾಡಲಾಗುತ್ತಿದೆ.

ರಜೆ ದಿನ ಹಾಗೂ ವಾರಾಂತ್ಯದಲ್ಲಿ ಊಟಿ ಹಾಗೂ ಕೇರಳದ ಪ್ರವಾಸಿ ತಾಣಗಳಿಗೆ ಹೆಚ್ಚು ಪ್ರವಾಸಿಗರು ಹೋಗಲಿದ್ದು, ಹಸಿರು ಸುಂಕ ವಸೂಲಿ ಮಾಡುವ ವೇಳೆ ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಲ್ಲುತ್ತಿದ್ದವು. ಚೆಕ್​ಪೋಸ್ಟ್​ನಲ್ಲಿ ಟಿಕೆಟ್ ಪಡೆದು ಹೊರಡುವಷ್ಟರಲ್ಲಿ ಗಂಟೆಗೂ ಹೆಚ್ಚು ಸಮಯ ಕಳೆದು ಹೋಗುತ್ತಿತ್ತು. ಅಲ್ಲದೆ ಅರಣ್ಯ ಪ್ರದೇಶದಲ್ಲಿ ವಾಹನಗಳು ನಿಂತು ಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗುತ್ತಿತ್ತು. ಇದೇ ಸಂದರ್ಭ ಬಳಸಿಕೊಂಡು ಪ್ರವಾಸಿಗರು ಕಾಡಿನಲ್ಲಿ ವಾಹನದಿಂದ ಕೆಳಗಿಳಿದು ಪ್ರಾಣಿಗಳ ಫೋಟೋ ತೆಗೆಯುವುದು, ಆಹಾರ ನೀಡುವುದನ್ನು ಮಾಡುತ್ತಿದ್ದರು. ಒಂದು ಚೆಕ್​ಪೋಸ್ಟ್​ನಲ್ಲಿ ಒಬ್ಬ ಅಥವಾ ಇಬ್ಬರು ಟಿಕೆಟ್ ನೀಡುತ್ತಿದ್ದರು. ಒಂದು ದಿನಕ್ಕೆ ವಾರಾಂತ್ಯದಲ್ಲಿ 3 ಸಾವಿರದಿಂದ 4 ಸಾವಿರ ವಾಹನಗಳು ಸಂಚಾರ ಮಾಡುತ್ತಿದ್ದವು.

ಪ್ರವಾಸಿ ವಾಹನಗಳು ಹೆಚ್ಚು ಇದ್ದ ಸಂದರ್ಭದಲ್ಲಿ ತುರ್ತಾಗಿ ಹೋಗಬೇಕಾದ ತರಕಾರಿ, ಹಾಲಿನ ವಾಹನ ಮತ್ತು ಸ್ಥಳೀಯರಿಗೆ ಹೆಚ್ಚಿನ ತೊಂದರೆಯಾಗುತ್ತಿತ್ತು. ಈಗ ಫಾಸ್ಟ್​ಟ್ಯಾಗ್ ಅಳವಡಿಸಿರುವುದರಿಂದ ಕೆಲವೇ ನಿಮಿಷಗಳಲ್ಲಿ ಸುಂಕ ಪಾವತಿಸಿ ವಾಹನಗಳು ಮುಂದಕ್ಕೆ ತೆರಳಲಿವೆ.

ಫಾಸ್ಟ್​ಟ್ಯಾಗ್ ನಿರಂತರವಾಗಿ ಚಾಲನೆಯಾದ ಸಂದರ್ಭದಲ್ಲಿ ಸ್ಥಳೀಯರಿಗೆ ಬೇರೆ ಗೇಟಿನಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಫಾಸ್ಟ್​ಟ್ಯಾಗ್​ನಿಂದ ನಗದಿನ ಬದಲಾಗಿ ಡಿಜಿಟಲ್ ಮೂಲಕ ಹಣ ಪಾವತಿ ಆಗುವುದರಿಂದ ಪಾರದರ್ಶಕತೆ ಇರಲಿದೆ. ಟ್ರಾಫಿಕ್ ಸಮಸ್ಯೆ ತಗ್ಗಲಿದೆ. ಅರಣ್ಯ ಸಚಿವರ ಸಮಯ ಕೇಳಿದ್ದು ಶೀಘ್ರದಲ್ಲೇ ಫಾಸ್ಟ್​ಟ್ಯಾಗ್​ಗೆ ಚಾಲನೆ ಸಿಗಲಿದೆ ಎಂದು ಡಿಸಿಎಫ್ ಪ್ರಭಾಕರನ್ ಮಾಹಿತಿ ನೀಡಿದರು.

ಇದನ್ನೂ ಓದಿ: ಎಚ್.ಡಿ.ಕೋಟೆಯಲ್ಲಿ ಹುಲಿ ಕಳೇಬರ ಪತ್ತೆ: ಕಾದಾಟದಲ್ಲಿ ಸಾವನ್ನಪ್ಪಿರುವ ಶಂಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.