ETV Bharat / state

ಸಾರ್ವಜನಿಕ ಉದ್ಯಾನವನಗಳಿಗೆ ಸಾಕು ನಾಯಿಗಳನ್ನು ತಂದು ಗಲೀಜು ಮಾಡುವ ಮಾಲೀಕರಿಗೆ ದಂಡ: ಹೈಕೋರ್ಟ್ - FINES FOR DOG OWNERS

ರಾಜಧಾನಿಯ ಉದ್ಯಾನವನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್,​ ಸಾಮಾನ್ಯ ನಿಯಮಗಳನ್ನು ಉಲ್ಲಂಘಿಸಿದವರಿಗಿಂತ ನಾಯಿಗಳನ್ನು ತಂದು ಗಲೀಜು ಮಾಡುವ ಮಾಲೀಕರಿಗೆ ಹೆಚ್ಚು ದಂಡ ವಿಧಿಸಲು ಸೂಚಿಸಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 27, 2024, 10:01 AM IST

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಸ್ವಚ್ಛತೆ ಕಾಯ್ದುಕೊಳ್ಳುವ ಕುರಿತಂತೆ ಹಲವು ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್​​, ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಸೂಚನೆ ನೀಡಿದೆ.

ನಗರದ ಉದ್ಯಾನವನಗಳಲ್ಲಿ ಸಾಕು ನಾಯಿಗಳಿಂದ ಆಗುತ್ತಿರುವ ಮಲ ವಿಸರ್ಜನೆಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಕೋರಿ ಮೆಸೆರ್ಸ್ ಕಂಪ್ಯಾಷನ್ ಅನ್ಲಿಮಿಟೆಡ್ ಪ್ಲಸ್ ಆ್ಯಕ್ಷನ್ (ಕೂಪ) ಎಂಬ ಸರ್ಕಾರೇತರ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್​.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರಿದ್ದ ವಿಭಾಗೀಯ ಪೀಠ, ಹಲವು ಮಾರ್ಗಸೂಚಿಗಳನ್ನು ರಚಿಸಿ, ಅರ್ಜಿ ಇತ್ಯರ್ಥಪಡಿಸಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿಯನ್ನು ಹಿಂಪಡೆಯುವುದಾಗಿ ಅರ್ಜಿದಾರರು ತಿಳಿಸಿದ್ದಾರೆ. ಆದರೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಉತ್ತೇಜನ ನೀಡುವ ಸಂದರ್ಭದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಬಾರದು ಎಂದಿರುವ ನ್ಯಾಯಪೀಠ, ವೈಯಕ್ತಿಕ ಹಿತಾಸಕ್ತಿ ಒಳಗೊಳ್ಳುವಿಕೆಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪುರಸ್ಕರಿಸಲು ನಿರಾಕರಿಸಲು ಕಾರಣವಾಗಿರುತ್ತದೆ. ಆದರೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅರ್ಜಿದಾರರು ಹಿಂಪಡೆಯಲು ಮುಂದಾದರೂ, ಅಂತಹ ಅರ್ಜಿ ಇತ್ಯರ್ಥಪಡಿಸುವ ಸಂದರ್ಭದಲ್ಲಿ ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಬೇಕಾಗುತ್ತದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ನ್ಯಾಯಾಲಯದ ಗಮನಕ್ಕೆ ಬಂದ ಬಳಿಕ ಅದು ನ್ಯಾಯಾಲಯದ ವ್ಯಾಪ್ತಿ ಸೇರಿದ್ದಾಗಿರಲಿದ್ದು, ಅದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕಾಗುತ್ತದೆ. ಅರ್ಜಿದಾರರು ಹಿಂಪಡೆಯಲು ಮುಂದಾದ ಸಂದರ್ಭದಲ್ಲಿ ಅದರ ಸಾಧಕ-ಭಾಧಕಗಳನ್ನು ಪರಿಶೀಲಿಸದೆ ಅರ್ಜಿಯನ್ನು ಹಿಂಪಡೆಯಲು ಸುಲಭವಾಗಿ ಅವಕಾಶ ನೀಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರು, ಸರ್ಕಾರೇತರ ಸಂಸ್ಥೆಯಾಗಿದ್ದು ಸಾರ್ವಜನಿಕ ಉದ್ಯಾನವನಗಳಲ್ಲಿ ಬೇಜವಾಬ್ದಾರಿಯುತವಾಗಿ ಸಾಕು ಪ್ರಾಣಿಗಳ ಪ್ರವೇಶಕ್ಕೆ ಅವಕಾಶ ನೀಡಿರುವುದರಿಂದ ಸ್ವಚ್ಛತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ನಗರದ ಉದ್ಯಾನವನಗಳ ನಿರ್ವಹಣೆ ಮಾಡುತ್ತಿರುವ ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಉದ್ಯಾನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ವಿಫಲರಾಗಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನವನಗಳಲ್ಲಿ ಸಾಕಪ್ರಾಣಿಗಳ ವಿಸರ್ಜನೆ ಮಾಡುವ, ಸ್ವಚ್ಛಗೊಳಿಸುವ ಪ್ರಕ್ರಿಯೆಯಲ್ಲಿ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಈ ಸಂಬಂಧ ಸಾರ್ವಜನಿಕರಿಂದ 1,288 ದೂರುಗಳು ದಾಖಲಾಗಿವೆ ಎಂಬುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.

ಸಾರ್ವಜನಿಕ ಉದ್ಯಾನವನಗಳಿಗೆ ಸಾಕು ನಾಯಿಗಳನ್ನು ಕರೆತರುವ ಪೋಷಕರು ಅದು ವಿಸರ್ಜನೆ ಮಾಡುವ ತ್ಯಾಜ್ಯದ ವಿಲೇವಾರಿಗೆ ಕೈ ಚೀಲಗಳನ್ನು ತೆಗೆದುಕೊಂಡು ಬರಬೇಕು ಎಂಬ ಜಾಗೃತಿ ಮೂಡಿಸಬೇಕಾದ ಅಗತ್ಯವಿದ್ದು, ನಾಯಿಗಳ ವಿಕೃತ ನಡೆಯಿಂದ ಉದ್ಯಾನಕ್ಕೆ ಭೇಟಿ ನೀಡುವವರಿಗೆ ರಕ್ಷಣೆ ನೀಡಬೇಕಾಗಿದೆ. ಅಲ್ಲದೆ, ಸಾರ್ವಜನಿಕ ಉದ್ಯಾನವನಗಳಲ್ಲಿ ಎಲ್ಲ ರೀತಿಯ ಸ್ವಚ್ಛತೆ ಕಾಯ್ದುಕೊಳ್ಳುವುದು ಕಡ್ಡಾಯವಾಗಿರಬೇಕಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಬಿಬಿಎಂಪಿ ಕಾಯಿದೆ 2020ರಲ್ಲಿ ತಿಳಿಸಿರುವಂತೆ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಉದ್ಯಾನವನಗಳಂತಹ ಸೌಲಭ್ಯವನ್ನು ಒದಗಿಸಬೇಕು ಮತ್ತು ಅವುಗಳನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಅಲ್ಲದೆ, ಅವುಗಳನ್ನು ನಿಯಂತ್ರಿಸುವುದಕ್ಕೂ ಕಾಯಿದೆಯಲ್ಲಿ ಅವಕಾಶವನ್ನು ನೀಡಲಾಗಿದೆ. ಘನತ್ಯಾಜ್ಯ ನಿರ್ವಹಣೆಗೆ ಕಾಯಿದೆಯಡಿಯಲ್ಲಿ ನಿಯಮಗಳನ್ನು ರೂಪಿಸಲಾಗಿದ್ದರೂ ಮಾನದಂಡಗಳನ್ನು ಅನುಸರಿಲಾಗುತ್ತಿಲ್ಲ. ಜೊತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಪದ್ರವ ನಿಷೇಧಕ್ಕೆ ಅವಕಾಶವಿದ್ದರೂ ಅವುಗಳನ್ನು ಜಾರಿ ಮಾಡುವು ಇಚ್ಛಾಶಕ್ತಿಯಿಲ್ಲ ಎಂಬುದು ಅರ್ಜಿದಾರರ ಮನವಿಯಾಗಿದೆ.

ಹೈಕೋರ್ಟ್‌ ಮಾರ್ಗಸೂಚಿಗಳು:

ಸ್ವಚ್ಚತೆ ಕಾಯ್ದಕೊಳ್ಳುವುದು ಸೇರಿದಂತೆ ಇತರೆ ನಿಯಮಗಳ ಉಲ್ಲಂಘನೆ ಮಾಡುವವರಿಗಿಂತಲೂ ವಿಧಿಸುವ ದಂಡಕ್ಕಿಂತಲೂ, ನಾಯಿಯ ಮಲ ವಿಸರ್ಜನೆ ಕಾರಣವಾಗುವ ಅವುಗಳ ಮಾಲೀಕರಿಗೆ ವಿಧಿಸುವ ದಂಡ ಹೆಚ್ಚಿನ ಪ್ರಮಾಣದ್ದಾಗಿರಬೇಕು.

ಬಿಬಿಎಂಪಿ ಅಧಿಕಾರಿಗಳು ಕರ್ನಾಟಕ ಉದ್ಯಾನವನಗಳು, ಆಟದ ಮೈದಾನಗಳು ಮತ್ತು ಮುಕ್ತ ಸ್ಥಳಗಳ(ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ 1985ನ್ನು ಅಕ್ಷರಶಃ ಜಾರಿ ಮಾಡಬೇಕು.

ಉದ್ಯಾನವನಗಳು ಸೇರಿದಂತೆ ಬಿಬಿಎಂಪಿ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು 2016ರನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ನಿಯಮಗಳ ತಿದ್ದುಪಡಿಗೆ ಪಾಲಿಕೆ ಕ್ರಮ ವಹಿಸಬೇಕು.

ಉದ್ಯಾನವನಗಳಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ನಿರ್ವಹಣೆಗಾಗಿ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಪ್ರಾಧಿಕಾರಗಳು ಅಗತ್ಯ ಬಜೆಟ್ ಮೀಸಲಿಡಬೇಕು.

ಉದ್ಯಾನವನಗಳ ಕುರಿತ ಜಾಗರೂಕತೆಯನ್ನು ಕಾಯ್ದುಕೊಳ್ಳುವುದಕ್ಕಾಗಿ ರಾಜ್ಯ ಸರ್ಕಾರ, ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಶಾಶ್ವತವಾದ ಕಾರ್ಯವಿಧಾನವನ್ನು ರೂಪಿಸಿ ಅಭಿವೃದ್ಧಿ ಪಡಿಸಬೇಕು.

ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯೆಯುವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದಯಕೊಳ್ಳುವುದು ಮತ್ತು ಅದನ್ನು ಉಲ್ಲಂಘಿಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯ ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜವಾಬ್ದಾರಿಯಾಗಿದೆ.

ಉದ್ಯಾನವನಗಳ ಸಂರಕ್ಷಣೆಗಾಗಿ ಮೇಲ್ವಿಚಾರಣೆ ಮಾಡವುದಕ್ಕಾಗಿ ತಂಡಗಳನ್ನು ನಿಯೋಜಿಸುವ ಸಂಬಂಧ ಸೂಕ್ತ ನಿಯಮಗಳನ್ನು ಅಳವಡಿಸುವುದು ಮತ್ತು ತಪ್ಪಿತಸ್ಥರಿಗೆ ದಂಡ ವಿಧಿಸುವ ಸಲುವಾಗಿ ಬಿಬಿಎಂಪಿ ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದಾಗಿದೆ.

ತೋಟಗಾರಿಕೆ ಇಲಾಖೆಯ ಒಬ್ಬ ಅಧಿಕಾರಿ ಮತ್ತು ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡವನ್ನು ರಚಿಸಿ, ಕಾಲಕಾಲಕ್ಕೆ ನಗರದ ಎಲ್ಲ ಪ್ರಮುಖ ಉದ್ಯಾನವನಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಛತೆಗೆ ಸಂಬಂಧಿಸಿದಂತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಸಂಬಂಧದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕು, ಜೊತೆಗೆ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಸದಸ್ಯರ ಪತ್ತೆಗೆ ಅರ್ಜಿ; ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.