ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅಭಿಮಾನಿ ಆಂಜನೇಯ ಎಂಬುವರು ನೀಡಿದ ದೂರಿನ ಅನ್ವಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
''ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ 'ಗಜಪಡೆ' ಎಂಬ ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿಯು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು ನಿಂದಿಸಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ. ಪುನೀತ್ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ತನ್ನ ಖಾತೆಯನ್ನು ಸುದೀಪ್ ಅಭಿಮಾನಿ ಎಂದು ಹೆಸರು ಬದಲಾಯಿಸಿ ಸುದೀಪ್, ಪುನೀತ್ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿದ್ದಾನೆ. ಹೀಗಾಗಿ, ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು'' ಎಂದು ಆಗ್ರಹಿಸಿ ಆಂಜನೇಯ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರಿನ ಅನ್ವಯ ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್ಕುಮಾರ್ ನಿಂದನೆ; ಪೊಲೀಸರಿಗೆ ದೂರು ನೀಡಿದ ಅಭಿಮಾನಿಗಳು - Ashwini Puneeth Rajkumar