ETV Bharat / state

ಸೋನಿಯಾ, ರಾಹುಲ್ ವಿರುದ್ಧ ಅಪಪ್ರಚಾರ: ಬಾಂಗ್ಲಾದೇಶದ ಪತ್ರಕರ್ತನ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ - FIR Against Bengladesh Journalist - FIR AGAINST BENGLADESH JOURNALIST

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರದ ಆರೋಪದ ಮೇಲೆ ಬಾಂಗ್ಲಾದೇಶದ ಪತ್ರಕರ್ತನ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.

FIR
ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಬೆಂಗಳೂರು (ETV Bharat)
author img

By ETV Bharat Karnataka Team

Published : Sep 2, 2024, 11:43 AM IST

ಬೆಂಗಳೂರು: ಕಾಂಗ್ರೆಸ್​ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದ ಆರೋಪದಡಿ ಬಾಂಗ್ಲಾದೇಶದ ಪತ್ರಕರ್ತ ಸೇರಿದಂತೆ ಇಬ್ಬರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಕಾನೂನು ಘಟಕ ನೀಡಿರುವ ದೂರಿನ ಅನ್ವಯ ಬಾಂಗ್ಲಾದೇಶದ ಪತ್ರಕರ್ತ ಸಲಾಹ್ ಉದ್ದೀನ್ ಶೋಯೆಬ್‌ ಚೌಧರಿ ಹಾಗೂ ಪೋಸ್ಟ್ ಹಂಚಿಕೊಂಡಿದ್ದ ಅದಿತಿ ಘೋಷ್ ಎಂಬವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

'ಆಗಸ್ಟ್ 23ರಂದು ತಮ್ಮ 'X' ಖಾತೆಯಾದ @salaha shoaibನಲ್ಲಿ ಪೋಸ್ಟ್ ಮಾಡಿರುವ ಸಲಾಹ್ ಉದ್ದೀನ್ ಶೋಯೆಬ್‌ ಚೌಧರಿ, ಸೋನಿಯಾ ಗಾಂಧಿಯವರ ಅಂತರ್‌ಧರ್ಮೀಯ ವಿವಾಹ, ಭಾರತೀಯ ಪೌರತ್ವ ಹಾಗೂ ಅವರ ಧಾರ್ಮಿಕ ಸ್ವಾತಂತ್ರ್ಯವನ್ನ ಉಲ್ಲೇಖಿಸುವ ಮೂಲಕ ಅವರನ್ನು ಐಎಸ್ಐ ಏಜೆಂಟ್ ಎಂಬ ರೀತಿ ಬಿಂಬಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ವಿದೇಶಿ ಸ್ನೇಹಿತರ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಾರೆ' ಎಂದು ದೂರಿನಲ್ಲಿ ತಿಳಿಸಲಾಗಿದೆ.

'ಆ ಪೋಸ್ಟ್​ ಅನ್ನು ಅದಿತಿ ಘೋಷ್ ಎಂಬವರು 'The Jaipur Dialogues' ಮುಖಾಂತರ ಹಂಚಿಕೊಂಡು ಹೆಚ್ಚು ಜನರಿಗೆ ತಲುಪುವ ರೀತಿಯಲ್ಲಿ ಪ್ರಚಾರ ಮಾಡಿದ್ದಾರೆ. ಆ ಮೂಲಕ ಹರಿಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯವರ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿದ್ದಾರೆ. ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ' ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ದೂರಿನ ಅನ್ವಯ ಸಲಾಹ್ ಉದ್ದೀನ್ ಶೋಯೆಬ್‌ ಚೌಧರಿ ಹಾಗೂ ಅದಿತಿ ಘೋಷ್ ಎಂಬವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತಲ್ವಾರ್ ತೋರಿಸಿ ಡೆಲಿವರಿ ಬಾಯ್‌ಗಳನ್ನು ದೋಚುತ್ತಿದ್ದ ಮೂವರ ಬಂಧನ - Robbery Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.