ಮಂಗಳೂರು: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್ ಕುಮಾರ್ ಪುತ್ತಿಲ ಬೆಂಗಳೂರಿನ ಹೋಟೆಲ್ವೊಂದರಲ್ಲಿ 2023ರ ಜೂನ್ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಭಾನುವಾರ ಮಹಿಳೆ ದೂರು ನೀಡಿದ್ದಾರೆ. ದೌರ್ಜನ್ಯ ಎಸಗಿರುವ ಸಂದರ್ಭದ ಫೋಟೋ, ಸೆಲ್ಫಿ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಪಿಸಿ 417, 354A, 506 ಸೆಕ್ಷನ್‌ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಸಾಕಷ್ಟು ಹೆಸರು ಮಾಡಿದ್ದರು. ಪುತ್ತಿಲರ ಹಿಂದುತ್ವದ ಪ್ರತಿಪಾದನೆಗೆ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಅವರನ್ನು ಫಾಲೋ ಮಾಡುತ್ತಿದ್ದುದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 2 ಗಂಟೆಯಲ್ಲೇ ಪೋಷಕರ ಮಡಿಲು ಸೇರಿದ ಕಂದಮ್ಮ - Child Abduction Case