ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರನ್ನು ಟೀಕಿಸುವ ಭರದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ನೀಡಿದ ದೂರಿನನ್ವಯ ಸಂಜಯನಗರ ಠಾಣಾ ಪೊಲೀಸರು ಐಪಿಸಿ ಸೆಕ್ಷನ್ 153ಬಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ವಿಜಯಪುರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳು ಬಿಜೆಪಿ ಪದಾಧಿಕಾರಿಯನ್ನು ಬಂಧಿಸಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ದಿನೇಶ್ ಗುಂಡೂರಾವ್ ಅವರನ್ನು ಟೀಕಿಸುವ ಭರದಲ್ಲಿ, 'ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ. ದಿನೇಶ್ ಗುಂಡೂರಾವ್‌ಗೆ ದೇಶ ವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ ಎಂದು ಹೇಳಿದ್ದರು. ಯತ್ನಾಳ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಟಬು ರಾವ್ ಭಾನುವಾರ ಸಂಜಯನಗರ ಠಾಣೆಗೆ ದೂರು ನೀಡಿದ್ದರು.
ಇದನ್ನೂ ಓದಿ : ಸಚಿವ ದಿನೇಶ್ ಗಂಡೂರಾವ್ ಕುಟುಂಬದ ಬಗ್ಗೆ ಹೇಳಿಕೆ; ಯತ್ನಾಳ್ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು - Congress