ETV Bharat / state

ಕ್ರಿಕೆಟ್​ನಲ್ಲಿ​​ ಅವಕಾಶ ಕೊಡಿಸುವುದಾಗಿ ವಂಚನೆ ಆರೋಪ: ಮಾಜಿ ಆಟಗಾರನ ವಿರುದ್ಧ ಎಫ್ಐಆರ್

ಕ್ರಿಕೆಟ್ ಟೂರ್ನಿಗಳಲ್ಲಿ ಅವಕಾಶ, ತರಬೇತಿ ಮತ್ತು ಸಾಮಗ್ರಿಗಳನ್ನು ಕೊಡಿಸುತ್ತೇನೆ ಎಂದು ನಂಬಿಸಿ ವಂಚಿಸಿದ ಆರೋಪದ ಮೇಲೆ ಮಾಜಿ ಆಲ್​ರೌಂಡರ್ ಗೌರವ್ ಧಿಮಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

Etv Bharat
Etv Bharat
author img

By ETV Bharat Karnataka Team

Published : Feb 26, 2024, 11:07 AM IST

Updated : Feb 26, 2024, 11:14 AM IST

ಬೆಂಗಳೂರು: ಕ್ರಿಕೆಟ್ ಟೂರ್ನಿಗಳಲ್ಲಿ ಆಡುವ ಅವಕಾಶ, ತರಬೇತಿ ಮತ್ತು ಅಗತ್ಯ ಸಾಮಗ್ರಿಗಳನ್ನು ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದಡಿ ಭಾರತದ ಅಂಡರ್-19, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳನ್ನು ಪ್ರತಿನಿಧಿಸಿದ್ದ ಮಾಜಿ ಆಲ್​ರೌಂಡರ್ ಗೌರವ್ ಧಿಮಾನ್ ವಿರುದ್ಧ ಪ್ರಕರಣ ದಾಖಲಾಗಿದೆ. 23 ವರ್ಷದ ಯುವ ಕ್ರಿಕೆಟಿಗನಿಗೆ 12.23 ಲಕ್ಷ ರೂ. ವಂಚಿಸಿರುವ ಆರೋಪ ಕೇಳಿ ಬಂದಿದ್ದು, ಆತನ ತಂದೆ ನೀಡಿದ ದೂರಿನ ಅನ್ವಯ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಎಫ್ಐಆರ್ ಸಾರಾಂಶ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪರ ಆಡುತ್ತಿರುವ ಯುವ ಕ್ರಿಕೆಟಿಗನೊಬ್ಬ‌ 2022-23ರಲ್ಲಿ ಗಾಂಧಿನಗರದ ಸಿಎಂಎಸ್ ಬ್ಯುಸಿನೆಸ್ ಸ್ಕೂಲ್‌ನಲ್ಲಿರುವ ರೋರ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಈ ಸಮಯದಲ್ಲಿ ಅಕಾಡೆಮಿಯ ಕೋಚ್ ಆಗಿದ್ದ ಗೌರವ್ ಧಿಮಾನ್, 'ಕೆಎಸ್​​ಸಿಎಯ ಮುಂದಿನ ಕೆಲ ಟೂರ್ನಿಗಳಿಗೆ ಆರಂಭಿಕ ಆಟಗಾರನಾಗಿ ಅವಕಾಶ ಕೊಡಿಸುವುದಾಗಿ' ನಂಬಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೇ, ಆತನ ತಂದೆಯನ್ನು ಭೇಟಿಯಾಗಿ 'ಉತ್ತಮ ತರಬೇತಿ ಹಾಗೂ ಬ್ಯಾಟ್​​ಗಳನ್ನು ಕೊಡಿಸುತ್ತೇನೆ. ಇದಕ್ಕಾಗಿ ಪ್ರಸ್ತುತ ಆಡುತ್ತಿರುವ ಕ್ಲಬ್ ಪರ ಆಡಬಾರದು' ಎಂದಿದ್ದಾರೆ. ನಂತರ ಬ್ಯಾಟ್ ಮತ್ತಿತರ ಕ್ರಿಕೆಟ್ ಸಾಮಗ್ರಿ ಕೊಡಿಸುವುದಾಗಿ ಹಂತ - ಹಂತವಾಗಿ 12.23 ಲಕ್ಷ ರೂ. ಪಡೆದುಕೊಂಡಿದ್ದಾರೆ. ಆದರೆ, ಯಾವುದೇ ಟೂರ್ನಿಗಳಲ್ಲಿ ಅವಕಾಶ ಕೊಡಿಸದೇ ವಂಚಿಸಿದ್ದಾರೆ ಎಂದು ದೂರಲಾಗಿದೆ.

ವಂಚನೆಗೊಳಗಾದ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನು ತಿಳಿದ ಆರೋಪಿಯ ತಂದೆ, ತಮ್ಮನ್ನು ಭೇಟಿಯಾಗಿ 'ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ' ಎಂದು ಭರವಸೆ ನೀಡಿ, ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.

ಆದರೆ, ಆರೋಪಿ ಗೌರವ್ ಧಿಮಾನ್ ವಿದೇಶದಿಂದ ಮರಳಿದ ಬಳಿಕ ಭೇಟಿಯಾಗಿ ಹಣ ವಾಪಸ್ ಕೇಳಿದಾಗ, 'ನಿನ್ನ ಮಗನ ಭವಿಷ್ಯ ಹಾಳು ಮಾಡುತ್ತೇನೆ, ನನಗೆ ರೌಡಿಗಳ ಸಂಪರ್ಕವಿದೆ. ನಿನ್ನ ಮಗನನ್ನು ಅಪಘಾತ ಮಾಡಿಸಿ ಕೊಲೆ ಮಾಡಿಸುತ್ತೇನೆ' ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಹಾಗೂ 'ತನ್ನ ತಂದೆ ನಿವೃತ್ತ ಕರ್ನಲ್ ಆಗಿದ್ದು, ಅವರಿಗೆ ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಪರಿಚಯವಿದೆ. ನೀವು ಏನೂ ಮಾಡಲು ಸಾಧ್ಯವಿಲ್ಲ' ಎಂದು ಬೆದರಿಕೆ ಹಾಕಿದ್ದಾರೆ ಎಂದು ಕ್ರಿಕೆಟಿಗನ ತಂದೆ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ. ನ್ಯಾಯಾಲಯದಿಂದ ಬಂದ ಆದೇಶದ ಅನುಸಾರ ಸದ್ಯ ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಚ್ಚಾವಸ್ತು ಕೊಡಿಸುವುದಾಗಿ ನಂಬಿಸಿ ಕಾಂಟ್ರಾಕ್ಟರ್​​ಗೆ ಅಪರಿಚಿತನಿಂದ 18 ಲಕ್ಷ ರೂ. ವಂಚನೆ

Last Updated : Feb 26, 2024, 11:14 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.