ETV Bharat / state

ಕೇಂದ್ರ ಸಚಿವ ಹೆಚ್​.ಡಿ.ಕೆ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್

ಲೋಕಾಯುಕ್ತ ಎಸ್​ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್‌ ನೀಡಿರುವ ದೂರಿನಡಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

FIR AGAINST UNION MINISTER
ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು (ETV Bharat)
author img

By ETV Bharat Karnataka Team

Published : 2 hours ago

Updated : 2 hours ago

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಲೋಕಾಯುಕ್ತ ಎಸ್​ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್‌ ಅವರು ನೀಡಿರುವ ದೂರಿನನ್ವಯ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ದುರುದ್ದೇಷಪೂರಿತ ಹೇಳಿಕೆಗಳನ್ನು ನೀಡಿರುವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ''ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ಕರ್ನಾಟಕ ಕೇಡರ್​​ನಲ್ಲಿ ಮುಂದುವರೆಯುತ್ತಿರುವುದಾಗಿ ಹಾಗೂ ಲಂಚ ಪಡೆಯುತ್ತಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೆ ಕುಮಾರಸ್ವಾಮಿಯವರು ನನ್ನನ್ನು ಕರ್ನಾಟಕ ಕೇಡರ್​ನಿಂದ ಅನ್ಯರಾಜ್ಯಕ್ಕೆ ವರ್ಗಾವಣೆ ಮಾಡಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದಾರೆ. ಹಾಗೂ ಅವರ ಆಪ್ತರಾದ ಸುರೇಶ್ ಬಾಬುರವರು ನನ್ನ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸುಳ್ಳು ದೂರು ನೀಡಿದ್ದಾರೆ'' ಎಂದು ತಮ್ಮ ದೂರಿನಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (ETV Bharat)

ಆಯುಕ್ತ ದಯಾನಂದ್ ಮಾಹಿತಿ: ಸಂಜಯನಗರ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮೊದಲು ಎನ್‌ಸಿಆರ್ ದಾಖಲಿಸಿಕೊಳ್ಳಲಾಗಿತ್ತು. ನ್ಯಾಯಾಲಯದ ಅನುಮತಿ ಪಡೆದು ಈಗ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.

ಪ್ರಕರಣ ಹಿನ್ನೆಲೆ; ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಡಿಜಿಪಿ ಚಂದ್ರಶೇಖರ್ ಅವರು ಪತ್ರ ಬರೆದಿದ್ದರು. ಆ ಬಳಿಕ ಕುಮಾರಸ್ವಾಮಿ ಮಾಧ್ಯಮಗೋಷ್ಟಿ ನಡೆಸಿ, ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ್ದರು.

ಸರಣಿ ಅಪರಾಧಗಳನ್ನು ಮಾಡಿರುವ ಐಪಿಎಸ್ ಅಧಿಕಾರಿಯೊಬ್ಬರು ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾರೆ. ಇವರಿಗೆ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ್ದ ಹೆಚ್​ಡಿಕೆ, ಎಡಿಜಿಪಿ ಚಂದ್ರಶೇಖರ್ ವಿರುದ್ಧ ಸರಣಿ ದಾಖಲೆಗಳ ಸಮೇತ ಆರೋಪಗಳನ್ನು ಮಾಡಿದ್ದರು. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅಂತಹ ಅಧಿಕಾರಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ತನಿಖೆ ಮಾಡಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವ ತನಿಖೆಯೂ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜಕೀಯ ಸೇಡಿಗಾಗಿ ತನಿಖೆ ನಡೆಸಲಾಗುತ್ತಿದೆ. ಅಧಿಕಾರಿಯ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದರು.

ಇದನ್ನೂ ಓದಿ:

ಎಡಿಜಿಪಿ ಚಂದ್ರಶೇಖರ್ ನನಗೆ ಹೆದರಬೇಕಿಲ್ಲ, ನಾನೂ ಅವರಿಗೆ ಹೆದರಬೇಕಿಲ್ಲ: ಕುಮಾರಸ್ವಾಮಿ

ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಪೊಲೀಸರಿಗೆ ದೂರು ನೀಡಿದ ಎಡಿಜಿಪಿ ಚಂದ್ರಶೇಖರ್

'ಆರೋಪ‌ಗಳು ಶುದ್ಧ ಸುಳ್ಳು': ಹೆಚ್​ಡಿಕೆ ಆರೋಪಕ್ಕೆ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಪತ್ರ - ADGP Chandrashekhar Letter

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.