ETV Bharat / state

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್​ಐಆರ್ ದಾಖಲು - FIR ON C T RAVI

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿರುವ ಆರೋಪದಡಿ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

c-t-ravi
ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ (ETV Bharat)
author img

By ETV Bharat Karnataka Team

Published : Dec 19, 2024, 7:18 PM IST

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಇಂದು ಎಫ್​ಐಆರ್ ದಾಖಲಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ದೂರಿನನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ; ದಾಖಲೆ ಇದ್ದರೆ ತೋರಿಸಿ ಎಂದ ಸಿ.ಟಿ.ರವಿ - OBJECTIONABLE STATEMENT ALLEGATIONS

ದೂರು, ಪ್ರತಿದೂರು ದಾಖಲು: ಸಿ.ಟಿ.ರವಿ ಅವರು ನನ್ನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಸಭಾಪತಿಗೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ನೀಡಿದರೆ, ಇದಕ್ಕೆ ಪ್ರತಿ ದೂರು ನೀಡಿರುವ ಸಿ.ಟಿ.ರವಿ, ನಾನು ಆ ರೀತಿ ಪದ ಬಳಕೆ ಮಾಡಿಲ್ಲ. ಎಲ್ಲ ಮಹಿಳೆಯರನ್ನೂ ಗೌರವದಿಂದ ಕಾಣುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಸುವರ್ಣಸೌಧದ ಕಾರಿಡಾರ್​ನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ - C T RAVI STATEMENT ROW

ETV Bharat Logo

Copyright © 2024 Ushodaya Enterprises Pvt. Ltd., All Rights Reserved.