ETV Bharat / state

ದಿನಗೂಲಿ ಕಾರ್ಮಿಕರ ಶೆಡ್‌ಗಳ ನೆಲಸಮ; ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ - MUNIRATHNA ON ATROCITY CASE

ಸೋಮವಾರ ಬೆಳಗ್ಗೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪ ಮುನಿರತ್ನ ಅವರ ವಿರುದ್ಧ ಕೇಳಿ ಬಂದಿದ್ದು, ಪ್ರಕರಣ ದಾಖಲಾಗಿದೆ.

fir-registered-against-mla-munirathna-on-atrocity-case
ಶಾಸಕ ಮುನಿರತ್ನ (ಈಟಿವಿ ಭಾರತ್​)
author img

By ETV Bharat Karnataka Team

Published : Jan 21, 2025, 5:15 PM IST

Updated : Jan 21, 2025, 6:02 PM IST

ಬೆಂಗಳೂರು: ಯಾವುದೇ ತಿಳಿವಳಿಕೆ ನೀಡದೇ ದಿನಗೂಲಿ ನೌಕರರ ಶೆಡ್‌ಗಳನ್ನ ನೆಲಸಮಗೊಳಿಸಿ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

ಸೋಮವಾರ (ಜ.20) ಬೆಳಗ್ಗೆ 11ಕ್ಕೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪ ಮುನಿರತ್ನ ಅವರ ವಿರುದ್ಧ ಕೇಳಿ ಬಂದಿದ್ದು, ಶಾಸಕರು ಸೇರಿದಂತೆ ಏಳು ಜನರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಶೆಡ್‌ಗಳನ್ನ ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಏಕಾಏಕಿ ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿಯೊಂದಿಗೆ ಬಂದು ಶೆಡ್‌ಗಳನ್ನ ನೆಲಸಮಗೊಳಿಸಿದರು. ಇದರಿಂದಾಗಿ ನಾವು ಕೂಡಿಟ್ಟ ಹಣ, ಚಿನ್ನ ಮಣ್ಣುಪಾಲು ಮಾಡಿದ್ದಾರೆ. ತಾವು ಮನವಿ ಮಡಿದರೂ ಸಹ ಜಾತಿ ನಿಂದನೆ ಮಾಡಿ, ಮಹಿಳೆಯರಿಗೆ ಚಪ್ಪಲಿ ಕಾಲಿನಿಂದ ಒದ್ದು ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ ಎಂದು ಎಫ್​ಐಆರ್​ನಲ್ಲಿ ತಿಳಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (ETV Bharat)

ಶೆಡ್‌ನಲ್ಲಿ ವಾಸವಿದ್ದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಶಾಸಕ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಕಾಯ್ದೆ (ದೌರ್ಜನ್ಯ ತಡೆ) ಕಾಯ್ದೆ, ಬಿಎನ್​ಎಸ್​ 324, 74, 351 ಮತ್ತು 190 ಅಡಿ ಪ್ರಕರಣ ದಾಖಲಿಸಲಾಗಿದೆ

ಇದನ್ನೂ ಓದಿ: ನಟ ದರ್ಶನ್ ಬಳಿಯ ಗನ್ ಲೈಸೆನ್ಸ್ ತಾತ್ಕಾಲಿಕ ಅಮಾನತು

ಇದನ್ನೂ ಓದಿ: ಹಾಲ್ ಮಾರ್ಕ್ ಸೀಲ್ ಹಾಕಲು ನೀಡಿದ್ದ ಶ್ರೀ ಸಾಯಿಗೋಲ್ಡ್ ಪ್ಯಾಲೇಸ್‌ನ ಚಿನ್ನಾಭರಣ ಕಳವು ; ಪ್ರಕರಣ ದಾಖಲು

Last Updated : Jan 21, 2025, 6:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.