ETV Bharat / state

ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿ: ಎಫ್ಐಆರ್ ದಾಖಲು - Fake Facebook Account - FAKE FACEBOOK ACCOUNT

ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿರುವ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

fake-facebook-account-in-yathindra-siddaramaiah-name
ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿ: ಎಫ್ಐಆರ್ ದಾಖಲು
author img

By ETV Bharat Karnataka Team

Published : Apr 15, 2024, 3:41 PM IST

ಬೆಂಗಳೂರು: 'ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗ' ಎಂಬ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ, ಕಾಂಗ್ರೆಸ್ ನಾಯಕರನ್ನು ಅಶ್ಲೀಲವಾಗಿ ನಿಂದಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಯಶವಂತಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಎಸ್.ಗೌಡ ಎಂಬವರು ನೀಡಿರುವ ದೂರಿನ ಮೇರೆಗೆ ಜಾಲಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ನಕಲಿ ಫೇಸ್‌ಬುಕ್‌ ಖಾತೆ ಮೂಲಕ ಕಿಡಿಗೇಡಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್​ ಹಾಕುತ್ತಿದ್ದಾರೆ. ಆದ್ದರಿಂದ ನಕಲಿ ಪೇಜ್ ಸೃಷ್ಟಿಕರ್ತರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಕಲಿ ಫೇಸ್‌ಬುಕ್‌ ಖಾತೆಯನ್ನು ಡಿಲೀಟ್ ಮಾಡಿಸಿದ್ದಾರೆ. ಆರೋಪಿಗಳ ಪತ್ತೆಗೆ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ನಕಲಿ ಕೀ ಬಳಸಿ ಪಕ್ಕದ ಮನೆಯಿಂದ ನಗದು, ಚಿನ್ನ ಕಳ್ಳತನ; ಕದ್ದ ಮಾಲಿನಲ್ಲಿ ದೇವರಿಗೂ ಪಾಲು! - Bengaluru Theft Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.