ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು, ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಗಳೂರು ದಕ್ಷಿಣ ಜಿಲ್ಲೆ ಮತ್ತು ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಸಮನ್ವಯ ಸಮಿತಿಯ ಮೊದಲನೇ ಸಭೆ ನಡೆಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಎರಡೂ ಪಕ್ಷಗಳ ನಾಯಕರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೊಂದಾಣಿಕೆ ಮಾಡಿಕೊಂಡು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರನ್ನು ಅತ್ಯಂತ ಹೆಚ್ಚಿನ ಮತಗಳಿಂದ ಗೆಲ್ಲಿಸುವುದಾಗಿ ಆಶ್ವಾಸನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ದೇಶದ ಪ್ರಧಾನ ಮಂತ್ರಿ ಮಾಡುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸವನ್ನು ಮಾಡಬೇಕೆಂದು ತೇಜಸ್ವಿ ಸೂರ್ಯ ಕಾರ್ಯಕರ್ತರಿಗೆ ಕರೆ ಕೊಟ್ಟರು.
ಸಭೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ, ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷ ಹಾಗೂ ಜಯನಗರ ಕ್ಷೇತ್ರದ ಶಾಸಕ ಸಿ.ಕೆ. ರಾಮಮೂರ್ತಿ, ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಜೆಡಿಎಸ್ ವಕ್ತಾರರಾದ ಗಂಗಾಧರ ಮೂರ್ತಿ ಮತ್ತು ದೇವರಾಜ ಮತ್ತು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಕ್ತಾರ ಟಿ. ಎಸ್ ಸಂಕೀರ್ತ, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ: ಜನರ ಒತ್ತಾಯದ ಮೇರೆಗೆ ಮಂಡ್ಯದಿಂದ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧೆ: ಹೆಚ್.ಡಿ ದೇವೇಗೌಡ - HD Devegowda