ETV Bharat / state

ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳ ಅಭಿವೃದ್ಧಿಗೆ ಈ ಬಾರಿಯ ಬಜೆಟ್​ನಲ್ಲಿ 900 ಕೋಟಿ ರೂಪಾಯಿ ಮೌಲ್ಯದ ಯೋಜನೆಯನ್ನು ಘೋಷಣೆ ಮಾಡಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ತಿಳಿಸಿದ್ದಾರೆ.

DCM D K Shivakumar
ಡಿಸಿಎಂ ಡಿ ಕೆ ಶಿವಕುಮಾರ್​
author img

By ETV Bharat Karnataka Team

Published : Feb 14, 2024, 2:39 PM IST

ಡಿಸಿಎಂ ಡಿ ಕೆ ಶಿವಕುಮಾರ್​

ಬೆಂಗಳೂರು: "ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಉದ್ಧಟತನ ಹೆಚ್ಚುತ್ತಿದ್ದು, ಬೆಳಗಾವಿ ಬಳಿ ಕಚೇರಿ ತೆರೆಯಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. "ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಸೇವಿಸುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್​ನಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗೆ ನೀರನ್ನು ಒದಗಿಸಲು 900 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ" ಎಂದರು.

ಲೋಕಸಭಾ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, "ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ. ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಹೈಕಮಾಂಡ್​ಗೆ ಪಟ್ಟಿಯನ್ನು ಕಳುಹಿಸಿಕೊಡಲಾಗುವುದು" ಎಂದು ತಿಳಿಸಿದರು.

ರಾಜ್ಯಸಭೆಗೆ ರಾಜ್ಯದಿಂದ ಹೆಸರು ಸೂಚಿಸಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯಿಸಿ, "ರಾಜ್ಯಸಭೆಗೆ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ" ಎಂದರು.

"40 ಪರ್ಸೆಂಟ್ ಕಮಿಷನ್ ವಿಚಾರವಾಗಿ ತನಿಖೆ ನಿಧಾನಗತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಅಭಿಪ್ರಾಯವನ್ನು ಗೌರವಿಸುತ್ತೇವೆ. ನಾವು ತನಿಖೆಯನ್ನು ಸಮಿತಿಗೆ ನೀಡಿದ್ದು, ಅವರ ಕರ್ತವ್ಯ ಅವರು ಮಾಡುತ್ತಾರೆ" ಎಂದು ಡಿಸಿಎಂ ಹೇಳಿದರು.

ಇದನ್ನೂ ಓದಿ: ಲೋಕಾಯುಕ್ತದಲ್ಲಿ ಎಫ್ಐಆರ್: 'ಕಾನೂನು ಹೋರಾಟ ಮುಂದುವರಿಸುವೆ'- ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.