ETV Bharat / state

ದೇಶದಲ್ಲೇ ಪ್ರಪ್ರಥಮ ಬಾರಿಗೆ ಸರ್ಕಾರಿ ಮಾಂಟೆಸ್ಸರಿಗೆ ಚಾಲನೆ ನೀಡಿದ ಸರ್ಕಾರ: LKG-UKG ಬಗ್ಗೆ ಸಚಿವೆ ಹೆಬ್ಬಾಳ್ಕರ್ ಹೇಳಿದ್ದಿಷ್ಟು! - Government Montessori

ನಮ್ಮ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲು ಸರ್ಕಾರ ಮುಂದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Minister Lakshmi Hebbalkar
ಮಕ್ಕಳಿಗೆ ಬ್ಯಾಗ್ ವಿತರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)
author img

By ETV Bharat Karnataka Team

Published : Jul 22, 2024, 10:47 PM IST

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)

ಬೆಂಗಳೂರು : ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ ಎಲ್ಲ ವರ್ಗದ ಮಕ್ಕಳಿಗೂ ದೊರೆಯಬೇಕೆಂಬ ಆಶಯದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Lakshmi Hebbalkar
ಸರ್ಕಾರಿ ಮಾಂಟೆಸ್ಸರಿ- ಪೂರ್ವ ಪ್ರಾಥಮಿಕ ಕೇಂದ್ರ (ETV Bharat)

ನಗರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟೆಗಾರಪಾಳ್ಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ - ಪೂರ್ವ ಪ್ರಾಥಮಿಕ ಕೇಂದ್ರ (ಎಲ್​ಕೆಜಿ, ಯುಕೆಜಿ ತರಗತಿ)ಗಳಿಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ’’ನಮ್ಮ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಮಕ್ಕಳ ಆರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ- ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

Minister Lakshmi Hebbalkar
ಮಕ್ಕಳಿಗೆ ಬ್ಯಾಗ್ ವಿತರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (ETV Bharat)

1975ರಲ್ಲಿ ಆರಂಭವಾಗಿದ್ದವು ಅಂಗನವಾಡಿಗಳು: 49 ವರ್ಷಗಳ ಹಿಂದೆ 1975ರಲ್ಲಿ, ನಮ್ಮ ದೇಶದ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ಅವರು ಕರ್ನಾಟಕದಲ್ಲಿ ಮೊದಲ ಬಾರಿಗೆ ಅಂಗನವಾಡಿಯನ್ನು ಆರಂಭಿಸಿದರು. ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಮೊದಲ ಅಂಗನವಾಡಿ ಆರಂಭಗೊಂಡಿತ್ತು. ಆಗ ಆರಂಭಿಕವಾಗಿ 100 ಅಂಗನವಾಡಿ ಕೇಂದ್ರಗಳನ್ನು ರಾಜ್ಯದೆಲ್ಲೆಡೆ ತೆರೆಯಲಾಯಿತು. ಈಗ ರಾಜ್ಯಾದ್ಯಂತ 70 ಸಾವಿರ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲೆ ಮೊಟ್ಟ ಮೊದಲು ಬಾರಿಗೆ ಅಂಗನವಾಡಿ ಆರಂಭವಾಗಿದ್ದು ಕರ್ನಾಟಕದಲ್ಲಿ, ಪೂರ್ವ ಪ್ರಾಥಮಿಕ ಶಾಲೆ ಆರಂಭವಾಗುತ್ತಿರುವುದೂ ಕರ್ನಾಟಕದಲ್ಲೇ. ಇದು ನಮ್ಮ ರಾಜ್ಯದ ಹೆಗ್ಗಳಿಕೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

Minister Lakshmi Hebbalkar
ಸರ್ಕಾರಿ ಮಾಂಟೆಸ್ಸರಿ- ಪೂರ್ವ ಪ್ರಾಥಮಿಕ ಕೇಂದ್ರದ ಉದ್ಘಾಟನೆ (ETV Bharat)

ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಆರಂಭಿಸುವ ಯೋಜನೆ ಇತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸಿದರು. ಶಿಕ್ಷಣ ಇಲಾಖೆ ಎಲ್​ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿಯಿಂದ ಮಕ್ಕಳು ದೂರವಾಗುತ್ತಾರೆ. ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ಆರಂಭಿಸಬೇಕು ಎಂದು ಒತ್ತಾಯಿಸಿದ್ದರು. ಕಾರ್ಯಕರ್ತೆಯರ ಒತ್ತಡದ ಹಿನ್ನೆಲೆ ಅಂಗನವಾಡಿಯಲ್ಲೇ ಎಲ್​ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದು ಹೇಳಿದರು.

ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭ: ಕಳೆದ 49 ವರ್ಷಗಳಿಂದ ಚಾಲ್ತಿಯಲ್ಲಿರುವ ಅಂಗನವಾಡಿ ಹೆಸರನ್ನೂ ಕೂಡ ಬದಲಾಯಿಸಿ, ಈಗ ಇವುಗಳಿಗೆ ಸರ್ಕಾರಿ ಮಾಂಟೆಸ್ಸರಿ ಎಂದು ಹೆಸರು ಇಡಲಾಗಿದೆ. ಸಮಾಜದಲ್ಲಿ ಕೂಲಿ ಕೆಲಸ ಮಾಡುವವರಿಂದ ಹಿಡಿದು ದೊಡ್ಡ ದೊಡ್ಡ ವ್ಯಕ್ತಿಗಳಿಗೂ ಮಕ್ಕಳಿಗೆ ಒಳ್ಳೆಯ ಗುಣಾತ್ಮಕ ಶಿಕ್ಷಣ ಕೊಡಿಸಬೇಕೆಂಬ ಆಸೆ ಇರುತ್ತದೆ. ಆದರೆ, ಅದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಹಾಗಾಗಿ, ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಸದುದ್ದೇಶದಿಂದ ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

80ಸಾವಿರದಿಂದ 1ಲಕ್ಷ ಫೀಸ್​ ಹೊರೆ ತಪ್ಪಿಸಲು ಸರ್ಕಾರದಿಂದ ಕ್ರಮ: ಇತ್ತೀಚೆಗೆ ಖಾಸಗಿ ಮಾಂಟೆಸ್ಸರಿಗೆ ವರ್ಷಕ್ಕೆ 80 ರಿಂದ 1 ಲಕ್ಷ ರೂಪಾಯಿವರೆಗೆ ಹಣ ನೀಡಬೇಕಾದ ಪರಿಸ್ಥಿತಿ ಇದೆ. ಅಷ್ಟೊಂದು ದುಬಾರಿ ಹಣವನ್ನು ಕೊಟ್ಟು ಜನಸಾಮಾನ್ಯರು ತಮ್ಮ ಮಕ್ಕಳನ್ನು ಮಾಂಟೆಸ್ಸರಿಗಳಿಗೆ ಕಳುಹಿಸಲು ಸಾಧ್ಯವಿಲ್ಲ. ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕಲು, ಗುಣಮಟ್ಟದ ಶಿಕ್ಷಣ ಮತ್ತು ಪೌಷ್ಠಿಕ ಆಹಾರ ಪ್ರತಿ ಮಗುವಿಗೂ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಆಶಯ. ಹಾಗಾಗಿ ಉಚಿತವಾಗಿ ಮಾಂಟೆಸ್ಸರಿ ತರಗತಿಗಳನ್ನು ತೆರೆಯಲಾಗಿದೆ.

ಕನ್ನಡ- ಇಂಗ್ಲಿಷ್​ ಮಾಧ್ಯಮಗಳಲ್ಲಿ ಶಿಕ್ಷಣ: ಸರ್ಕಾರಿ ಮಾಂಟೆಸ್ಸರಿಗಳಲ್ಲಿ ಕನ್ನಡ, ಇಂಗ್ಲೀಷ್ ಎರಡೂ ಮಾಧ್ಯಮಗಳಲ್ಲೂ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ 1 ಜೊತೆ ಯೂನಿಫಾರಂ, 1 ಬ್ಯಾಗ್ ಮತ್ತು ಪೆನ್ಸಿಲ್ ಬಾಕ್ಸ್ ನೀಡಲಾಗುವುದು. ಮಕ್ಕಳ ಮುಂದಿನ ಶೈಕ್ಷಣಿಕ ಮುನ್ನಡೆಗೆ ಸಹಾಯವಾಗಲು ಇಲ್ಲೇ ಟಿಸಿ ಕೂಡ ನೀಡಲಾಗುವುದು. ಈ ಮಾಂಟೆಸ್ಸರಿಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಈಗಾಗಲೇ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧನೆ ಮಾಡಲು ಗುರುತಿಸಲಾಗಿದೆ.

250 ಅಂಗನವಾಡಿಗಳಲ್ಲಿ ಪ್ರಾಯೋಗಿಕವಾಗಿ ಆರಂಭ: ಸರ್ಕಾರಿ ಮಾಂಟೆಸ್ಸರಿಗಳನ್ನು ಈಗ ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಲಾಗುತ್ತಿದೆ. ರಾಜ್ಯಾದ್ಯಂತ ಮೊದಲ ಹಂತದಲ್ಲಿ 5 ಸಾವಿರ ಸರ್ಕಾರಿ ಮಾಂಟೆಸ್ಸರಿಗಳನ್ನು ತೆರೆಯಲು ಇಲಾಖೆ ಸನ್ನದ್ಧವಾಗಿದೆ. ಹಂತ ಹಂತವಾಗಿ ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಕಳಪೆ ಆಹಾರದ ಬಗ್ಗೆ ಸಚಿವರ ಖಡಕ್ ಎಚ್ಚರಿಕೆ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾದರೆ ಆಯಾಯ ಡಿಡಿ, ಸಿಡಿಪಿಓಗಳನ್ನು ಸಸ್ಪೆಂಡ್ ಮಾಡಲಾಗುವುದು. ಮಕ್ಕಳ ಭವಿಷ್ಯಕ್ಕೆ ನಮ್ಮ ಸರ್ಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ನಮ್ಮ ಇಲಾಖೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ಕೃಷ್ಟವಾದ ಯೋಜನೆಗಳನ್ನು ಜನರಿಗೆ ನೀಡಲಿದೆ. ಇದಕ್ಕೆ ತಕ್ಕಂತೆ ಅಂಗನವಾಡಿ ಕಾರ್ಯಕರ್ತೆಯರು ಕೌಶಲ್ಯ ಹೆಚ್ಚಿಸಿಕೊಂಡು, ಗುಣಮಟ್ಟದ ಶಿಕ್ಷಣ ನೀಡಲು ಸನ್ನದ್ದರಾಗಬೇಕು. ಅಂಗನವಾಡಿಗೆ ಬರುವ ಮಕ್ಕಳನ್ನು ಸ್ವಂತ ಮಕ್ಕಳಂತೆ ಬೆಳೆಸಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಜಿ. ಸಿ ಪ್ರಕಾಶ್, ನಿರ್ದೇಶಕ ಎನ್. ಸಿದ್ದೇಶ್ವರ್, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಜಂಟಿ ನಿರ್ದೇಶಕ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ. ಹೆಚ್ ನಿಶ್ಚಲ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.