ETV Bharat / state

ಬೆಂಗಳೂರು: 5 ವರ್ಷದಿಂದ ವೃದ್ಧನ ಹೊಟ್ಟೆಯಲ್ಲಿದ್ದ 2 ಸೆಂ.ಮೀ ಮೀನಿನ ಮುಳ್ಳು ಹೊರತೆಗೆದ ವೈದ್ಯರು - SUCCESSFUL SURGERY

ಐದು ವರ್ಷದಿಂದ ವೃದ್ಧನ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಮೀನಿನ ಮುಳ್ಳನ್ನು ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆಯುವ ಮೂಲಕ ಆತನಿಗೆ ಪುನರ್ಜನ್ಮ ನೀಡಿದೆ.

SUCCESSFUL SURGERY
ವ್ಯಕ್ತಿಯ ಹೊಟ್ಟೆಯಲ್ಲಿದ್ದ 2 ಸೆಂ.ಮೀ ಮೀನಿನ ಮುಳ್ಳು (ETV Bharat)
author img

By ETV Bharat Karnataka Team

Published : Oct 28, 2024, 6:45 PM IST

ಬೆಂಗಳೂರು: ಕಳೆದ ಐದು ವರ್ಷಗಳಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವೃದ್ಧನ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮುಳ್ಳನ್ನು ನಗರದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿಯೊಬ್ಬರು ಐದು ವರ್ಷದ ಹಿಂದೆ ಮೀನು ಸೇವಿಸಿದಾಗ ಗಂಟಲಿನಲ್ಲಿ ಮೀನಿನ ಮುಳ್ಳು ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೂಲಕ ಒಂದು ಮುಳ್ಳು ತೆಗೆಸಿಕೊಂಡಿದ್ದರು. ಮತ್ತೊಂದು ಮುಳ್ಳು ಇರುವುದು ಅವರಿಗೆ ಆಗ ತಿಳಿದಿರಲಿಲ್ಲ. ಸಂಪೂರ್ಣ ಮುಳ್ಳು ತೆಗೆಯದ ಕಾರಣ 2 ಸೆಂ.ಮೀ ಉದ್ದದ ಮೀನಿನ ಮುಳ್ಳು ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿರಲಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾದರೂ ಈ ಮುಳ್ಳು ಕಾಣಿಸಿಕೊಂಡಿರಲಿಲ್ಲ. ಈ ಮುಳ್ಳಿನಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿತ್ತು. ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚಿಗೆ ರೋಗಿಯ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಮುಳ್ಳು ಇರುವುದು ಕಂಡು ಬಂದಿತು. ಈಗ ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮುಳ್ಳನ್ನು ತೆಗೆದು ಹಾಕಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಶಸ್ತ್ರಚಿಕಿತ್ಸೆಯ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ಸಹ ತಿಳಿದು ಬಂದಿದೆ. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ಡಾ. ಪ್ರಣವ್ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ವ್ಯಕ್ತಿಯ ಕರುಳಿನಲ್ಲಿದ್ದ ಜೀವಂತ ಜಿರಳೆ ಹೊರತೆಗೆದ ವೈದ್ಯರು: ಜಂತು ಹೊಟ್ಟೆ ಹೊಕ್ಕಿದ್ದೇ ಅಚ್ಚರಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.