ETV Bharat / state

ಶಕ್ತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ - GUARANTEE SCHEMES

ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Oct 31, 2024, 5:14 PM IST

ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಅವರು, ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳ ಸಿಬ್ಬಂದಿ, ಎಂಎನ್​​ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್​​ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ. ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ. ಜನರಿಗೆ ಈ ಸೌಲಭ್ಯ ಮುಂದುವರಿಯಲಿದೆ. ಬೆಲೆ ಏರಿಕೆ ಸಮಸ್ಯೆ ನಿವಾರಿಸಿ ಜನರ ಬದುಕಿನಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಜನ ನಮಗೆ ಆಶೀರ್ವಾದ ಮಾಡುತ್ತಾರೆ. ಈಗಿನ ಅವಧಿ ಜತೆಗೆ ಮುಂದಿನ ಐದು ವರ್ಷದ ಅವಧಿಯೂ ಸೇರಿ ಒಟ್ಟು ಎಂಟೂವರೆ ವರ್ಷ ಈ ಯೋಜನೆ ಮುಂದುವರಿಯಲಿದೆ ಎಂದು ಹೇಳಿದರು.

ಯಾರಿಗೆ ಬೇಕೋ ಅವರು ಟಿಕೆಟ್ ಖರೀದಿ ಮಾಡಿ ಪ್ರಯಾಣ ಮಾಡಬಹುದಲ್ಲವೇ? ಪರಿಷ್ಕರಣೆ ಯಾಕೆ ಎಂದು ಕೇಳಿದಾಗ, ಆ ರೀತಿ ಮಾಡಲು ಸಾರಿಗೆ ಸಿಬ್ಬಂದಿಗೆ ಸರ್ಕಾರ ಅನುಮತಿ ನೀಡಬೇಕಲ್ಲವೇ? ಇಲ್ಲದಿದ್ದರೆ ಕಂಡಕ್ಟರ್​ಗಳು ಮಹಿಳೆಯರಿಂದ ಹಣ ಪಡೆಯಲು ಹಿಂಜರಿಯುತ್ತಾರೆ. ನಾಳೆ ನೀವೇ ಹೇಳಬಹುದು, ಮಹಿಳೆಯರಿಂದ ಬಲವಂತವಾಗಿ ಹಣ ಕೀಳುತ್ತಿದ್ದಾರೆ ಎಂದು. ಹೀಗಾಗಿ ಕೆಲವು ಮಹಿಳಾ ಪ್ರಯಾಣಿಕರು ನೀಡಿರುವ ಸಲಹೆ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ಈ ವಿಚಾರದಲ್ಲಿ ಯಾವುದೇ ಆತುರವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಅಸೂಯೆಯಿಂದ ಕುಮಾರಸ್ವಾಮಿ ಟೀಕೆ: ಈ ಗ್ಯಾರಂಟಿ ಯೋಜನೆಗಳನ್ನು ಕಂಡು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್​​ನವರು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದಾರೆ. ನಿಮ್ಮ ಅಧಿಕಾರ ಅವಧಿಯಲ್ಲಿ ಇಂತಹ ಒಂದು ಯೋಜನೆ ಕೊಟ್ಟಿಲ್ಲ, ಬಡವರಿಗೆ ನಿವೇಶನ ಕೊಟ್ಟಿಲ್ಲ, ಊರು ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಯಾಕೆ ಮತ ಕೇಳುತ್ತೀರಿ ಎಂದು ಜನ ಅವರನ್ನು ಧಿಕ್ಕರಿಸುತ್ತಿದ್ದಾರೆ. ಅದನ್ನು ಸಹಿಸಲಾಗದೆ ನನಗೆ ಈ ಅವಕಾಶ ಸಿಗಲಿಲ್ಲವಲ್ಲ ಎಂದು ಕುಮಾರಸ್ವಾಮಿ ಅಸೂಯೆಯಿಂದ ತಮ್ಮ ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಇನ್ನೂ ಎಂಟೂವರೆ ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ: ಆರು ತಿಂಗಳ ಒಳಗಾಗಿ ರಾಜ್ಯಪಾಲರ ಆಡಳಿತ ಬರಲಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ನಮ್ಮ ಸರ್ಕಾರ ಬೀಳಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಆದರೆ ಅದು ಅವರ ಹಣೆಯಲ್ಲಿ ಬರೆದಿಲ್ಲ. ಈ ವಿಶೇಷವಾದ ದಿನ ನೀವು ಬರೆದಿಟ್ಟುಕೊಳ್ಳಿ, ಮುಂದಿನ ಎಂಟೂವರೆ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಅಭಿವೃದ್ಧಿ ಹಾಗೂ ರಸ್ತೆ ವಿಚಾರವಾಗಿ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಜತೆಗಿನ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿ, ನಾನು ಚರ್ಚೆ ಮಾಡಿದ್ದೇನೆ, ಅಧಿಕಾರಿಗಳಿಗೂ ಅವರ ಜತೆ ಚರ್ಚೆ ಮಾಡುವಂತೆ ತಿಳಿಸಿದ್ದೆ. ಅವರು ಅನೇಕ ಸಲಹೆ ನೀಡಿದ್ದಾರೆ. ಕೆಲವು ಸಲಹೆ ಅತ್ಯುತ್ತಮವಾಗಿದ್ದು, ಅವುಗಳನ್ನು ನಾವು ಸ್ವೀಕರಿಸುತ್ತೇವೆ. ಅವರು ತಮ್ಮದೇ ಆದ ವರದಿ ಸಿದ್ಧಪಡಿಸಿಕೊಂಡು ನೀಡಿದ್ದಾರೆ ಎಂದು ತಿಳಿಸಿದರು.

ಒಂದೊಂದು ದಿನ ಜಂಟಿ ಪ್ರಚಾರ: ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಈಗಾಗಲೇ 25 ಬಾರಿ ಹೋಗಿ ಬಂದಿದ್ದೇವೆ. ನಾವು ಒಂದೊಂದು ದಿನ ಮಾತ್ರ ಜಂಟಿ ಪ್ರಚಾರ ಮಾಡುತ್ತೇವೆ. ಇತರ ದಿನಗಳಲ್ಲಿ ನಮ್ಮ ನಾಯಕರು ಪ್ರಚಾರ ಮಾಡುತ್ತಾರೆ ಎಂದರು.

ಬಿಜೆಪಿಗೆ ರಾಜಕೀಯ ಮಾಡಲು ಬೇರೆ ವಿಚಾರ ಇಲ್ಲ: ನಮ್ಮ ಸರ್ಕಾರದ ವಿರುದ್ಧ ಟೀಕೆ ಮಾಡಲು ಬಿಜೆಪಿಯವರ ಬಳಿ ವಿಚಾರಗಳಿಲ್ಲ. ಹೀಗಾಗಿ ವಕ್ಫ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಕಾಲದಲ್ಲೇ ಮೊದಲು ನೋಟಿಸ್​ ನೀಡಲಾಗಿದೆ. ಕೋಮು ಗಲಭೆ ಸೃಷ್ಟಿಸಿ, ದೇಶ ಹಾಗೂ ರಾಜ್ಯ ಒಡೆಯಬೇಕು ಎಂಬುದು ಅವರ ಉದ್ದೇಶ ಎಂದು ದೂರಿದರು.

ಪ್ರಿಯಾಂಕಾ ಗಾಂಧಿ ಕೂಡ ವಯನಾಡಿಗೆ ವಲಸಿಗರು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ಕುಮಾರಸ್ವಾಮಿ ಅವರಾಗಲಿ, ಅವರ ಕುಟುಂಬದವರಾಗಲಿ ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ. ಗಾಂಧಿ ಕುಟುಂಬ ದೇಶವನ್ನು ಒಂದಾಗಿ ಇಟ್ಟಿದೆ. ಆ ಕುಟುಂಬದ ಕೊಡುಗೆಯನ್ನು ಸರಿದೂಗಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ದಕ್ಷಿಣ ಭಾರತವನ್ನು ಪ್ರತಿನಿಧಿಸಿದ್ದರು ಎಂದು ತಿಳಿಸಿದರು.

ಇದನ್ನೂ ಓದಿ: ದ್ವೇಷ ಬಿಟ್ಟು ಒಗ್ಗಟ್ಟಾಗಿದ್ದರೆ ನಿಮ್ಮ ಮೇಲೆ ಯಾರೂ ಕೈ ಎತ್ತಲ್ಲ: ರಾಜ್ಯ ನಾಯಕರಿಗೆ ಖರ್ಗೆ ಬುದ್ಧಿ ಮಾತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.