ETV Bharat / state

ಮಧುಗಿರಿ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಐವರು ಸಾವು - Tumakuru Accident

ಎರಡು ಕಾರುಗಳ ನಡುವಿನ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಮಧುಗಿರಿಯಲ್ಲಿ ಸಂಭವಿಸಿದೆ.

car accident
ಅಪಘಾತಕ್ಕೀಡಾದ ಕಾರುಗಳು (ETV Bharat)
author img

By ETV Bharat Karnataka Team

Published : Sep 8, 2024, 9:31 PM IST

ತುಮಕೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹಾಗೂ ಕಾಟಗಾನಹಟ್ಟಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.

ಘಟನೆಯಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಅಲ್ಲದೆ, ಮಹಿಳೆ ಮತ್ತು ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಇದರಲ್ಲಿ, ಯೋಗೇಶ್ ಪುತ್ರ ಸಿಂಧು (12) ಎಂಬ ಬಾಲಕನ ಗುರುತು ಮಾತ್ರ ಪತ್ತೆಯಾಗಿದೆ.

ಮಾರುತಿ ಸಿಯಾಜ್ ಕಾರು ತುಮಕೂರು ಕಡೆಯಿಂದ ಬರುತ್ತಿದ್ದರೆ, ಟಾಟಾ ಟಿಯಾಗೋ ಮಧುಗಿರಿ ಕಡೆಯಿಂದ ತುಮಕೂರು ಕಡೆ ಹೋಗುತ್ತಿತ್ತು. ಸಿಯಾಜ್ ಕಾರಿನಲ್ಲಿ ಯೋಗೇಶ್ ಎಂಬವರ ಕುಟುಂಬಸ್ಥರು, ಊರಿನಲ್ಲಿ ಹಬ್ಬ ಮುಗಿಸಿಕೊಂಡು ವೈ‌.ಎನ್. ಹೊಸಕೋಟೆ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದರು. ಈ ಕುಟುಂಬ ಬೆಂಗಳೂರಿನ ಜೆ.ಪಿ. ನಗರದಲ್ಲಿ ವಾಸವಾಗಿತ್ತು.

ಇದನ್ನೂ ಓದಿ: ದಾವಣಗೆರೆ: ಡಿವೈಡರ್​ಗೆ ಡಿಕ್ಕಿ ಹೊಡೆದು ಖಾಸಗಿ‌ ಬಸ್ ಪಲ್ಟಿ, 14 ಪ್ರಯಾಣಿಕರಿಗೆ ಗಾಯ - Private bus accident

ಡಿಕ್ಕಿ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಟಿಯಾಗೋ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುಮಕೂರು ಎಸ್​​ಪಿ ಅಶೋಕ್ ಕೆ.ವಿ. ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಸ್ತೆಬದಿ ಮೂತ್ರ ವಿಸರ್ಜನೆಗೆ ತೆರಳಿದಾಗ ಬಸ್ ಹರಿದು ಬಾಲಕ ಸಾವು​ - Bus Ran Over Boy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.