ETV Bharat / state

ಕ್ಯಾಂಟರ್ ಅಡ್ಡಗಟ್ಟಿ ₹32 ಲಕ್ಷ ದರೋಡೆ ಪ್ರಕರಣ: ಐವರ ಬಂಧನ, ₹31 ಲಕ್ಷ ರಿಕವರಿ - robbery case

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ಹಣ ದೋಚಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿಜಯಪುರ ಎಸ್​ಪಿ ರಿಷಿಕೇಶ್‌ ಸೋನವಾಣೆ ತಿಳಿಸಿದ್ದಾರೆ.

ದರೋಡೆ ಪ್ರಕರಣ
ದರೋಡೆ ಪ್ರಕರಣ (ETV Bharat)
author img

By ETV Bharat Karnataka Team

Published : May 22, 2024, 10:23 PM IST

Updated : May 22, 2024, 10:42 PM IST

ಎಸ್​ಪಿ ರಿಷಿಕೇಶ್‌ ಸೋನವಾಣೆ (ETV Bharat)

ವಿಜಯಪುರ: ಕ್ಯಾಂಟರ್ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿ 32 ಲಕ್ಷ ರೂ. ಹಣ ದೋಚಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಿಷಿಕೇಶ್‌ ಸೋನವಾಣೆ ತಿಳಿಸಿದರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕ್ಯಾಂಟರ್​ ಚಾಲಕ ಮಹಾಂತೇಶ ತಳವಾರ ಸೇರಿದಂತೆ ಧರೇಶ ದಳವಾಯಿ, ಶಿವಪ್ಪ ಮಾಶ್ಯಾಳ, ಸುನೀಲ ವಡ್ಡರ, ಶಿವಾನಂದ ದಳವಾಯಿ ಎಂಬವರನ್ನು ಬಂಧಿಸಲಾಗಿದೆ.

ಎಸ್​ಪಿ ರಿಷಿಕೇಶ್‌ ಸೋನವಾಣೆ ಮಾತನಾಡಿ, ಮೇ.17 ರಂದು ಜೇವರ್ಗಿಯ ಚಂದ್ರಕಾಂತ ಗುರುಪಾದಪ್ಪ ಕುಂಬಾರ ಇವರಿಗೆ ಸಂಬಂಧಿಸಿದ ಹತ್ತಿಯನ್ನು ಧಾರವಾಡ ಜಿಲ್ಲೆಯ ಅಮೀನಬಾವಿಯಲ್ಲಿರುವ ಅನೀಲಕುಮಾರ ಕಂಪನಿಗೆ ಮಾರಾಟ ಮಾಡಿ 32,29,364 ರೂಪಾಯಿ ಹಣ ತೆಗೆದುಕೊಂಡು ಕ್ಯಾಂಟರ್ ಚಾಲಕ ಮಹಾಂತೇಶ ವಾಪಸ್ ಬರುತ್ತಿದ್ದನು. ಈತನನ್ನು ಬೆನ್ನಟ್ಟಿ ಬಂದಿದ್ದ ಆರೋಪಿಗಳು ಕೊಲ್ಹಾರ ಪಟ್ಟಣದ ಉಪ್ಪಲದಿನ್ನಿ ಕ್ರಾಸ್ ಬಳಿ ಕ್ಯಾಂಟರ್ ಅಡ್ಡಗಟ್ಟಿ ದರೋಡೆ ನಡೆಸಿದ್ದರು. ಕೃತ್ಯದಲ್ಲಿ ಶಾಮೀಲಾಗಿದ್ದ ಕ್ಯಾಂಟರ್​ ಚಾಲಕ ಸೇರಿ ಐವರನ್ನು ಬಂಧಿಸಲಾಗಿದೆ. ಸುಲಿಗೆಯಾದ ಹಣದ ಪೈಕಿ 31,04,364 ರೂ ಹಣ ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಖೊಟ್ಟಿ ದಾಖಲೆ ಸೃಷ್ಟಿ, 6 ಆರೋಪಿಗಳ ಬಂಧನ: ಖೊಟ್ಟಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸಿದ ಪ್ರಕರಣ ಸಂಬಂಧ 6 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಬಾನಗರ ನಿವಾಸಿ ಸಾಹೇಬಗೌಡ ಮಲ್ಲನಗೌಡ ರುದ್ರಗೌಡರ ಅವರಿಗೆ ವಂಚಿಸಿದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಮಾತನಾಡಿ, ಈ ಪ್ರಕರಣದಲ್ಲಿ ಆರೋಪಿತರಾದ ರಾಜು ಮಾಳಪ್ಪ ಮಾನೆ, ದಯಾನಂದ ಅಮಯ್ಯ ಸಂಗಮದ, ಕಿರಣ ವಾಸುದೇವ ಬೇಡೆಕರ, ದಶರಥ ಸಿದ್ಧರಾಮ ಹೊಸಮನಿ, ದತ್ತಾತ್ರೇಯ ಶರಣಪ್ಪ ಶಿವಶರಣ, ಸಾಕೀಫ್ ಬಷೀರ್​ ಅಹ್ಮದ್​ ನಂದವಾಡಗಿ ಸೇರಿದಂತೆ ಇನ್ನೂ ಕೆಲವರು ಸೇರಿಕೊಂಡು ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಸರ್ವೆಯಲ್ಲಿ ಬರುವ ರಿ.ಸ.ನಂಬರ 48/*/1 20 ಎಕರೆ ಜಮೀನು ಮಾಲೀಕನಾದ ಅರ್ಗನ್ ಅಗನು ಧೋಳು ಕಾಳೆ ಈತನ ಹೆಸರಿನಲ್ಲಿ ಖೊಟ್ಟಿ ಆಧಾರ್​ ಮತ್ತು ಪಾನ್​ಕಾರ್ಡ್​ ಅನ್ನು ಸೃಷ್ಟಿಸಿ ಅವುಗಳನ್ನು ಖರೀದಿ ಪತ್ರದಲ್ಲಿ ಖೊಟ್ಟಿ ರೀತಿಯಿಂದ ನಮೂದು ಮಾಡಿ, ಖರೀದಿ ಪತ್ರ ತಯಾರು ಮಾಡಿಕೊಂಡು ದೂರುದಾರರ ಕಡೆಯಿಂದ ಒಟ್ಟು 46,50,000 ರೂ.ಗಳನ್ನು ಪಡೆದುಕೊಂಡು ವಂಚನೆ ಮಾಡಿದ್ದರು ಎಂದರು.

ಈ ಬಗ್ಗೆ ವಿಜಯಪುರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆಗಾಗಿ ಪೊಲೀಸ್ ಅಧಿಕಾರಿಗಳಾದ ಸುನೀಲಕುಮಾರ ನಂದದೇಶ್ವರ ಅವರನ್ನೊಳಗೊಂಡ ತಂಡ ರಚನೆ ಮಾಡಲಾಗಿತ್ತು. ಈ ತನಿಖಾ ತಂಡ 46,50,000 ರೂ. ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೇ ಪ್ರಕರಣದಲ್ಲಿ ನಕಲಿ ಆಧಾರ ಕಾರ್ಡ್​​​ ಹಾಗೂ ಪಾನ್ ಕಾರ್ಡ ಸೃಷ್ಟಿ ಮಾಡಿದವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಪತ್ತೆ ಕುರಿತಂತೆ ಮಾಹಿತಿ ಹಂಚಿಕೊಂಡ ಎಸ್​ಪಿ - Vijayapura Crime News

Last Updated : May 22, 2024, 10:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.