ETV Bharat / state

ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಸಾವು; ಕುಟುಂಬಸ್ಥರ ಆಕ್ರಂದನ - TERRIBLE ROAD ACCIDENT

ಕುಂಭಮೇಳಕ್ಕೆ ಹೋಗಿದ್ದ ಕರ್ನಾಟಕದವರಿದ್ದ ಕ್ರೂಸರ್ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ.

TERRIBLE ROAD ACCIDENT
ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕ್ರೂಸರ್ (ETV Bharat)
author img

By ETV Bharat Karnataka Team

Published : Feb 21, 2025, 2:18 PM IST

ಬೀದರ್: ಕಾಶಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ನಡೆದಿದೆ. ಮೃತರನ್ನು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ಗುರುತಿಸಲಾಗಿದ್ದು, ಒಂದೇ ಕುಟುಂಬದ‌ ಮೂರು ಜನ ಸೇರಿದಂತೆ ಐದು ಜನ ಸ್ಥಳದಲ್ಲೇ ಅಸುನೀಗಿರುವ ಮಾಹಿತಿ ಲಭ್ಯವಾಗಿದೆ.

ಕಾಶಿಯಿಂದ 20 ಕಿಲೋ‌ ಮೀಟರ್​​ ದೂರದಲ್ಲಿ ಲಾರಿಗೆ ಹಿಂಬದಿಯಿಂದ ರಭಸವಾಗಿ ಕ್ರೂಸರ್ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿದ್ದು, 7 ಜ‌ನರ ಸ್ಥಿತಿ ಗಂಭೀರವಾಗಿದೆ.

TERRIBLE ROAD ACCIDENT
ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಭಕ್ತರು (ETV Bharat)

ಸಂತೋಷ (45) ಸುನೀತಾ (40), ನೀಲ್ಲಮ್ಮ (62) ಸೇರಿದಂತೆ ಐದು ಜನ ಸಾವನ್ನಪ್ಪಿದ್ದು, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ ಮೂರು ಒಂದೇ ಕುಟುಂಬಕ್ಕೆ ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಯಾಗ್​ರಾಜ್​ನಿಂದ ಕಾಶಿ ಕಡೆ ಹೋಗುವಾಗ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

12 ಜನ ಒಂದೇ ವಾಹನದಲ್ಲಿ ಪ್ರಯಾಗ​ರಾಜ್​ಗೆ: ​ಕಳೆದ ಎರಡು ದಿನಗಳ ಹಿಂದೇ ಒಂದೇ ವಾಹನದಲ್ಲಿ ಕುಂಭಮೇಳಕ್ಕೆ ತೆರಳಿದ್ದ 12 ಜನರ ಭಕ್ತರಲ್ಲಿ ಐದು ಜನ ಸಾವನ್ನಪ್ಪಿದ್ದಾರೆ. ಶವಗಳನ್ನು ಶವಗಾರಕ್ಕೆ ರವಾನಿಸಿದ್ದು ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಿರ್ಜಾ ಮುರಾರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಕ್ಕಿ ರಭಸಕ್ಕೆ ಕ್ರೂಸರ್ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದೆ. ವಾಹನದಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಗಾಯಾಳುಗಳನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯ ಆಸ್ಪತ್ರೆಯ ಆಘಾತ ಕೇಂದ್ರಕ್ಕೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಮಿರ್ಜಾಮುರಾದ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅಜಯ್ ರಾಜ್ ವರ್ಮಾ ಹೇಳಿದ್ದಾರೆ.

ಬೀದರ್​ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್​​ ಖಂಡ್ರೆ (ETV Bharat)

ಸಚಿವ ಖಂಡ್ರೆ ಸಂತಾಪ: ಘಟನೆ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್​ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್​​ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಇಂದು ಬೆಳಗಿನ ಜಾವ ಡಿಕ್ಕಿಯಾಗಿ 6 ಜನರು ಮೃತಪಟ್ಟು, ಇತರ 8 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್​​​ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ ಎಂದರು.

ಅಲ್ಲಿ ಕರ್ನಾಟಕದವರೇ ಆದ ಚನ್ನಪ್ಪ ಎಂಬ ಅಧಿಕಾರಿಯಾಗಿದ್ದು ಅವರೊಂದಿಗೆ ಮಾತನಾಡಿ, ಮೃತರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಮೂರು ಕಡೆ ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಐವರು ಸೇರಿ ಒಟ್ಟು 15 ಸಾವು! - ROAD ACCIDENT IN VARANASI

ETV Bharat Logo

Copyright © 2025 Ushodaya Enterprises Pvt. Ltd., All Rights Reserved.