ಬೆಂಗಳೂರು: ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೇಹಳ್ಳಿ ಠಾಣೆ ವ್ಯಾಪ್ತಿಯ ಎಂಎಸ್ ನಗರದಲ್ಲಿ ಬುಧವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದೆ. ಗಾಯಾಳುಗಳನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು. ನೇಪಾಳ ಮೂಲದ ಈ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿತ್ತು.
ಎಲ್ಲರಿಗೂ ಶೇಕಡ 90ರಷ್ಟು ಸುಟ್ಟ ಗಾಯಗಳಾಗಿವೆ. ಎಲ್ಲರಿಗೂ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯ, ಸಾವಿನಲ್ಲೂ ಒಂದಾದ ದಂಪತಿ