ETV Bharat / state

ಕಾವೇರಿ 5ನೇ ಹಂತದ ಯೋಜನೆ ಮೇ ತಿಂಗಳಲ್ಲಿ ಪೂರ್ಣ; 12 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು- ಸಿಎಂ

author img

By ETV Bharat Karnataka Team

Published : Feb 16, 2024, 6:03 PM IST

Updated : Feb 16, 2024, 7:32 PM IST

5,550 ಕೋಟಿ ರೂಪಾಯಿ ವೆಚ್ಚದ ಕಾವೇರಿ 5ನೇ ಹಂತದ ಯೋಜನೆಯು ಮೇ ತಿಂಗಳಲ್ಲಿ ಪೂರ್ಣ ಆಗಲಿದೆ.

CM Siddaramaiah presented the budget.
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದರು.

ಬೆಂಗಳೂರು: ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​​ನಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ. ಬಿ.ಡಬ್ಲ್ಯೂ.ಎಸ್.ಎಸ್.ಬಿಯಿಂದ 775 ಎಂ.ಎಲ್.ಡಿ. ಸಾಮರ್ಥ್ಯದ ಕಾವೇರಿ 5ನೇ ಹಂತದ 5,550 ಕೋಟಿ ರೂಪಾಯಿ ವೆಚ್ಚದ ಯೋಜನೆಯು ಮೇ 2024ರಲ್ಲಿ ಪೂರ್ಣವಾಗಲಿದೆ.

ಈ ಯೋಜನೆಯಿಂದ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್‌ ಶುದ್ಧ ಕುಡಿಯುವ ನೀರು ಪೂರೈಕೆಯಾಗಲಿದೆ. ಈ ಯೋಜನೆಯಲ್ಲಿ ನೀರನ್ನು ಒದಗಿಸುವುದರ ಜೊತೆಗೆ ಒಳಚರಂಡಿ ಕಾಮಗಾರಿ ನಡೆಯಲ್ಲಿದ್ದು, ಡಿಸೆಂಬರ್‌ 2024ರಲ್ಲಿ ಪೂರ್ಣಗೊಳ್ಳಲಿದೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ತಿಳಿಸಿದರು.

ಯೋಜನೆಯಡಿ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಗೆ ಕೊಳವೆ ಅಳವಡಿಕೆ ಮಾಡಲಾಗುತ್ತಿದೆ. 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ.ಯಷ್ಟು ಒಳಚರಂಡಿ ನೀರು ಸಂಸ್ಕರಣೆಯಾಗಲಿದೆ. 7 ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪನೆಗೆ 441 ಕೋಟಿ ರೂ. ಮೀಸಲಿಡಲಾಗಿದೆ. ಇದರಿಂದ, 268 ಎಂ.ಎಲ್.ಡಿ. ತ್ಯಾಜ್ಯ ನೀರು ಸಂಸ್ಕರಣೆಯಾಗಲಿದೆ. ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ನೀಡಲಾಗುತ್ತಿರುವ ಎರಡನೇ ಹಂತದ ಯೋಜನೆ 200 ಕೋಟಿ ರೂ. ವೆಚ್ಚದಲ್ಲಿ ಆರಂಭಿಸುವುದಾಗಿ ಸಿಎಂ ಭರವಸೆ ನೀಡಿದರು.

ತಾಜ್ಯ ವಿಲೇವಾರಿಗೆ ವಲಯ ವಿಂಗಡನೆ: ಬಜೆಟ್​​ನಲ್ಲಿ ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ ತಾಜ್ಯ ವಿಲೇವಾರಿ ಮಾಡುವ ಯೋಜನೆಯನ್ನು ಕೂಡ ಸಿಎಂ ಘೋಷಿಸಿದ್ದಾರೆ. ಇದಕ್ಕಾಗಿ ಮುಂದಿನ ವರ್ಷದಲ್ಲಿ 50 ರಿಂದ 100 ಎಕರೆ ಜಾಮೀನು ಗುರುತಿಸುವ ಕ್ರಮ ಕೈಗೊಳ್ಳಲಾಗುತ್ತಿದೆ. 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡಲಾಗುವುದ ಎಂದು ಸಿಎಂ ಹೇಳಿದ್ದಾರೆ.

ಹಲವು ವಿಭಾಗಗಳ ಮರುನಾಮಕರಣ: ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ, ಕಾರ್ಯವ್ಯಾಪ್ತಿ ವಿಸ್ತರಣೆ ಮಾಡಲಾಗುವುದು. ನಗರದ ವಾತಾವರಣದ ಸ್ವಚ್ಛತೆಗಾಗಿ ಮರಗಳ ಗಣತಿ ಮಾಡಲಾಗುವುದು. ಕೆರೆ ಮತ್ತು ಉದ್ಯಾನವನಗಳಲ್ಲಿ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ ನಡೆಸಲಾಗುವುದು. ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವ ಹೆಚ್ಚಿಸಲು ಪ್ರತ್ಯೇಕ ನೀತಿ ಜಾರಿ ಮಾಡಲಾಗುವುದು. ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನ ಅಭಿವೃದ್ಧಿಯಾಗಲಿದೆ ಎಂದಿದ್ದಾರೆ.

ವ್ಯಾಪಾರದ ಅವಧಿ ವಿಸ್ತರಣೆ: ಬೆಂಗಳೂರು ಹಾಗೂ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಠಿಯಿಂದ ರಾತ್ರಿಯ ವೇಳೆ ವ್ಯಾಪಾರ, ವಹಿವಾಟಿನ ಮೇಲಿನ ನಿರ್ಬಂಧ ತೆರವು ಮಾಡಲಾಗಿದೆ. ಬೆಳಗಿನಜಾವ ಒಂದು ಗಂಟೆಯವರೆಗೆ ಅವಧಿ ವಿಸ್ತರಣೆ ಮಾಡಲಾಗುವುದು ಎಂದು ಬಜೆಟ್​​ನಲ್ಲಿ ತಿಳಿಸಲಾಗಿದೆ.

ಇದನ್ನೂಓದಿ: ಬಿಬಿಎಂಪಿಗೆ ₹1,000 ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ: ಬಜೆಟ್‌ನಲ್ಲಿ ಬ್ರ್ಯಾಂಡ್‌ ಬೆಂಗಳೂರಿಗೇನು?

Last Updated : Feb 16, 2024, 7:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.