ETV Bharat / state

ದೆಹಲಿ ರೈತ ಹೋರಾಟ ಬೆಂಬಲಿಸಿ ಮಾ.12 ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ: ಕುರುಬೂರು ಶಾಂತಕುಮಾರ್

ಕೇಂದ್ರ ಸರ್ಕಾರದ ವಿರುದ್ಧದ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಹೋರಾಟ ಬೆಂಬಲಿಸಲು, ಮಾ.12 ರಂದು ರಾಜ್ಯಾದ್ಯಂತ ರೈತರ ಪಂಜಿನ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

Flag protest across the state on March 12 says Kuruburu Shanthakumar
ದೆಹಲಿ ರೈತ ಹೋರಾಟ ಬೆಂಬಲಿಸಿ ಮಾ.12ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ: ಕುರುಬೂರು ಶಾಂತಕುಮಾರ್
author img

By ETV Bharat Karnataka Team

Published : Mar 9, 2024, 7:25 PM IST

ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮಾ.12 ರಂದು ರಾಜ್ಯಾದ್ಯಂತ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಜಲದರ್ಶಿನಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಜಾಬ್, ಹರಿಯಾಣ ರೈತರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗಾಗಿ ಪ್ರಬಲ ಹೋರಾಟ ನಡೆಸುತ್ತಿದ್ದರು. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದೇ ಪೊಲೀಸ್ ಬಲದ ಮೂಲಕ ಚಳವಳಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದರು.

ರೈತರ ಜೊತೆ ನಾಲ್ಕು ಸಭೆ ನಡೆಸಿದ ನಾಟಕವಾಡಿ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಇದರ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರೈತ ಸಂಘಟನೆಯ ಹೋರಾಟ ಬೆಂಬಲಿಸಲು 12 ರಂದು ರಾಜ್ಯಾದ್ಯಂತ ರೈತರ ಪಂಜಿನ ಪ್ರತಿಭಟನೆ, ರೈತರ ಆಕ್ರೋಶ ದಿನ ಆಚರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸುತ್ತಾರೆ ಎಂದು ತಿಳಿಸಿದರು.

ಮಾ.15 ರ ನಂತರ ಧಾರವಾಡದಲ್ಲಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸಿ ಚಳವಳಿಯನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಲಾಗಿದೆ. ಇನ್ನು ರಾಜ್ಯಾದ್ಯಂತ ಬರದ ಬವಣೆಯಿಂದ ಕುಡಿಯುವ ನೀರು, ದನಕರುಗಳಿಗೆ ಮೇವಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಸರ್ಕಾರ ಕೂಡಲೇ ಸಮರೋಪಾದಿಯಲ್ಲಿ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚೆಗೆ ಅಬುದಾಬಿಯಲ್ಲಿ ನಡೆದ ಡಬ್ಲ್ಯೂಟಿಒ ಒಪ್ಪಂದ ಮುಕ್ತಾಯವಾಗಿದೆ. ಈ ಸಭೆಯಲ್ಲಿ ಭಾಗವಹಿಸಿದ ನಾವು ಹಾಗೂ ಹಲವು ದೇಶಗಳ ರೈತ ಪ್ರತಿನಿಧಿಗಳು ಒಪ್ಪಂದ ವಿರೋಧಿಸಿದೆವು ಹಾಗೂ ನಮ್ಮ ದೇಶದ ರೈತರ ಹೋರಾಟವನ್ನು ಪರಿಗಣಿಸಿ ಕೇಂದ್ರ ಸರ್ಕಾರ ಕೂಡ ಒಪ್ಪಂದವನ್ನು ವಿರೋಧಿಸಿತು. ಈ ಹಿನ್ನೆಲೆಯಲ್ಲಿ ಒಪ್ಪಂದಕ್ಕೆ ತೆರೆಬಿದ್ದಿದೆ, ಇದರಿಂದ ಅನಾವಶ್ಯಕವಾಗಿ ಹೆಚ್ಚುವರಿ ವಿದೇಶದಿಂದ ಆಮದಾಗುವ ಕೃಷಿ ಉತ್ಪನ್ನಗಳ ಆಮದು ನೀತಿಯಿಂದ ದೇಶಿಯ ರೈತರ ಮೇಲೆ ಕೆಟ್ಟ ಪರಿಣಾಮ ಬೀರುವುದು ತಪ್ಪುತ್ತದೆ. ದಕ್ಷಿಣ ಆಫ್ರಿಕಾದಲ್ಲಿ ಡಬ್ಲ್ಯೂಟಿಒ ಮುಂದಿನ ಸಭೆ ನಡೆಯಲಿದೆ ಅಲ್ಲಿ ಈ ಬಗ್ಗೆ ತೀರ್ಮಾನವಾಗಲಿದೆ ಎಂದು ಹೇಳಿದರು.

ಬರಗಾಲದ ಕಾರಣ ಸಾಲ ವಸೂಲಾತಿ ನಿಲ್ಲಿಸಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದರೂ ಸಹ ಬ್ಯಾಂಕುಗಳು ಅದನ್ನು ನಿರ್ಲಕ್ಷ್ಯ ಮಾಡಿ ಬಲವಂತವಾಗಿ ವಸೂಲಿ, ನೋಟಿಸ್ ನೀಡುವುದನ್ನು ಮುಂದುವರಿಸಿವೆ. ಇದರ ವಿರುದ್ಧ ಪ್ರಬಲ ಹೋರಾಟ ಹಮ್ಮಿಕೊಳಲು ಚರ್ಚೆ ನಡೆಸಲಾಗುತ್ತಿದೆ ಎಂದರು. ಈ ವೇಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ನೀಲಕಂಠಪ್ಪ. ತಾಲೂಕು ಅಧ್ಯಕ್ಷರಾದ ಲಕ್ಷ್ಮಿಪುರ ವೆಂಕಟೇಶ್ ಮತ್ತಿತರರು ಇದ್ದರು.

ಇದನ್ನೂ ಓದಿ: ಬರಗಾಲಕ್ಕೆ ನೀರಿಲ್ಲದೇ ಒಣಗುತ್ತಿರುವ ಅಡಕೆ ತೋಟಗಳು: ಚಿಕ್ಕಮಗಳೂರು ರೈತರು ಕಂಗಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.