ಹುಬ್ಬಳ್ಳಿ: ಮುಂಬೈ-ಹುಬ್ಬಳ್ಳಿ-ಮುಂಬೈ ಮಧ್ಯೆ ಇಂಡಿಗೋ 6E ವಿಮಾನಯಾನ ಸೇವೆ ಜುಲೈ 15ರಿಂದ ಪುನಾರಂಭಗೊಳ್ಳಲಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡಿಗೋ ವಿಮಾನ ಮಧ್ಯಾಹ್ನ 3 ಗಂಟೆಗೆ ಮುಂಬೈ ಬಿಟ್ಟು ಸಂಜೆ 4.10ಕ್ಕೆ ಹುಬ್ಬಳ್ಳಿ ತಲುಪುತ್ತದೆ. ಸಂಜೆ 4.40ಕ್ಕೆ ಹುಬ್ಬಳ್ಳಿಯಿಂದ ನಿರ್ಗಮಿಸಿ ಸಂಜೆ 5.50ಕ್ಕೆ ಮುಂಬೈ ತಲುಪಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಜೋಶಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಂಬರ್ 1; ಮೊದಲ ಸ್ಥಾನದಲ್ಲಿದ್ದ ಬೆಳಗಾವಿಗೆ 2ನೇ ಸ್ಥಾನ