ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಯುವ ಫುಟ್‌ಬಾಲ್ ಆಟಗಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರಂ ಅಂಚಾರಿ ಠಾಣಾ ವ್ಯಾಪ್ತಿಯ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ತಡರಾತ್ರಿ ನಡೆದಿದೆ. ಬಾಬುಸಪಾಳ್ಯ ನಿವಾಸಿ ಮೊನೀಶ್.ಕೆ (27) ಮೃತ ಯುವಕ. ತಡರಾತ್ರಿ 2 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿತ್ತು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಮೊನೀಶ್ನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಪರಿಕ್ರಮ ಎಫ್.ಸಿ, ಡೆಕ್ಕನ್ ಎಫ್.ಸಿ, ಯಂಗ್ ಚಾಲೆಂಜರ್ಸ್ ಎಫ್.ಸಿ ಸೇರಿದಂತೆ ವಿವಿಧ ಕ್ಲಬ್‌ಗಳ ಪರ ಕಣಕ್ಕಿಳಿದಿದ್ದ ಮೊನೀಶ್, ಆಲ್ ಇಂಡಿಯಾ ಫುಟ್‌ಬಾಲ್ ಫೆಡರೇಶನ್ (ಎಐಎಫ್ಎಫ್) - ಡಿ ನಿಂದ 2019ರಲ್ಲಿ ಕೋಚಿಂಗ್ ಲೈಸೆನ್ಸ್ ಪಡೆದಿದ್ದರು. ಪ್ರಸ್ತುತ ಬೆಂಗಳೂರು ಡಿಸ್ಟ್ರಿಕ್ಟ್ ಫುಟ್‌ಬಾಲ್ ಅಸೋಸಿಯೇಷನ್ (ಬಿಡಿಎಫ್ಎ) - ಎ ಡಿವಿಷನ್ ಲೀಗ್ ಚಾಂಪಿಯನ್ಶಿಪ್ನಲ್ಲಿ ಬೆಂಗಳೂರು ಈಗಲ್ಸ್ ಎಫ್.ಸಿ ಪರ ಆಡುತ್ತಿದ್ದರು.
-
ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ.
— CM of Karnataka (@CMofKarnataka) January 21, 2024 " class="align-text-top noRightClick twitterSection" data="
ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ… pic.twitter.com/TgL33npzEH
">ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ.
— CM of Karnataka (@CMofKarnataka) January 21, 2024
ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ… pic.twitter.com/TgL33npzEHರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ.
— CM of Karnataka (@CMofKarnataka) January 21, 2024
ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ… pic.twitter.com/TgL33npzEH
ಮೊನೀಶ್ ಅಕಾಲಿಕ ನಿಧನದ ಕುರಿತು ಸಂತಾಪ ವ್ಯಕ್ತಪಡಿಸಿರುವ ಬೆಂಗಳೂರು ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್, ಮಂಗಳವಾರ ನಡೆಯಲಿರುವ ಬೆಂಗಳೂರು ಈಗಲ್ಸ್ ಎಫ್.ಸಿ ಹಾಗೂ ಬ್ಲಿಟ್ಸ್ ಎಫ್.ಸಿ ನಡುವಿನ ಪಂದ್ಯವನ್ನ ಮುಂದೂಡಿದೆ.
ಇದನ್ನೂ ಓದಿ: ಅಜ್ಜಿಯ ಶವ ಕೊಂಡೊಯ್ಯುವಾಗ ಕಾರಿನ ಟೈರ್ ಬ್ಲಾಸ್ಟ್; ಸ್ಥಳದಲ್ಲೇ ಮೂವರು ಸಾವು
ಸಿಎಂ ಸಿದ್ದರಾಮಯ್ಯ ಸಂತಾಪ: 'ರಾಜ್ಯದ ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.