ಬೆಂಗಳೂರು: ಮಹಿಳೆಯನ್ನು ಕೊಂದು ತುಂಡುತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇರಿಸಿದ್ದ ಪ್ರಕರಣದ ಆರೋಪಿಯ ಪತ್ತೆಗೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಘಟನೆ ನಡೆದ ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ನೂರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಮೃತ ಮಹಿಳೆ ಮಹಾಲಕ್ಷ್ಮೀಯ ಫೋನ್ ಸೆ.2ರಂದು ಸ್ವಿಚ್ ಆಫ್ ಆಗಿದ್ದು, ಆಕೆಯೊಂದಿಗೆ ಕೊನೆಯ ಬಾರಿಗೆ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮತ್ತೊಂದೆಡೆ, ಮೃತದೇಹದ ಮರಣೋತ್ತರ ಪರೀಕ್ಷೆ ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಹತ್ಯೆಯಾಗಿ ಹಲವು ದಿನ ಕಳೆದಿರುವುದು ಮತ್ತು ಮೃತದೇಹವನ್ನು ಕತ್ತರಿಸಿರುವುದರಿಂದ ಮರಣೋತ್ತರ ಪರೀಕ್ಷೆ ನಡೆಸುವುದು ವೈದ್ಯರಿಗೆ ಸವಾಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರು ಮಹಿಳೆ ಬರ್ಬರ ಹತ್ಯೆ ಪ್ರಕರಣ: ಭೀಕರ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ? - Woman Dead Body In Fridge