ಬೆಂಗಳೂರು: 'ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ. ಅವರು ದೇಶ ಕಂಡ ಪ್ರಾಮಾಣಿಕ ರಾಜಕಾರಣಿಯಾಗಿದ್ದರು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪರವರ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ @siddaramaiah ಅವರು ಇಂದು ವಿಧಾನಸೌಧ ಆವರಣದಲ್ಲಿರುವ ನಿಜಲಿಂಗಪ್ಪ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ, ಗೌರವ ನಮನ ಸಲ್ಲಿಸಿದರು. pic.twitter.com/KagQMWS5Lp
— CM of Karnataka (@CMofKarnataka) August 8, 2024
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ನಿಮಿತ್ತ ಅವರ ಪ್ರತಿಮೆಗೆ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. 'ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್. ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ' ಎಂದರು.
ಎನ್ಡಿಎ ಸರ್ಕಾರ ಅಲ್ಪಸಂಖ್ಯಾತರ ವಿರೋಧಿ: ಸಂಸತ್ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, 'ಬಿಜೆಪಿ ಹಾಗೂ ಎನ್ಡಿಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯತೀತ, ಸಾಮಾಜಿಕ ನ್ಯಾಯದ ಸಿದ್ಧಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷದವರಾಗಿದ್ದಾರೆ' ಎಂದು ಕಿಡಿಕಾರಿದರು.
ಇದನ್ನೂ ಓದಿ: ದೇವರ ಹೆಸರಿನಲ್ಲಿ ಹಾಲಿನ ವ್ಯರ್ಥ ಬೇಡ, ಅಗತ್ಯವಿದ್ದವರಿಗೆ ನೀಡಿ: ಜಯಮೃತ್ಯುಂಜಯ ಸ್ವಾಮೀಜಿ - Jaya Mruthyunjaya Swamiji