ಶಿವಮೊಗ್ಗ: ನಾಳೆ ನ್ಯಾಯಾಲಯದಲ್ಲಿ ತೀರ್ಪು ಬಂದ ನಂತರ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರರಷ್ಟು ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ತೀರ್ಪಿಗಿಂತ ಮುಂಚೆಯೇ ಗೌರವಯುತವಾಗಿ ರಾಜೀನಾಮೆ ಕೊಡುವುದು ಒಳ್ಳೆಯದು ಎಂದು ಸಲಹೆ ಕೊಡುತ್ತೇವೆ ಎಂದರು.
ಯಾಕೆಂದರೆ ಮಾಡಿರುವ ಎಲ್ಲಾ ಹಗರಣಗಳು ಸಾಬೀತಾಗಿರುವುದರಿಂದ ಅವರು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದು ಜಗಜ್ಜಾಹೀರಾಗಿರುವ ಸಂಗತಿ. ನೋಡೋಣ ನಾಳೆ ಏನಾಗುತ್ತದೆ ಎಂದರು. ಕೋವಿಡ್ ಹಗರಣ ಸಂಬಂಧ ಬಿಜೆಪಿ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದೆ ಎಂಬ ವಿಚಾರದ ಬಗ್ಗೆ ಮಾತನಾಡಿ, ಇದರಲ್ಲಿ ಅರ್ಥ ಇಲ್ಲ. ಸರ್ಕಾರ ಏನೂ ಬೇಕಾದರು ತೀರ್ಮಾನ ತೆಗೆದುಕೊಳ್ಳಲು ಸರ್ವ ಸ್ವತಂತ್ರವಾಗಿದೆ. ಅವರು ಏನು ಬೇಕಾದರೂ ಕ್ರಮ ಕೈಗೊಳ್ಳಲಿ. ಕಾನೂನು ರೀತಿಯಲ್ಲಿ ಎದುರಿಸೋಣ ಎಂದು ತಿಳಿಸಿದರು.
ಈಗ ಸಿಎಂ ವಿರುದ್ಧ ನಾವು ಯಾವುದೇ ಹೋರಾಟ ಮಾಡುವುದಿಲ್ಲ. ನ್ಯಾಯಾಲಯದಲ್ಲಿನ ತೀರ್ಪು ಅಂತಿಮ ಹಂತಕ್ಕೆ ಬಂದಿರುವುದರಿಂದ ಸಹಜವಾಗಿ ಸಿಎಂ ಅವರೇ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತದೆ ಎಂದಷ್ಟೇ ಬಿಎಸ್ವೈ ಹೇಳಿದರು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕಾಗುತ್ತದೆ, ಕಾದು ನೋಡಿ: ಬಿ.ವೈ. ವಿಜಯೇಂದ್ರ - B Y Vijayendra reaction on CM