ETV Bharat / state

ಧಾರವಾಡ ಕ್ಷೇತ್ರದಲ್ಲಿ ಜನ ಜೋಶಿ ಪರವಾಗಿದ್ದಾರೆ, ದಿಂಗಾಲೇಶ್ವರ ಶ್ರೀ ದುಸ್ಸಾಹಸಕ್ಕೆ ಮುಂದಾಗಬಾರದು: ಬಿ ಎಸ್ ಯಡಿಯೂರಪ್ಪ - Former CM B S Yediyurappa

ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಕುರಿತು ಮಾತನಾಡಿದರು.

BS Yediyurappa
ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ
author img

By ETV Bharat Karnataka Team

Published : Apr 15, 2024, 1:01 PM IST

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ಹುಬ್ಬಳ್ಳಿ : ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಭುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮೀಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ತಿಳಿಸಿದರು.

ಪ್ರಹ್ಲಾದ್ ಜೋಶಿ ನಾಮಪತ್ರ ಹಿನ್ನೆಲೆ ಸಿ ಟಿ ರವಿ, ಬೈರತಿ ಬಸವರಾಜ್, ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : 28ಕ್ಕೆ 28 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ - B S YEDIYURAPPA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.