ETV Bharat / state

ಪೋಕ್ಸೋ ಪ್ರಕರಣ: ಸಿಐಡಿ ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ - Yediyurappa appear before CID

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂದು ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

Former CM BS Yediyurappa
ಬಿ.ಎಸ್​. ಯಡಿಯೂರಪ್ಪ (Photo: ANI)
author img

By ETV Bharat Karnataka Team

Published : Jun 17, 2024, 11:22 AM IST

ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ'' ಎಂದರು.

''ರಾಜ್ಯದ ಜನತೆ ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಅಪರಾಧವಾಗಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು'' ಎಂದು ಬಿಎಸ್​ವೈ ಇದೇ ವೇಳೆ ಆಗ್ರಹಿಸಿದರು.

ಪ್ರಕರಣ ತನಿಖೆ ನಡೆಸುತ್ತಿದ್ದ ಡಿವೈಎಸ್ಪಿ ಪೃಥ್ವಿ ಬದಲಿಗೆ ತನಿಖಾಧಿಕಾರಿಯಾಗಿ ನೇಮಕಗೊಂಡಿರುವ ಡಿವೈಎಸ್ಪಿ ಪುನೀತ್ ಮುಂದೆ ಬಿಎಸ್​​ವೈ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಅವರು ಸಿಐಡಿ ನೀಡಿದ್ದ ನೋಟಿಸ್ ಹಿನ್ನೆಲೆಯಲ್ಲಿ ಹಾಜರಾಗಿ ವಾಯ್ಸ್ ಸ್ಯಾಂಪಲ್ಸ್ ನೀಡಿದ್ದರು‌.‌

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್​ 3ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ 2 ಬಾರಿ ನೋಟಿಸ್​ ನೀಡಿದ್ದರು. ಆದರೆ ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಪೀಠ ಬಿಎಸ್​ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ಇದರಿಂದಾಗಿ ಮಾಜಿ ಸಿಎಂ ಬಂಧನ ಭೀತಿಯಿಂದ ನಿರಾಳರಾಗಿದ್ದರು. ಕೋರ್ಟ್​ ನಿರ್ದೇಶನದಂತೆ ಇಂದು ಅವರು ಸಿಐಡಿ ಎದುರು ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಪ್ರಕರಣದ ಹಿಸ್ಟರಿ:

  • ಫೆಬ್ರವರಿ 2ರಂದು ನ್ಯಾಯ ಕೇಳಿ ಬಿ.ಎಸ್​.ಯಡಿಯೂರಪ್ಪ ಮನೆಗೆ ಹೋಗಿದ್ದ ಸಂತ್ರಸ್ತೆ ಹಾಗೂ ತಾಯಿ
  • ಮಾರ್ಚ್​ 3ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿಯಿಂದ ದೂರು
  • ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಬಿಎಸ್​​​ವೈ ವಿರುದ್ಧ ಪೋಕ್ಸೊ ಕೇಸ್​​ನಡಿ ಎಫ್​ಐಆರ್ ದಾಖಲು
  • ಮಾರ್ಚ್ 14ರಂದು ಎಸಿಎಂಎಂ 25ನೇ ನ್ಯಾಯಾಧೀಶರ ಮುಂದೆ ಸಂತ್ರಸ್ತೆಯ ಸಿಆರ್​​ಪಿಸಿ-164 ಹೇಳಿಕೆ ದಾಖಲು
  • ಮಾರ್ಚ್ 14ರಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ ಸರ್ಕಾರ
  • ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್​ವೈಗೆ ಸಿಐಡಿ ನೋಟಿಸ್
  • ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗಿ ಧ್ವನಿ ಸ್ಯಾಂಪಲ್ ನೀಡಿದ್ದ ಯಡಿಯೂರಪ್ಪ
  • ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಸಾವಿನ ಬಳಿಕ ಹೈಕೋರ್ಟ್​ಗೆ ರಿಟ್ ಅರ್ಜಿ
  • ಅರ್ಜಿ ಬೆನ್ನಲ್ಲೇ ಜೂನ್ 12ರಂದು ಬಿಎಸ್​​ವೈಗೆ ಸಿಐಡಿ ನೋಟಿಸ್
  • ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜೂನ್ 12ರಂದು ಅರೆಸ್ಟ್ ವಾರಂಟ್​​​​​ ಕೋರಿ ಸಿಐಡಿಯಿಂದ ಅರ್ಜಿ
  • ಬಿಎಸ್​ವೈ ಬಂಧನ ಮಾಡದಂತೆ ಮೇ ಜೂನ್​ 14ರಂದು ಹೈಕೋರ್ಟ್​ ಆದೇಶ

ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ - BJP protest against fuel price hike

ETV Bharat Logo

Copyright © 2024 Ushodaya Enterprises Pvt. Ltd., All Rights Reserved.