ETV Bharat / state

ಕೇಂದ್ರದ ವಿಷಯ ಹಾಗಿರಲಿ, ಜನರಿಗೆ ಇವರೆಷ್ಟು ಪರಿಹಾರ ಕೊಟ್ಟಿದ್ದಾರೆ: ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ - Drought Relief - DROUGHT RELIEF

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ರೂ. ಪರಿಹಾರ ಮಂಜೂರಾದ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

kumaraswamy
ಕೇಂದ್ರದ ವಿಷಯ ಹಾಗಿರಲಿ, ಜನರಿಗೆ ಇವರೆಷ್ಟು ಪರಿಹಾರ ಕೊಟ್ಟಿದ್ದಾರೆ?: ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ
author img

By ETV Bharat Karnataka Team

Published : Apr 27, 2024, 7:41 PM IST

ಬೆಂಗಳೂರು: ಬರ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಯ ಬಗ್ಗೆ ಕೇಂದ್ರದ ಕಡೆ ಕೈ ತೋರಿಸುವ ಕಾಂಗ್ರೆಸ್ ಸರ್ಕಾರ, ಬರದಿಂದ ನೊಂದಿರುವ ಜನರಿಗೆ ಏನು ಮಾಡಿದೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯದವರೊಂದಿಗೆ ಮಾತನಾಡಿದ ಹೆಚ್​ಡಿಕೆ, ಕೇಂದ್ರ ಸರ್ಕಾರ 3,454 ಕೋಟಿ ರೂ. ಪರಿಹಾರ ನೀಡಿದೆ. ಕಡಿಮೆ ಬಂದಿದೆ ಎಂದರೆ ಕೇಳಲಿ, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಉಪಯೋಗವೇನು? ಎಂದರು.

ಹಣ ಬಿಡುಗಡೆ ಮಾಡುವಾಗ ಎಲ್ಲಾ ಅಂಶಗಳನ್ನು ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಂಡಿರುತ್ತದೆ. ಹಣ ಸಾಕಾಗಲಿಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೊಡಲು ಸಾಧ್ಯವೇ? ಒಕ್ಕೂಟ ವ್ಯವಸ್ಥೆ ಎನ್ನುವುದು ಇದೆಯಲ್ಲ. 15 ನೇ ಹಣಕಾಸಿನ ಆಯೋಗದ ಶಿಫಾರಸಿನ ಹಿನ್ನೆಲೆಯಲ್ಲಿ ಹಣ ಬರುತ್ತದೆ. ರಾಜ್ಯದಲ್ಲಿ ತೀವ್ರ ಬರವಿದೆ, ಅದಕ್ಕೆ ರಾಜ್ಯ ಸರ್ಕಾರ ಏನು ಮಾಡಿದೆ? ₹2000 ಕೊಡುತ್ತೇವೆ ಎಂದರು. ಯಾರಿಗೆ ಹೋಗಿದೆ? ಎಷ್ಟು ಜನಕ್ಕೆ ಹಣ ತಲುಪಿದೆ? ಆ 2000 ರೂ.ಗಳಲ್ಲಿ ಕೇಂದ್ರ ಸರ್ಕಾರದ ಹಣ ಸೇರಿದೆ. ಅದನ್ನು ಈ ಸರ್ಕಾರ ಹೇಳಬೇಕಲ್ಲವೇ? ಎಂದು ಹೇಳಿದರು.

ಇವರು ರಾಜ್ಯ ಬರ ಪರಿಹಾರ ನಿಧಿ (SDRF) ಯಿಂದ ಎಷ್ಟು ಹಣ ಕೊಟ್ಟಿದ್ದಾರೆ? ಸರ್ಕಾರದಿಂದ ಒಂದು ರೂಪಾಯಿ ಹಣ ಬಂದಿಲ್ಲ ಎಂದು ಮಂಡ್ಯ ಜನರು ನನಗೆ ಹೇಳಿದರು. ರೈತರು ₹2000 ಬಂದಿಲ್ಲ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ಬರ ನಿರ್ವಹಣೆಯಲ್ಲಿ ಇವರು ಸಂಪೂರ್ಣ ವಿಫಲರಾಗಿದ್ದಾರೆ. ತಮ್ಮ ತಪ್ಪು ಮುಚ್ಚಿಟ್ಟುಕೊಳ್ಳಲು ಇವರು ಸದಾ ಕೇಂದ್ರ ಸರ್ಕಾರವನ್ನು ಟೀಕೆ ಮಾಡುತ್ತಿದ್ದಾರೆ. ಇವರನ್ನು ತೃಪ್ತಿಪಡಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಕೆಲವೊಂದು ಮಾರ್ಗದರ್ಶನದ ಮೇಲೆ ಅನುದಾನ ಬಿಡುಗಡೆ ಮಾಡುತ್ತಾರೆ ಎಂದು ಸಮರ್ಥಿಸಿಕೊಂಡರು.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರೂ ಪರಿಹಾರ: ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎಂದ ಕಾಂಗ್ರೆಸ್ - Drought Relief Fund

ಪ್ರಚಾರಕ್ಕೆ ತೆರಳುತ್ತೇನೆ: ಕಲಬುರಗಿ, ರಾಯಚೂರು, ಹೊಸಪೇಟೆ, ಶಿವಮೊಗ್ಗ ಲೋಕಸಭೆ ಕ್ಷೇತ್ರಗಳ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾಳೆ ಹೊಸಪೇಟೆಗೆ ತೆರಳುತ್ತಿದ್ದೇನೆ. ಎರಡನೇ ಹಂತದ ಚುನಾವಣೆಗೆ ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಪ್ರಚಾರ ನಡೆಸುತ್ತೇನೆ. ನನ್ನ ಅಭಿಪ್ರಾಯದ ಪ್ರಕಾರ ಎನ್​ಡಿಎ 14 ಕ್ಷೇತ್ರಗಳಲ್ಲಿ 12 ರಿಂದ 13 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೆಚ್​ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ 81%ಕ್ಕೂ ಹೆಚ್ಚು ಮತದಾನ ಆಗಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ ಮಂಡ್ಯದಲ್ಲಿ ಅತಿ ಹೆಚ್ಚು ಮತದಾನ ಆಗಿದೆ. ಹೀಗಾಗಿ, ನನ್ನ ಗೆಲುವಿನ ಅಂತರ ಹೆಚ್ಚಾಗಿರುತ್ತದೆ ಎಂದರು.

ಇದನ್ನೂ ಓದಿ: ಬರ ಪರಿಹಾರ ಪ್ರಧಾನಿ ಮೋದಿ ಸಾಧನೆ ಎನ್ನುತ್ತಿರುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ - Drought Relief

ETV Bharat Logo

Copyright © 2024 Ushodaya Enterprises Pvt. Ltd., All Rights Reserved.