ETV Bharat / state

ಹೆಸರಿನಲ್ಲಿ ರಾಮ ಇದ್ದರೆ ಸಾಲದು ನಡವಳಿಕೆಯಲ್ಲೂ ರಾಮನ ಸಂಸ್ಕೃತಿ ಇರಲಿ: ಹೆಚ್​ ಡಿ ಕುಮಾರಸ್ವಾಮಿ

ಶಾಂತಿಯುತವಾಗಿ ಇತ್ಯರ್ಥ ಪಡಿಸಬಹುದಾಗಿದ್ದ ವಿಷಯವನ್ನು ಕಾಂಗ್ರೆಸ್ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡು ಅಮಾಯಕರ ಮೇಲೆ ದೌರ್ಜನ್ಯ ಎಸಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

author img

By ETV Bharat Karnataka Team

Published : Jan 29, 2024, 8:06 PM IST

Updated : Jan 29, 2024, 10:40 PM IST

former-cm-kumaraswamy-reaction-on-cm-siddaramaiah-over-hanumadhwaja-issue
ಹೆಸರಿನಲ್ಲಿ ರಾಮ ಇದ್ದರೆ ಸಾಲದು ನಡವಳಿಕೆಯೂ ರಾಮನ ಸಂಸ್ಕೃತಿ ಇರಲಿ: ಹೆಚ್​ ಡಿ ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ

ಮಂಡ್ಯ: "ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಇಳಿಸಿ ಜನರ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಲ್ಲದೇ, ಅಮಾಯಕರ ಮೇಲೆ ಅಮಾನುಷವಾಗಿ ದೌರ್ಜನ್ಯ ನಡೆಸಿರುವ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲಿ ರಾಮ ಎಂದು ಇಟ್ಟುಕೊಂಡರೆ ಸಾಲದು ನಡವಳಿಕೆಯೂ ರಾಮನ ಸಂಸ್ಕೃತಿ ಇರಬೇಕು" ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ - ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, "ಸರ್ಕಾರದ ನಡವಳಿಕೆಯನ್ನು ಹಿಂದೂ ಸಂಘಟನೆ ಹಾಗೂ ಹನುಮ ಭಕ್ತರು ಎಂದಿಗೂ ಸಹಿಸುವುದಿಲ್ಲ. ಅಮಾಯಕರ ಮೇಲಿನ ದೌರ್ಜನ್ಯವನ್ನು ಸುಲಭವಾಗಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಮನಗಾಣಬೇಕಾಗುತ್ತದೆ" ಎಂದು ಎಚ್ಚರಿಸಿದರು.

"ಶಾಂತಿಯುತವಾಗಿ ಇತ್ಯರ್ಥ ಪಡಿಸಬಹುದಾಗಿದ್ದ ವಿಷಯವನ್ನು ಕಾಂಗ್ರೆಸ್ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡು ಅಮಾಯಕರ ಮೇಲೆ ದೌರ್ಜನ್ಯ ಎಸಗಿದೆ. ಎಷ್ಟು ದಿನ ನಿಮ್ಮ ಆಟ ನಡೆಯಲಿದೆ?. ಸರ್ಕಾರ ಉದ್ಧಟತನದಿಂದ ವರ್ತಿಸಿದ್ದು, ದುರಾಡಳಿತಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ಜಿಲ್ಲಾಧಿಕಾರಿಗೆ ಕರೆ ಮಾಡಿ ಮುಖಂಡರ ಜೊತೆ ಮಾತುಕತೆ ನಡೆಸಿ ಶಾಂತಿಯುತವಾಗಿ ಇತ್ಯರ್ಥಪಡಿಸಿ ಎಂದು ಹೇಳಿದ್ದೆ. ಆದರೆ, ಅವರು ಯಾರದೋ ಮರ್ಜಿಗೆ ಒಳಗಾಗಿ ಅಮಾಯಕರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದಕ್ಕೆ ಜಿಲ್ಲಾಡಳಿತವೇ ಕಾರಣ, ಅಧಿಕಾರಿಗಳೇ ಹೊಣೆ. ಈ ತಕ್ಷಣ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ಅಮಾಯಕರ ಮೇಲೆ ದೌರ್ಜನ್ಯ ನಡೆಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. 144 ಸೆಕ್ಷನ್ ನಿಷೇಧಾಜ್ಞೆ ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಆಕ್ರೋಶ: ಮತ್ತೊಂದೆಡೆ, ಕೆರಗೋಡು ಗ್ರಾಮದಿಂದ ಮಂಡ್ಯದವರೆಗೆ ನಡೆದ ಪಾದಯಾತ್ರೆ ವೇಳೆ, ದಾರಿ ಉದ್ದಕ್ಕೂ ರಸ್ತೆಬದಿ ಹಾಕಲಾಗಿದ್ದ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಗಳನ್ನು ಬಿಜೆಪಿ ಕಾರ್ಯಕರ್ತರು ಕಿತ್ತು ಹರಿದುಹಾಕಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ರವಿಕುಮಾರ್ ಗಣಿಗ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಭಾವಚಿತ್ರ ಇದ್ದ ಫ್ಲೆಕ್ಸ್ ಗಳನ್ನು ಕಾರ್ಯಕರ್ತರು ದಹನ ಮಾಡಿದರು.

ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ: ಹನುಮ ಧ್ವಜ ತೆರುವುಗೊಳಿಸಿದ್ದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ನಗರ ಮತ್ತು ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಗಾಂಧಿಚೌಕ್​ನಲ್ಲಿ ಜಮಾಯಿಸಿದ್ದ ನೂರಾರು ಪ್ರತಿಭಟನಕಾರರು, ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಶಾಸಕ ಟಿ ಎಸ್ ಶ್ರೀವತ್ಸ ಮಾತನಾಡಿ, "ರಾಮ ಮಂದಿರ ಉದ್ಘಾಟನೆಯ ನಂತರ ಕಾಂಗ್ರೆಸ್ ಆತಂಕಗೊಂಡಿದೆ. ಅದರ ಭಾಗವಾಗಿಯೇ ಕೆರೆಗೋಡು ಗ್ರಾಮದ ಹನುಮ ಧ್ವಜವನ್ನು ತೆರವುಗೊಳಿಸಿರುವ ಘಟನೆ ನಡೆದಿದೆ" ಎಂದು ಆರೋಪಿಸಿದರು.

ಕಾಂಗ್ರೆಸ್ ಪಿತೂರಿಯಿಂದ ಹನುಮ ಧ್ವಜ ತೆರವು - ಎನ್​ ಮಹೇಶ್ (ಚಾಮರಾಜನಗರ): ಬಿಜೆಪಿ ಉಪಾಧ್ಯಕ್ಷ ಎನ್ ಮಹೇಶ್ ಚಾಮರಾಜನಗರದಲ್ಲಿ ಮಾತನಾಡಿ, "ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಪೊಲೀಸರ ಕೃತ್ಯವಲ್ಲ, ಇದು ಕಾಂಗ್ರೆಸ್​ನ ಪಿತೂರಿಯಾಗಿದೆ. ಧ್ವಜವನ್ನು ರಾತ್ರೋರಾತ್ರಿ ಇಳಿಸುವ ಅಗತ್ಯ ಏನಿತ್ತು?. ಧ್ವಜವನ್ನು ತೆರವುಗೊಳಿಸಿದ್ದು ತಪ್ಪು" ಎಂದು ಕಿಡಿಕಾರಿದ್ದಾರೆ.

ಬಿಜೆಪಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ: ಹನುಮ ಧ್ವಜ ಇಳಿಸಿದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ಮುಂಭಾಗದ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ವಿರುದ್ಧ ಬಿ ಸಿ ಪಾಟೀಲ್​ ಕಿಡಿ(ಹಾವೇರಿ): ಮಾಜಿ ಸಚಿವ ಬಿ ಸಿ ಪಾಟೀಲ ಹಾವೇರಿಯಲ್ಲಿ ಮಾತನಾಡಿ, "ಕೆರಗೋಡಿಯಲ್ಲಿ ಹನುಮ ಧ್ವಜವನ್ನು ಕೆಳಗಿಳಿಸಿ ರಾಷ್ಟ್ರಧ್ವಜವನ್ನು ಹಾಕುವ ನಾಟಕವಾಡಿರುವುದು ಹೇಯ ಕೃತ್ಯ. ಇದರ ಹಿಂದೆ ಕಾಂಗ್ರೆಸ್ ಪಕ್ಷದ ಪಿತೂರಿ ಇದೆ" ಎಂದು ಆರೋಪಿಸಿದರು. ಇನ್ನು ಹನುಮ ಧ್ವಜ ತೆರುವುಗೊಳಿಸಿದ್ದನ್ನು ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಕಾರ್ಯಕರ್ಯರು, ಮುಖಂಡರು ಪ್ರತಿಭಟಿಸಿದರು.

ಬಿಜೆಪಿಯಿಂದ ಕೊಪ್ಪಳದಲ್ಲಿ ಪ್ರತಿಭಟನೆ: ಹನುಮ ಧ್ವಜ ತೆರವು ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹನುಮಧ್ವಜ ತೆರವು ಖಂಡಿಸಿ ದಾವಣಗೆಯಲ್ಲಿ ಪ್ರತಿಭಟನೆ: ಹನುಮಧ್ವಜ ತೆರವು ಖಂಡಿಸಿ ದಾವಣಗೆರೆಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಬಿಜೆಪಿ ಕಾರ್ಯಕರ್ತರು ಪಿ ಬಿ ರಸ್ತೆಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಎಸಿ ಕಚೇರಿಗೆ ತೆರಳಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹರಿಹರ ಬಿಜೆಪಿ ಶಾಸಕ ಬಿ ಪಿ‌ ಹರೀಶ್ ಮಾತನಾಡಿ, "ಸಿಎಂ ಸಿದ್ದರಾಮಯ್ಯ ಅವರು ಹಿಂದೂ ಕಾರ್ಯಕರ್ತರನ್ನು, ಕೇಸರಿ ಧ್ವಜವನ್ನು ಕೆಂಗಣ್ಣಿನಿಂದ ನೋಡುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ: ಹನುಮಧ್ವಜ ತೆರವು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಮುಖಂಡರು ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹನುಮ ಧ್ವಜ ತೆರವು ವಿವಾದ: ಕೆರಗೋಡು ಗ್ರಾಮದಿಂದ ಬಿಜೆಪಿ ಬೃಹತ್​ ಪಾದಯಾತ್ರೆ

Last Updated : Jan 29, 2024, 10:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.