ETV Bharat / state

ವಾಲ್ಮೀಕಿ ನಿಗಮದ ಹಗರಣ: ಎಸ್​ಐಟಿ ವಿಚಾರಣೆ ಎದುರಿಸಿದ ಮಾಜಿ ಸಚಿವ ನಾಗೇಂದ್ರ, ದದ್ದಲ್ - valmiki corporation scam

author img

By ETV Bharat Karnataka Team

Published : Jul 9, 2024, 9:20 PM IST

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಎದುರು ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷರೂ ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಸನಗೌಡ ದದ್ದಲ್‌ ವಿಚಾರಣೆಗೆ ಹಾಜರಾದರು.

ಎಸ್​ಐಟಿ ವಿಚಾರಣೆ ಎದುರಿಸಿದ ಮಾಜಿ ಸಚಿವ ನಾಗೇಂದ್ರ, ನಿಗಮ‌ ಅಧ್ಯಕ್ಷ ದದ್ದಲ್
ಎಸ್​ಐಟಿ ವಿಚಾರಣೆ ಎದುರಿಸಿದ ಮಾಜಿ ಸಚಿವ ನಾಗೇಂದ್ರ, ನಿಗಮ‌ ಅಧ್ಯಕ್ಷ ದದ್ದಲ್ (ETV Bharat)

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 94.73 ಕೋಟಿ ರೂ. ಅವ್ಯವಹಾರ ಆರೋಪ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ‌ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.

ಬಹುಕೋಟಿ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದ ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್ ಹಾಗೂ ಈತನ ಸಂಬಂಧಿ ನಾಗೇಶ್ವರ್ ರಾವ್ ವಿಚಾರಣೆ ವೇಳೆ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರ ಹೆಸರು ಕೇಳಿ ಬಂದಿತ್ತು. ಹೀಗಾಗಿ ಹಗರಣದಲ್ಲಿ ಇವರ ಪಾತ್ರದ ಬಗ್ಗೆ ತಿಳಿಯಲು ಅಧಿಕಾರಿಗಳು ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದ್ದರು. ಅದರಂತೆ ಇಂದು ಬೆಳಗ್ಗೆ ನಾಗೇಂದ್ರ ಹಾಜರಾದರೆ, ಮಧ್ಯಾಹ್ನ 3 ಗಂಟೆ ವೇಳೆ ಬಸನಗೌಡ ದದ್ದಲ್ ಎಸ್ಐಟಿ ಮುಂದೆ ಹಾಜರಾಗಿದ್ದಾರೆ. ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಮನೀಶ್ ಕರ್ಬಿಕರ್ ನೇತೃತ್ವದಲ್ಲಿ ತನಿಖಾಧಿಕಾರಿಗಳು ಇಬ್ಬರು ಶಾಸಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಸತತ 7 ಗಂಟೆ ವಿಚಾರಗೆ ಒಳಗಾದ ನಾಗೇಂದ್ರ: ಎಸ್ಐಟಿ ನೋಟಿಸ್​​ ಸಂಬಂಧ ಇಂದು ಬೆಳಗ್ಗೆ ಹಾಜರಾಗಿದ್ದ ನಾಗೇಂದ್ರ ಅವರನ್ನು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಅವ್ಯವಹಾರ ಆಗಿರುವುದು ಗೊತ್ತಾಗಿದ್ದು ಯಾವಾಗ?, ಅಧಿಕಾರಿಗಳು ನಿಮ್ಮ ಗಮನಕ್ಕೆ ತಂದಿದ್ದು ಯಾವಾಗ?, ಹಗರಣ ಬೆಳಕಿಗೆ ಬಂದ ಬಳಿಕ ಕೈಗೊಂಡ ಕ್ರಮಗಳೇನು? ಎಂಬ ಪ್ರಶ್ನಿಗಳು ಸೇರಿದಂತೆ ಹತ್ತು ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ನಿಗಮದ ಅಧ್ಯಕ್ಷರಿಗೂ ಇದೇ ದಾಟಿಯಲ್ಲಿ ಪ್ರಶ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ನಿಗಮದ 94.73 ಕೋಟಿ ಹಣ ದುರ್ಬಳಕೆ ಆರೋಪ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಈಗಾಗಲೇ 11 ಮಂದಿಯನ್ನು ಬಂಧಿಸಿ ಸುಮಾರು 30 ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮುಡಾ ಹಗರಣ ಪ್ರಕರಣ: ಸಿಎಂ ರಾಜೀನಾಮೆ ನೀಡಬೇಕು, ನ್ಯಾಯಾಂಗ ತನಿಖೆಯಾಗಬೇಕು: ಸಿಟಿ ರವಿ ಆಗ್ರಹ - C T Ravi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.