ETV Bharat / state

ವಾಲ್ಮೀಕಿ ನಿಗಮ ಪ್ರಕರಣ - ಮಾಜಿ ಸಚಿವ ಬಿ.ನಾಗೇಂದ್ರ ಬಂಧನ: ಜುಲೈ 18ರವರೆಗೂ ಇಡಿ ವಶಕ್ಕೆ - B Nagendra arrested

ಮನೆ ಮೇಲೆ ದಾಳಿ ನಡೆಸಿ ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಚಿವರನ್ನು ಬಂಧಿಸಿ, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

FORMER MINISTER B NAGENDRA ARRESTED, ED CUSTODY TILL JULY 18
ಮಾಜಿ ಸಚಿವ ಬಿ.ನಾಗೇಂದ್ರ ಬಂಧನ (ETV Bharat)
author img

By ETV Bharat Karnataka Team

Published : Jul 13, 2024, 8:57 AM IST

Updated : Jul 13, 2024, 10:58 AM IST

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಜುಲೈ 18ರವರೆಗೂ ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಮಾಜಿ ಸಚಿವ ಬಿ.ನಾಗೇಂದ್ರ ಬಂಧನ (ETV Bharat)

ಶುಕ್ರವಾರ ಮುಂಜಾನೆ ಡಾಲರ್ಸ್ ಕಾಲೊನಿಯಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಅವರನ್ನು ವಶಕ್ಕೆ ಪಡೆದಿದ್ದ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ತಡರಾತ್ರಿ ನಾಗೇಂದ್ರ ಅವರನ್ನು ಕಚೇರಿಯಲ್ಲಿರಿಸಿಕೊಂಡ ಅಧಿಕಾರಿಗಳು ಇಂದು ಮುಂಜಾನೆ ಅವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ನಂತರ ಸಂಪಿಗೆಹಳ್ಳಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಈ ವೇಳೆ, ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು 14 ದಿನಗಳ ಕಾಲ ವಶಕ್ಕೆ ನೀಡುವಂತೆ ಇಡಿ ಅಧಿಕಾರಿಗಳು ಮನವಿ ಸಲ್ಲಿಸಿದರು. ಆದರೆ ನ್ಯಾಯಾಧೀಶರು ಜುಲೈ 18ರವರೆಗೆ ನಾಗೇಂದ್ರ ಅವರನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ಅಕ್ರಮದಲ್ಲಿ ನನ್ನ ಪಾತ್ರವಿಲ್ಲ: ಇನ್ನು ಕಸ್ಟಡಿಗೆ ಪಡೆದ ಬಳಿಕ ಶಾಂತಿನಗರದ ಇಡಿ ಕಚೇರಿ ಬಳಿ ಕರೆತಂದಾಗ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಬಿ. ನಾಗೇಂದ್ರ, "ನಿಗಮದಲ್ಲಿನ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ, ಇ.ಡಿ ಅಧಿಕಾರಿಗಳು ನನ್ನನ್ನು ಯಾಕೆ ಬಂಧಿಸಿದ್ದಾರೆ ಎಂದು ಗೊತ್ತಿಲ್ಲ. ತನಗೂ ವಾಲ್ಮೀಕಿ ನಿಗಮದ ಅಕ್ರಮಕ್ಕೂ ಸಂಬಂಧವಿಲ್ಲ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಬಂಧನ - ED ARREST B NAGENDRA

Last Updated : Jul 13, 2024, 10:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.