ETV Bharat / state

ಟಗರು ಮೇಲೆ ಪ್ರೀತಿ ಅಲ್ಲ, ಹೊಗಳುಭಟ್ಟರು ಸಿದ್ದರಾಮಯ್ಯನ ಹಾಳು ಮಾಡಿದ್ದಾರೆ: ಸಿ.ಎಂ. ಇಬ್ರಾಹಿಂ - Ibrahim Reaction On CM - IBRAHIM REACTION ON CM

ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ಜನರನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಟೀಕೆ ಮಾಡುವುದೇ ವಿರೋಧ ಪಕ್ಷದ ಕೆಲಸವಾಗಿದೆ ಎಂದು ಸಿ.ಎಂ. ಇಬ್ರಾಹಿಂ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

IBRAHIM REACTION ON CM
ಮಾಜಿ ಸಚಿವ ಸಿಎಂ ಇಬ್ರಾಹಿಂ (ETV Bharat)
author img

By ETV Bharat Karnataka Team

Published : Sep 5, 2024, 7:46 PM IST

ಮಾಜಿ ಸಚಿವ ಸಿಎಂ ಇಬ್ರಾಹಿಂ (ETV Bharat)

ಹುಬ್ಬಳ್ಳಿ: ಟಗರು ಮೇಲೆ ಪ್ರೀತಿ ಅಂತ ಅಲ್ಲ. ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಭ್ರಷ್ಟಾಚಾರ ಮಾಡಿದವನಲ್ಲ. ದುಡ್ಡು ಮಾಡಬೇಕಿದ್ದರೇ ಈ ಹಿಂದೆ ಅಧಿಕಾರದ ಅವಧಿಯಲ್ಲಿಯೇ ಸಾಕಷ್ಟು ಮಾಡ್ತಿದ್ದರು. ಆದರೆ, ಅಂತಹ ಕಾರ್ಯಕ್ಕೆ ಕೈ ಹಾಕಿಲ್ಲ. ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವ ಸಿ ಎಂ ಇಬ್ರಾಹಿಂ ಹೇಳಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೈತಿಕತೆ ಇದ್ದರೆ ಬಿಜೆಪಿ ನಾಯಕರು ರಾಜೀನಾಮೆ ಕೊಡಬೇಕಿತ್ತು.‌ ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿ, ನಿರುದ್ಯೋಗ, ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಮಾತನಾಡದೇ ಬಿಜೆಪಿಯವರು ಬೇರೆಯದೇ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯವರು ಭ್ರಷ್ಟಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಗ್ಗೆ ಮಾತನಾಡುತ್ತಾರೆ. ಇದು ಬಾಲಿಶ. ನಿಮ್ಮ ಅಧಿಕಾರದ ಅವಧಿಯಲ್ಲಿ ನೀವು ಏನು ಮಾಡಿ ಬಂದಿದ್ದೀರಾ? ನಿಮ್ಮ ಮನವ ಸಂತೈಸಿಕೊಳ್ಳಿ ಎಂದು ಇಬ್ರಾಹಿಂ ಲೇವಡಿ ಮಾಡಿದರು.

ಮುಡಾ (ಮೈಸೂರಿನ ನಗಾರಭಿವೃದ್ಧಿ ಪ್ರಾಧಿಕಾರ) ಪ್ರಕರಣ ಈಗ ಕೋರ್ಟ್​​ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಟೀಕೆ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೋ ಅರ್ಥವಾಗುತ್ತಿಲ್ಲ. ಪ್ರಧಾನಿ ಮೋದಿಯವರ ಮುಂದೆ ಬಾಯ್ಬಿಟ್ಟು ಮಾತನಾಡುವ ಧೈರ್ಯ ಇಲ್ಲದವರು ರಾಜ್ಯದ ಅಭಿವೃದ್ಧಿ ಬಗ್ಗೆ ಏನು‌ ಮಾಡಲು ಸಾಧ್ಯ? ಬಿಜೆಪಿ ಹಾಗೂ ಕಾಂಗ್ರೆಸ್​ನವರು ಒಟ್ಟುಗೂಡಿ ಚಳವಳಿ ಮಾಡಿ ನಮ್ಮ‌ ರಾಜ್ಯದ ಹಕ್ಕು ನಮಗೆ ಕೊಡಿ ಎಂದು ಹೋರಾಟ ಮಾಡುವಂತೆ ಸಲಹೆ ನೀಡಿದರು.

ಸಿಎಂ ನೈತಿಕತೆಯಿಂದ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿಗರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಇಬ್ರಾಹಿಂ, ಯಾಕೆ ರಾಜೀನಾಮೆ ಕೊಡಬೇಕು. ಎಲ್ಲಿದೆ ನೈತಿಕತೆ? ಮೋದಿಯವರು ನೈತಿಕತೆಯಿಂದ ರಾಜೀನಾಮೆ ನೀಡಿದ್ದಾರೆಯೇ? ಅದೆಷ್ಟೋ ರೈಲು ಅಪಘಾತಗಳಾಗಿವೆ, ಸುಮಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೇಂದ್ರದ ಬಿಜೆಪಿ ನಾಯಕರು ನೈತಿಕತೆಯಿಂದ‌ ರಾಜೀನಾಮೆ ಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 23 ಕೋಟಿ ಅಕ್ರಮ; ಎಸ್ಐಟಿ ತನಿಖೆಗೆ ಕೋರಿ ರಮೇಶ್ ಬಾಬು ಸಿಎಂಗೆ ಪತ್ರ - Bhagya lakshmi scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.