ETV Bharat / state

ಪರಪ್ಪನ ಅಗ್ರಹಾರಕ್ಕೆ ಹೆಚ್.ಡಿ.ರೇವಣ್ಣ ಶಿಫ್ಟ್​: ವಿಚಾರಣಾಧೀನ ಖೈದಿ ಸಂಖ್ಯೆ 4567, ಅವರ ರಾತ್ರಿ ಊಟದ ಮೆನು ಹೀಗಿದೆ! - H D Revanna - H D REVANNA

ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

h d revanna
ಕಾರಾಗೃಹಕ್ಕೆ ಹೆಚ್.ಡಿ.ರೇವಣ್ಣ ಶಿಫ್ಟ್​ (ETV Bharat)
author img

By ETV Bharat Karnataka Team

Published : May 8, 2024, 7:54 PM IST

Updated : May 8, 2024, 9:52 PM IST

ಪರಪ್ಪನ ಅಗ್ರಹಾರಕ್ಕೆ ಹೆಚ್.ಡಿ.ರೇವಣ್ಣ ಶಿಫ್ಟ್ (ETV Bharat)

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲಾಗಿದೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮೇ 4 ರಂದು ಬಂಧಿತರಾಗಿರುವ ರೇವಣ್ಣ ಅವರನ್ನ ಈ ಹಿಂದೆ ನಾಲ್ಕು ದಿನಗಳವರೆಗೆ ಎಸ್ಐಟಿ ವಶಕ್ಕೆ ನೀಡಲಾಗಿತ್ತು. ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಂದು ಅವರನ್ನು 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಹೆಚ್. ಡಿ. ರೇವಣ್ಣ ಅವರನ್ನು ಮೇ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆತರಲಾಗಿದೆ.

ವಿಚಾರಣಾಧೀನ ಖೈದಿ ಸಂಖ್ಯೆ - 4567: ರೇವಣ್ಣ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿದೆ. ಜೈಲು ಅಧಿಕಾರಿಗಳು ಯುಟಿಪಿ ನಂಬರ್ 4567ಅನ್ನು ರೇವಣ್ಣ ಅವರಿಗೆ ನೀಡಿದ್ದಾರೆ. ಸದ್ಯ ಕಾರಾಗೃಹದಲ್ಲಿನ ಕ್ವಾರಂಟೈನ್ ವಿಭಾಗದ ಪ್ರತ್ಯೇಕ ಕೊಠಡಿಯಲ್ಲಿ ರೇವಣ್ಣ ಅವರನ್ನು ಇರಿಸಲಾಗಿದೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ. ರೇವಣ್ಣ ಅವರಿಗೆ ಜೈಲಿನ ಇಂದಿನ ಮೆನು ಪ್ರಕಾರ ಮುದ್ದೆ, ಚಪಾತಿ, ಅನ್ನ ಸಾಂಬಾರ್ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಬಿಗಿ ಪೊಲೀಸ್​ ಭದ್ರತೆ: ರೇವಣ್ಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕರೆತರುವ ಹಿನ್ನೆಲೆಯಲ್ಲಿ ಜೈಲಿನ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಜೈಲಿನ ಚೆಕ್ ಪೋಸ್ಟ್ ಬಳಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಐವರು ಇನ್ಸ್​ಪೆಕ್ಟರ್​ಗಳು ಬಂದೋಬಸ್ತ್ ಕೈಗೊಂಡಿದ್ದರು. ಬ್ಯಾರಿಕೇಡ್​ ಹಾಕಿ ಜೈಲು ರಸ್ತೆ ಸಂಪರ್ಕ ಬಂದ್ ಮಾಡಲಾಗಿತ್ತು.

ಇದನ್ನೂ ಓದಿ: ಮೇ 14ರವರೆಗೂ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ - H D REVANNA

Last Updated : May 8, 2024, 9:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.