ETV Bharat / state

ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ನಾಪತ್ತೆ: ಕೂಳೂರು ಸೇತುವೆ ಮೇಲೆ ಕಾರು ಪತ್ತೆ - Moidin Bava Brother Missing

ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ನಾಪತ್ತೆಯಾಗಿದ್ದಾರೆ. ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಕಂಡುಬಂದಿದೆ.

mamtaj ali missing
ಘಟನಾ ಸ್ಥಳದಲ್ಲಿ ಮೊಯ್ದಿನ್ ಬಾವ ಕಣ್ಣೀರು, ನಾಪತ್ತೆಯಾಗಿರುವ ಮುಮ್ತಾಜ್ ಅಲಿ (ETV Bharat)
author img

By ETV Bharat Karnataka Team

Published : Oct 6, 2024, 9:47 AM IST

Updated : Oct 6, 2024, 10:00 AM IST

ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ.

ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟಿದ್ದರು. ಬಳಿಕ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಬಿಎಂಡಬ್ಲ್ಯು ಕಾರು ದೊರೆತಿದೆ. ಅವರ ಪುತ್ರಿಗೆ ಈ ವಿಚಾರ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮುಮ್ತಾಜ್ ಅಲಿ ನಾಪತ್ತೆ ಬಗ್ಗೆ ಕಮಿಷನರ್​ ಮಾಹಿತಿ (ETV Bharat)

ಮುಮ್ತಾಜ್ ಅಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮೊಯ್ದಿನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ‌. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಮಮ್ತಾಜ್ ಆಲಿ ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

mumtaj ali missing
ನದಿಯಲ್ಲಿ ಹುಡುಕಾಟ (ETV Bharat)

ಪೊಲೀಸ್ ಕಮಿಷನರ್ ಹೇಳಿದ್ದೇನು?: ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ''ಇಂದು ಮುಂಜಾನೆ ಕುಳೂರು ಸೇತುವೆ ಬಳಿ ಉದ್ಯಮಿ ಮುಮ್ತಾಜ್ ಅಲಿ ವಾಹನ ಪತ್ತೆಯಾಗಿದೆ ಎಂಬ ಮಾಹಿತಿ ನಮಗೆ ಬಂತು. ಅವರು ಸೇತುವೆಯಿಂದ ಜಿಗಿದಿರಬಹುದು ಎಂಬ ಶಂಕೆ ಇದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ 3 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಮನೆಯಿಂದ ಹೊರಟು ನಗರದೆಲ್ಲೆಡೆ ಸುತ್ತಾಡಿದ್ದು, 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಕಾರನ್ನು ನಿಲ್ಲಿಸಿದ್ದಾರೆ. ನಂತರ ಅವರ ಮಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಕೋಸ್ಟ್ ಗಾರ್ಡ್ ತಂಡಗಳು ನದಿಯಲ್ಲಿ ಹುಡುಕಾಟ ನಡೆಸುತ್ತಿವೆ'' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ವರುಣಾರ್ಭಟ: ವಾಹನ ಸವಾರರ ಪರದಾಟ, ಇನ್ನೂ 4 ದಿನ ಮಳೆ ಮುನ್ಸೂಚನೆ - Bengaluru Rain

Last Updated : Oct 6, 2024, 10:00 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.