ಬೆಂಗಳೂರು : ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ವಂಚನೆ ಮಾಡಿದ ಆರೋಪದ ಹಿನ್ನೆಲೆ ಐಶ್ವರ್ಯ ಗೌಡ ವಿರುದ್ಧ ಮಾಜಿ ಸಂಸದ ಡಿ. ಕೆ ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ.
ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ. ಕೆ ಸುರೇಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಡಿ. ಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ.
ಐಶ್ವರ್ಯ ಗೌಡ ಎಂಬುವವರು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು, ಜನರಿಗೆ ವಂಚನೆ ಮಾಡುತ್ತಿರುವುದು ಮಾಧ್ಯಮಗಳಲ್ಲಿ ಕೆಲವು ದಿನಗಳಿಂದ ವರದಿಯಾಗುತ್ತಿದೆ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಅವರ ಮೇಲೆ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುತ್ತಿದ್ದು, ಬೆಂಗಳೂರಿನ ನಗರ ಪೋಲೀಸ್ ಆಯುಕ್ತರು, @BlrCityPoliceಗೆ ದೂರು ಸಲ್ಲಿಸಿದ್ದೇನೆ. ನನ್ನ… pic.twitter.com/V9eAyX4a8l
— DK Suresh (@DKSureshINC) December 30, 2024
ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ಎಂಬುವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಡಿ ಕೆ ಸುರೇಶ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಜ್ಯುವೆಲರಿ ಶಾಪ್ ಮಾಲೀಕನಿಗೆ ವಂಚನೆ ಆರೋಪ: ಆರೋಪಿ ಶ್ವೇತಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ - FIR ON SHWETA GOWDA