ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯ - Prajwal Revanna - PRAJWAL REVANNA
ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅವಧಿ ಸೋಮವಾರ ಮುಗಿಯಲಿದ್ದು, ತನಿಖಾ ತಂಡದ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
Published : Jun 10, 2024, 9:14 AM IST
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೊಮ್ಮೆ ಪಡೆಯಲು ಎಸ್ಐಟಿ ಸಜ್ಜಾಗಿದೆ.
ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 10ರವರೆಗೆ ಎಸ್ಐಟಿ ತಂಡ ವಶಕ್ಕೆ ಪಡೆದುಕೊಂಡಿತ್ತು. ಪ್ರಜ್ವಲ್ ವಿದೇಶದಿಂದ ಬರುತ್ತಿದ್ದಂತೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದರು.
ಇದನ್ನೂ ಓದಿ: ಮಧ್ಯಂತರ ನಿರೀಕ್ಷಣಾ ಜಾಮೀನು ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಭವಾನಿ ರೇವಣ್ಣ ಹಾಜರು - Bhavani Revanna SIT Investigation
ಈಗಾಗಲೇ ಹೊಳೆನರಸೀಪುರದ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮತ್ತೊಂದೆಡೆ, ಅಶ್ಲೀಲ ವಿಡಿಯೋಗಳು ಚಿತ್ರೀಕರಣಗೊಂಡಿವೆ ಎನ್ನಲಾದ ಮೂಲ ಮೊಬೈಲ್ ಫೋನ್‌ಗಾಗಿಯೂ ತಲಾಶ್ ಮುಂದುವರೆದಿದೆ. ಇದಲ್ಲದೆ, ಪ್ರಕರಣ ದಾಖಲಾದ ಬಳಿಕ ಒಂದು ತಿಂಗಳ ಕಾಲ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಅವರ ಆಪ್ತ ವಲಯದ ಕೆಲವರಿಗೆ ನೋಟಿಸ್ ನೀಡಲು ಎಸ್ಐಟಿ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಹೊಳೆನರಸೀಪುರದ ಮನೆಗೆ ಪ್ರಜ್ವಲ್ ರೇವಣ್ಣ ಕರೆತಂದು ಸ್ಥಳ ಮಹಜರು ನಡೆಸಿದ ಎಸ್ಐಟಿ - Prajwal Revanna Case