ETV Bharat / state

ಸತತ ಐದನೇ ದಿನವೂ ಮೊಮ್ಮಗನ ಪರ ಪ್ರಚಾರ ನಡೆಸಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು - HD DEVEGOWDA CAMPAIGN

ನಿಖಿಲ್​ ಕುಮಾರಸ್ವಾಮಿ ಗೆದ್ದರೆ ಮೇಕೆದಾಟು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೆಚ್​.ಡಿ.ದೇವೇಗೌಡರು ಭರವಸೆ ನೀಡಿದ್ದಾರೆ.

Former PM HD DeveGowda campaigned for his grandson for the fifth consecutive day
ಸತತನ ಐದನೇ ದಿನವೂ ಮೊಮ್ಮಗನ ಪರ ಪ್ರಚಾರ ನಡೆಸಿದ ಹೆಚ್​.ಡಿ.ದೇವೇಗೌಡ್ರು (ETV Bharat)
author img

By ETV Bharat Karnataka Team

Published : Nov 9, 2024, 8:08 PM IST

ರಾಮನಗರ: "ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ" ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ.

ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ ಮಾಜಿ ಪ್ರಧಾನಿ, "ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸುವ ಮೂಲಕ ಪ್ರಧಾನಿ ಮೋದಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಲಪಡಿಸಿ" ಎಂದು ಮತದಾರರಲ್ಲಿ ಮನವಿ ಮಾಡಿದರು.

Former PM HD DeveGowda campaigned for his grandson for the fifth consecutive day
ಸತತನ ಐದನೇ ದಿನವೂ ಮೊಮ್ಮಗನ ಪರ ಪ್ರಚಾರ ನಡೆಸಿದ ಹೆಚ್​.ಡಿ.ದೇವೇಗೌಡ್ರು (ETV Bharat)

ಕಾಂಗ್ರೆಸ್​ನ ನಡತೆ ಮತ್ತು ಸಂಸ್ಕೃತಿಯನ್ನು ಕಟುವಾಗಿ ಟೀಕಿಸಿದ ಅವರು, "ಈ ಸರ್ಕಾರ ಜನರನ್ನು ಸುಲಿಗೆ ಮಾಡುತ್ತಿದೆ. ಎಲ್ಲಾ ರೀತಿಯಲ್ಲಿಯೂ ಜನತೆಯನ್ನು ಶೋಷಣೆ ಮಾಡುತ್ತಿದೆ. ಇಂಥ ಸರ್ಕಾರ ಇರಬಾರದು. ಇದ್ದರೆ ಜನರಿಗೆ ಒಳ್ಳೆಯದು ಆಗುವುದಿಲ್ಲ" ಎಂದು ಗುಡುಗಿದರು.

ಮೇಕೆದಾಟು ಮಾಡಿಯೇ ತೀರುತ್ತೇವೆ: "ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಕಾರ್ಯಗತ ಮಾಡಲು ಸಾಧ್ಯವಿಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಗೆದ್ದರೆ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಹೋರಾಟ ನಡೆಸಿ ಮೇಕೆದಾಟು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ" ಎಂದು ದೇವೇಗೌಡರು ಭರವಸೆ ನೀಡಿದರು.

ಐಎನ್​ಡಿಐಎ ಮೈತ್ರಿಕೂಟವನ್ನು ಟೀಕಿಸಿದ ದೇವೇಗೌಡರು, "ಅವರ ಮೈತ್ರಿಕೂಟದಲ್ಲಿ ಪ್ರಧಾನಿಯಾಗಬಲ್ಲ ಯಾವುದೇ ನಾಯಕ ಇದ್ದಾರೆಯೇ? ಸ್ಟಾಲಿನ್ ಅಥವಾ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬಹುದೇ?" ಎಂದು ಟಾಂಗ್ ನೀಡಿದರು.

ಐದು ಗ್ಯಾರಂಟಿಗಳನ್ನು ಪ್ರಶ್ನಿಸಿದ ಮಾಜಿ ಪ್ರಧಾನಿ, "ಮಾಡುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು. ಜನರ ನಿರೀಕ್ಷೆ ತಲುಪುವಲ್ಲಿ ಇವು ವಿಫಲವಾಗಿವೆ. ಇವುಗಳನ್ನು ಬಹಳ ಕಾಲ ನಿಭಾಯಿಸಲು ಸರಕಾರದಿಂದ ಆಗುವುದಿಲ್ಲ. ಅಗ್ಗದ ಭರವಸೆಗಳನ್ನು ಕೊಟ್ಟು ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಆದರೆ, ಸಾಮಾಜಿಕವಾಗಿ, ಆರ್ಥಿಕವಾಗಿ ದುರ್ಬಲ ಜನರನ್ನು ಬಲಪಡಿಸಬೇಕು. ನಾನು ಕಾಡುಗೊಲ್ಲ ಮತ್ತು ಬೆಸ್ತ ಸಮುದಾಯಗಳನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ಖಚಿತ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಕಾಡುಗೊಲ್ಲ ಸಮುದಾಯವನ್ನು ಈ ಪ್ರವರ್ಗಕ್ಕೆ ಸೇರಿಸಲು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದೇನೆ" ಎಂದು ಹೇಳಿದರು.

ಸತತ ಐದನೇ ದಿನ ಮಣ್ಣಿನ ಮಗನ ಪ್ರಚಾರ: ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಸತತ ಐದನೇ ದಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿ, ನಿವಾರ ಎಸ್​.ಎಂ.ಹಳ್ಳಿ, ಮಳೂರು ಪಟ್ಟಣ, ಚೆಕ್ಕರೆ ಹಾಗೂ ಮತ್ತಿಕೆರೆ ಭಾಗಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. 1957ರಲ್ಲಿ ಚನ್ನಪಟ್ಟಣ ರಾಜಕೀಯದಲ್ಲಿ ತಮ್ಮ ಆರಂಭಿಕ ಹೆಜ್ಜೆಗಳನ್ನು ನೆನಪಿಸಿಕೊಂಡ ಅವರು, "ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲು ನಾನು ಆಗ ವರದೇಗೌಡರನ್ನು ಸಂಪರ್ಕಿಸಿದ್ದೆ" ಎಂದು ಹೇಳಿದರು.

ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ದೇವೇಗೌಡ ಅವರನ್ನು ಬಡವರ ಬಂಧು ಮತ್ತು ರೈತ ಬಂಧು" ಎಂದು ಶ್ಲಾಘಿಸಿದರು. ಕರ್ನಾಟಕದಾದ್ಯಂತ ನಿರ್ಣಾಯಕ ಯೋಜನೆಗಳನ್ನು ಮುನ್ನಡೆಸುವಲ್ಲಿ ಗೌಡರ ಪಾತ್ರವನ್ನು ಅವರು ಕೊಂಡಾಡಿದರು. "ಸ್ಥಳೀಯ ನೀರಾವರಿ ಯೋಜನೆ, ಅದರಲ್ಲಿಯೂ ಸತ್ತೇಗಾಲ ಯೋಜನೆಗೆ ಒತ್ತು ನೀಡಿದರು. ಈ ಪ್ರಯತ್ನದಲ್ಲಿ ಕುಮಾರಸ್ವಾಮಿ ಅವರ ದೂರದೃಷ್ಟಿಯನ್ನು ನಾವು ಸ್ಮರಿಸಲೇಬೇಕು" ಎಂದರು. ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮತ್ತು ಜೆಡಿಎಸ್​ನ ಹಿರಿಯ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಪರ ಸತತ 4ನೇ ದಿನವೂ ದೇವೇಗೌಡರಿಂದ ಪ್ರಚಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.