ETV Bharat / state

ತಾವು ಉದ್ಘಾಟಿಸಿದ್ದ ಉರಿ ಜಲ ವಿದ್ಯುತ್ ಘಟಕಕ್ಕೆ ದೇವೇಗೌಡ ಭೇಟಿ : ಶ್ರೀನಗರ - ಬಾರಾಮುಲ್ಲಾ ರೈಲಿನಲ್ಲಿ ಹೆಚ್​ಡಿಡಿ ಪ್ರಯಾಣ - H D DEVEGOWDA

ಮಾಜಿ ಪ್ರಧಾನಿ ಹೆಚ್.​ ಡಿ ದೇವೇಗೌಡ ಅವರು ಗುರುವಾರ ಉರಿ ಜಲ ವಿದ್ಯುತ್​​ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ, ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ಸ್ಮರಿಸಿದರು.

Former Prime Minister H D Devegowda
ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು (ETV Bharat)
author img

By ETV Bharat Karnataka Team

Published : Aug 29, 2024, 9:29 PM IST

Updated : Aug 29, 2024, 10:51 PM IST

ತಾವು ಉದ್ಘಾಟಿಸಿದ್ದ ಉರಿ ಜಲ ವಿದ್ಯುತ್ ಘಟಕಕ್ಕೆ ದೇವೇಗೌಡ ಭೇಟಿ (ETV Bharat)

ಬೆಂಗಳೂರು/ ಶ್ರೀನಗರ : 28 ವರ್ಷಗಳ ನಂತರ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ, ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು.

ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಾಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಬೆಳೆಸಿ, ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಈ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.

ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು, ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವು ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ - ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.

ವಿದ್ಯುತ್ ಸ್ಥಾವರದ ಉದ್ದಗಲಕ್ಕೂ ತೆರಳಿದ ಹೆಚ್​ಡಿಡಿ, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ನೆನಪು ಮಾಡಿಕೊಂಡರಲ್ಲದೆ, ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು, ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, ನಾನು ಪ್ರಧಾನಿ ಸ್ಥಾನದಿಂದ ಕೆಳಗಿಳಿದ 28 ವರ್ಷಗಳ ನಂತರ ಕಾಶ್ಮೀರಕ್ಕೆ ಭೇಟಿ ನೀಡಿದ್ದೇನೆ. ಅಂದಿನ ಕಾಶ್ಮೀರಕ್ಕೂ ಇಂದಿನ ಕಾಶ್ಮೀರಕ್ಕೂ ಬಹಳಷ್ಟು ವ್ಯತ್ಯಾಸ ಕಾಣುತ್ತಿದೆ. ನಾನು ಪ್ರಧಾನಿ ಆಗಿದ್ದಾಗ 13 ಫೆಬ್ರವರಿ 1997ರಂದು ಈ ಘಟಕವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದೆ. ನಿರ್ಮಾಣ ಹಂತದಲ್ಲಿದ್ದ ಈ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಆ ಭೇಟಿಗಳು ನನ್ನ ಪಾಲಿಗೆ ರೋಚಕ ಅನುಭವ ಎಂದು ಹೇಳಬಹುದು. ಮತ್ತೆ ಈ ವಿದ್ಯುತ್ ಘಟಕಕ್ಕೆ ಭೇಟಿ ನೀಡಿದ್ದು ಬಹಳ ಸಂತೋಷ ಉಂಟುಮಾಡಿದೆ ಎಂದರು.

ಇದೇ ವೇಳೆ ಮಾಜಿ ಪ್ರಧಾನಿ ಅವರು ಈ ವಿದ್ಯುತ್ ಘಟಕದ ಉದ್ಘಾಟನಾ ಫಲಕದ ಮುಂದೆ ನಿಂತು ಬಹಳ ಸಂತೋಷದಿಂದ ಫೋಟೋ ತೆಗೆಸಿಕೊಂಡರು. ಅಂದಿನ ಕಾರ್ಯಕ್ರಮದ ಕ್ಷಣಗಳನ್ನು ಅಧಿಕಾರಿಗಳ ಜತೆ ಹಂಚಿಕೊಂಡರು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋತರು.

ರೈಲು ಪ್ರಯಾಣದ ಬಗ್ಗೆ ಸಂತಸ : ಶ್ರೀನಗರ - ಬಾರಾಮುಲ್ಲಾ ನಡುವಿನ ರೈಲು ಪ್ರಯಾಣದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ ದೇವೇಗೌಡರು, ತಾವು ಪ್ರಧಾನಿಯಾಗಿದ್ದಾಗ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಈ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ ಸಂದರ್ಭವನ್ನು ಮೆಲುಕು ಹಾಕಿದರು.

1996, 1997ರ ಸಂದರ್ಭದಲ್ಲಿ ಕಾಶ್ಮೀರದ ಜನರು ಸಂಪರ್ಕ ಜಾಲದಿಂದ ವಂಚಿತರಾಗಿದ್ದರು. ಭಯೋತ್ಪಾದಕ ಚಟುವಟಿಕೆಗಳಿಂದ ಜರ್ಜರಿತರಾಗಿದ್ದರು. ಆ ಸಂದರ್ಭದಲ್ಲಿ ಬಾರಾಮುಲ್ಲಾ ಮತ್ತು ಶ್ರೀನಗರ ನಡುವೆ ರೈಲ್ವೆ ಮಾರ್ಗ ನಿರ್ಮಿಸುವ ಯೋಜನೆಗೆ ನಾನು ಮಂಜೂರಾತಿ ಕೊಟ್ಟಿದ್ದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದೆ. ಇವತ್ತು ಅದೇ ರೈಲು ಮಾರ್ಗದ ಪ್ರಯಾಣ ಮಾಡಿದ್ದು, ನನಗೆ ಮರೆಯಲಾಗದ ಅವಿಸ್ಮರಣೀಯ ಕ್ಷಣ ಎಂದು ಅವರು ಭಾವುಕರಾದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಅವರನ್ನು ರೈಲ್ವೆ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ರೈಲ್ವೆ ಮಾರ್ಗದ ಬಗ್ಗೆ ಜತೆಗೆ ಆಗುತ್ತಿರುವ ಉಪಯೋಗದ ಬಗ್ಗೆ ದೇವೇಗೌಡು ಮಾಹಿತಿ ಪಡೆದುಕೊಂಡರು. ತಾವು ಪ್ರಧಾನಿಯಾಗಿದ್ದಾಗ ಕಾಶ್ಮೀರದ ರೈತರಿಗಾಗಿ ಒಟ್ಟು ₹200 ಕೋಟಿ ಸಾಲ ಮನ್ನಾ ಮಾಡಿದ್ದೆ. ಕಣಿವೆ ರಾಜ್ಯದ ಪ್ರತಿ ರೈತರ ₹50,000 ಸಾಲ ಮನ್ನಾ ಮಾಡಲಾಯಿತು. ಅಂದು ಪ್ರಧಾನಿಯಾಗಿ ರೈತರನ್ನು ಭೇಟಿಯಾಗಿ ಅವರ ಸಂಕಷ್ಟವನ್ನು ಆಲಿಸಿದ್ದೆ. ಅವರಿಗೆ ನೆರವಾಗುವ ಉದ್ದೇಶದಿಂದ ಸಾಲ ಮನ್ನಾ ಮಾಡಲಾಯಿತು ಎಂದು ಸುದ್ದಿಗಾರರ ಜತೆ ಮಾತನಾಡುತ್ತಾ ಹೇಳಿದರು.

ಶುಕ್ರವಾರ ದಾಲ್ ಸರೋವರ, ಶಂಕರಾಚಾರ್ಯರ ದೇಗುಲಕ್ಕೆ ಭೇಟಿ : ಶುಕ್ರವಾರ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ಶ್ರೀನಗರದ ದಾಲ್ ಸರೋವರ ಹಾಗೂ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ : ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರ ಕಡೆಗಣನೆ: ಹೆಚ್.​ಡಿ.ದೇವೇಗೌಡ - H D Devegowda

Last Updated : Aug 29, 2024, 10:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.