ETV Bharat / state

ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ಹಾಸನದ ಯಸಳೂರಿನಲ್ಲಿ ಶಂಕುಸ್ಥಾಪನೆ - Elephant Arjuna Memorial - ELEPHANT ARJUNA MEMORIAL

ಮೈಸೂರು ದಸರಾ ಪ್ರಸಿದ್ಧಿಯ ಅರ್ಜುನ ಆನೆಯ ಸ್ಮಾರಕಕ್ಕೆ ಯಸಳೂರಲ್ಲಿ ಶನಿವಾರ ಅರಣ್ಯ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

CAPTAIN ARJUNAS MEMORIAL
ಕ್ಯಾಪ್ಟನ್​ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ (ETV Bharat)
author img

By ETV Bharat Karnataka Team

Published : Jul 7, 2024, 12:39 PM IST

ಹಾಸನ(ಸಕಲೇಶಪುರ): ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಡಿಸೆಂಬರ್ 4ರಂದು ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟ ಕ್ಯಾಪ್ಟನ್​ ಅರ್ಜುನನ ಸ್ಮಾರಕಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವರು, "ಕಾಡಾನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಮಾನವ-ವನ್ಯಜೀವಿ ಸಂಘರ್ಷದ ಕುರಿತು ಅಧ್ಯಯನಕ್ಕೆ ಒತ್ತು ನೀಡಲಾಗುವುದು. ಆನೆ ಹಾವಳಿ ತಪ್ಪಿಸಲು ಆಗಸ್ಟ್​ 12ರ ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುತ್ತದೆ. ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ. ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ ಎಂಬುದನ್ನು ತಿಳಿದುಕೊಳ್ಳುವ ಮೂಲಕ ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲೂ ಅಳವಡಿಸಿಕೊಳ್ಳುವುದು ಹೇಗೆಂಬ ಬಗ್ಗೆ ಚಿಂತನ-ಮಂಥನ ನಡೆಸಲಾಗುತ್ತದೆ" ಎಂದರು.

ಕ್ಯಾಪ್ಟನ್​ ಅರ್ಜುನನ ಸ್ಮಾರಕಕ್ಕೆ ಹಾಸನದ ಯಸಳೂರಲ್ಲಿ ಶಂಕುಸ್ಥಾಪನೆ
ಕ್ಯಾಪ್ಟನ್​ ಅರ್ಜುನ ಆನೆಯ ಸ್ಮಾರಕಕ್ಕೆ ಹಾಸನದ ಯಸಳೂರಲ್ಲಿ ಶಂಕುಸ್ಥಾಪನೆ (ETV Bharat)

"ಮೈಸೂರು ದಸರಾ ವೈಭವದ ಪ್ರಧಾನ ಆಕರ್ಷಣೆಯೇ ಜಂಬೂ ಸವಾರಿ. ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಈ ನಾಡಿನ ಹೆಮ್ಮೆ. ಅರ್ಜುನ ಆನೆ ಹಲವು ಯಶಸ್ವಿ ಆನೆ ಸೆರೆ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ ಮತ್ತು ಚಿರತೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ. ಆದರೆ, ಡಿ.4ರಂದು ದುರಾದೃಷ್ಟವಷಾತ್ ಕಾಡನೆಯೊಂದಿಗೆ ಕಾದಾಡಿ ಹುತಾತ್ಮನಾದ" ಎಂದು ಹೇಳಿದರು.

ಮೊದಲ ಪುಣ್ಯತಿಥಿಯೊಳಗೆ ಸ್ಮಾರಕ ನಿರ್ಮಾಣಕ್ಕೆ ಸೂಚನೆ: ಅರ್ಜುನನ ಸ್ಮಾರಕವನ್ನು ಡಿ.4ರ ಪ್ರಥಮ ಪುಣ್ಯತಿಥಿಯೊಳಗಾಗಿ ನಿರ್ಮಿಸುವಂತೆ ಸೂಚಿಸಿದ ಸಚಿವರು, "ಈ ಸ್ಮಾರಕದಲ್ಲಿ ಅರ್ಜುನನ ಸಾಹಸಗಳ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ, ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಶಿಬಿರದಲ್ಲಿದ್ದ. ಹೀಗಾಗಿ ಬಳ್ಳೆಯಲ್ಲೂ ಕೂಡ ಸ್ಮಾರಕ ನಿರ್ಮಿಸಲಾಗುವುದು" ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ, ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕೆಆರ್​ಎಸ್​ ಅಚ್ಚುಕಟ್ಟಿನ ವಿ.ಸಿ. ನಾಲೆಗೆ ಜು.8 ರಿಂದ ನೀರು ಬಿಡಲು ತೀರ್ಮಾನ: ಸಚಿವ ಚಲುವರಾಯಸ್ವಾಮಿ - CHALUVARAYA SWAMY

ETV Bharat Logo

Copyright © 2025 Ushodaya Enterprises Pvt. Ltd., All Rights Reserved.