ETV Bharat / state

ವಿಧಾನ ಪರಿಷತ್ ಉಪಚುನಾವಣೆ: ನಾಲ್ಕು ಅಭ್ಯರ್ಥಿಗಳು ಅಂತಿಮ ಕಣದಲ್ಲಿ - MLC BY ELECTIONS

ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್​ ಸೇರಿ ಅಂತಿಮವಾಗಿ ನಾಲ್ಕು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

MLC BY ELECTIONS
ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್) (ETV Bharat)
author img

By ETV Bharat Karnataka Team

Published : Oct 7, 2024, 7:22 PM IST

Updated : Oct 7, 2024, 7:54 PM IST

ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ವಾಪಸ್​ ಪಡೆಯಲು ಇಂದು ಕೊನೆಯ ದಿನವಾಗಿತ್ತು. ಇಂದು ಒಬ್ಬರು ಅಭ್ಯರ್ಥಿ ನಾಮಪತ್ರ ವಾಪಸ್​ ಪಡೆದಿದ್ದು, ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮುಹಮ್ಮದ್ ರಿಯಾಝ್ (ಪಕ್ಷೇತರ) ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಅಂತಿಮವಾಗಿ ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದತ್ (ಎಸ್​ಡಿ) ಮತ್ತು ದಿನಕರ ಉಳ್ಳಾಲ್ (ಪಕ್ಷೇತರ) ಅವರು ಕಣದಲ್ಲಿದ್ದಾರೆ. ಅ.21ರಂದು ಚುನಾವಣೆ ನಡೆಯಲಿದೆ.

ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು (ETV Bharat)

ವೀಕ್ಷಕರಿಂದ ಪರಿಶೀಲನೆ: ಚುನಾವಣಾ ಆಯೋಗದ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ಸೋಮವಾರ ಉಪಚುನಾವಣೆಯ ಸಿದ್ಧತೆ ಪರಿಶೀಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ ಮತದಾರರು ಇದ್ದಾರೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ., ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಉಡುಪಿ ಪೊಲೀಸ್ ಅಧೀಕ್ಷಕ ಅರುಣ್, ದ.ಕ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕುತೂಹಲದತ್ತ ಚನ್ನಪಟ್ಟಣ ಟಿಕೆಟ್: ದೆಹಲಿಗೆ ತೆರಳಿದ ಯೋಗೀಶ್ವರ್ - Channapatna By Election

Last Updated : Oct 7, 2024, 7:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.