ETV Bharat / state

ಜೋಗಕ್ಕೆ ಬರುತ್ತಿದ್ದ ಪ್ರವಾಸಿ ಬಸ್ ಪಲ್ಟಿ ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - BUS OVERTURNED

ಜೋಗ್​ ಫಾಲ್ಸ್​ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್,​​ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಬಳಿ ಪಲ್ಟಿಯಾಗಿದೆ. ಘಟನೆಯಲ್ಲಿ ಸುಮಾರು 15 ಜನರಿಗೆ ಗಂಭೀರ ಗಾಯವಾಗಿದೆ.

Bus-overturned
ಬಸ್ ಪಲ್ಟಿ (ETV Bharat)
author img

By ETV Bharat Karnataka Team

Published : 3 hours ago

Updated : 2 hours ago

ಶಿವಮೊಗ್ಗ/ ದಕ್ಷಿಣ ಕನ್ನಡ : ಮಂಗಳೂರಿನಿಂದ ಜೋಗಕ್ಕೆ ಬರುತ್ತಿದ್ದ ಪ್ರವಾಸಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಾಗರ ತಾಲೂಕು ಅರಳಗೋಡು ರಸ್ತೆ ತಿರುವಿನಲ್ಲಿ ನಡೆದಿದೆ. ಇಂದು ಮಂಗಳೂರಿನಿಂದ ಜೋಗ ಜಲಪಾತಕ್ಕೆ ಬರುತ್ತಿದ್ದ ಪ್ರವಾಸಿ ಬಸ್ ಭಟ್ಕಳ ರಸ್ತೆಯ ಮೂಲಕ ಶಿವಮೊಗ್ಗ ಜಿಲ್ಲೆ ಪ್ರವೇಶ ಪಡೆಯುತ್ತಿತ್ತು. ಈ ವೇಳೆ ಸಾಗರ ತಾಲೂಕಿನ ಅರಳಗೋಡು ಗ್ರಾಮದ ಬಳಿಯ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಬಸ್​ನಲ್ಲಿ ಸುಮಾರು 55 ಪ್ರಯಾಣಿಕರಿದ್ದರು. ಬಸ್ ಪಲ್ಟಿಯಾದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ತಕ್ಷಣ ಇವರನ್ನು ಅರಳಗೋಡು ಆಸ್ಪತ್ರೆ ಹಾಗೂ ಕಾರ್ಗಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಉಪವಿಭಾಗಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಿ ಬಸ್ ಪಲ್ಟಿ (ETV Bharat)

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿಗಳಾದ ಯಶೋಧ ಹಾಗೂ ದೀಕ್ಷಿತಾ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ಇವರ ಜೊತೆ ಬಸ್​ನಲ್ಲಿದ್ದ ಇಬ್ಬರು ಪುಟಾಣಿ ಮಕ್ಕಳಿಗೆ ತಲೆ ಹಾಗೂ ಕಣ್ಣಿಗೆ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಹಿಂಬದಿಯಲ್ಲಿ ಕಾರಿನಿಂದ ತೆರಳುತ್ತಿದ್ದ ಬಂಟ್ವಾಳ ಮೂಲದ ಇಂಜಿನಿಯರ್ ಆಗಿರುವ ಚೈತ್ರೇಶ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಮನಕ್ಕೆ ತಂದಿದ್ದಾರೆ.

ಶಾಸಕರು ಕೂಡಲೇ ಸ್ಪಂದಿಸಿದ್ದಲ್ಲದೆ ಗಾಯಾಳುಗಳನ್ನು ಅಲ್ಲಿನ ಸಾಗರ ಆಸ್ಪತ್ರೆಗೆ ದಾಖಲಿಸಲು ಬೇಕಾಗುವ ವ್ಯವಸ್ಥೆ ಕಲ್ಪಿಸಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರು ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಶಾಸಕರು ಮಾಡಿದ್ದಾರೆ ಎಂದು ಚೈತ್ರೇಶ್ ಮಾಹಿತಿ ನೀಡಿದರು.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಸಂಪರ್ಕ ಮಾಡಿದ್ದಾರೆ. ಜೊತೆಗೆ ಅಲ್ಲಿನ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರಿಗೆ ಘಟನೆಯ ಕುರಿತು ಮಾಹಿತಿ ‌ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ದೃಷ್ಟಿಯಿಂದ ಬೇಕಾಗುವ ಆಂಬ್ಯುಲೆನ್ಸ್ ವಾಹನಗಳನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಶಾಸಕರ ಮನವಿ ಮೇರೆಗೆ ಬಂಟ್ವಾಳದ ಉದ್ಯಮಿ ಉದಯಕುಮಾರ್ ಅವರ ಸೋದರ ಸಂಬಂಧಿಯಾಗಿರುವ ಜೋಗ ಕಾರ್ಗಲ್ ಪಟ್ಟಣ ಪಂಚಾಯತ್ ಸದಸ್ಯ ಹರೀಶ್ ಗೌಡ ಹಾಗೂ ಪಟ್ಟಣ ಪಂಚಾಯತ್ ಸದಸ್ಯರುಗಳಾದ ಬಾಲಸುಬ್ರಹ್ಮಣ್ಯ ಮತ್ತು ಗುರುಸಿದ್ದಪ್ಪ ಅವರು ಸ್ಥಳಕ್ಕೆ ಧಾವಿಸಿ, ಸುಮಾರು 10 ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ.

ಶಂಭೂರಿನ ಶ್ರೀ ಸಾಯಿ ಮಂದಿರದಿಂದ ಇಂದು ಬೆಳಗ್ಗೆ 5 ಗಂಟೆಗೆ ಖಾಸಗಿ ಬಸ್ ಮೂಲಕ ಪ್ರಯಾಣ ಕೈಗೊಂಡಿದ್ದರು. ಶಂಭೂರು, ಪಾಣೆಮಂಗಳೂರು, ಬಿಸಿ ರೋಡ್​ ಹಾಗೂ ಮಂಗಳೂರು ಕಡೆಯಿಂದ ಸುಮಾರು 55 ಜನರನ್ನು ಹತ್ತಿಸಿಕೊಂಡು ಜೋಗ್ ಫಾಲ್ಸ್​ಗೆ ತೆರಳಿದ್ದರು.

ಇದನ್ನೂ ಓದಿ : ಫರಂಗೀಪೇಟೆಯಲ್ಲಿ ಖಾಸಗಿ ಬಸ್​ ಪಲ್ಟಿ: 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ - Bus Overturned - BUS OVERTURNED

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.