ETV Bharat / state

ಧಾರಾಕಾರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ: ನಾಲ್ವರಿಗೆ ಗಾಯ - olympia theatre Wall collapse - OLYMPIA THEATRE WALL COLLAPSE

ಮೈಸೂರಿನಲ್ಲಿ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ.

ಧಾರಾಕಾರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ
ಧಾರಾಕಾರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ (ETV Bharat)
author img

By ETV Bharat Karnataka Team

Published : Jul 22, 2024, 5:12 PM IST

ಮೈಸೂರು: ಧಾರಾಕಾರ ಮಳೆಗೆ ನಗರದ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿದು ಬಿದ್ದ ಪರಿಣಾಮ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದು ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕುಸಿದು ಬಿದ್ದಿರುವ ಗೋಡೆಯ ಅವಶೇಷಗಳ ಕೆಳಗೆ ಸಿಲುಕಿದ ಬಟ್ಟೆ ಅಂಗಡಿ ಸ್ಟಾಲ್ ಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ಮಾಡಲಾಯಿತು.

ಇದನ್ನೂ ಓದಿ: ಶಿವಮೊಗ್ಗ: ಮಳೆಗೆ ಮನೆ ಗೋಡೆ ಕುಸಿದು ದಂಪತಿ, ಇಬ್ಬರು ಮಕ್ಕಳಿಗೆ ಗಾಯ - House Wall Collapse

ETV Bharat Logo

Copyright © 2025 Ushodaya Enterprises Pvt. Ltd., All Rights Reserved.