ಬಾಗಲಕೋಟೆ: ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ. ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಗುರುತಿಸಲಾಗಿದೆ. ಇವರು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರಾಗಿದ್ದು, ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು. ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಕಂಟೈನರ್ - ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ; ಗಂಗಾ ಸ್ನಾನಕ್ಕೆ ಹೊರಟಿದ್ದ 12 ಮಂದಿ ಸಾವು