ETV Bharat / state

ಉಡುಪಿ: ಕ್ಯಾಂಟರ್​ ಲಾರಿ - ಬೈಕ್​ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು - Four Killed Accident - FOUR KILLED ACCIDENT

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ.

accident
ಅಪಘಾತಕ್ಕೀಡಾದ ವಾಹನಗಳು (ETV Bharat)
author img

By ETV Bharat Karnataka Team

Published : Sep 30, 2024, 7:32 PM IST

ಉಡುಪಿ: ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಕಾರ್ಕಳ - ಧರ್ಮಸ್ಳಳ - ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಈ ದುರ್ಘಟನೆ ನಡೆದಿದೆ.

ಮೃತರನ್ನು ಸುರೇಶ ಆಚಾರ್ಯ (36), ಸಮೀಕ್ಷಾ (7), ಸುಶ್ಮಿತಾ (5) ಹಾಗೂ ಸುಶಾಂತ್ (2) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಪತ್ನಿ ಮೀನಾಕ್ಷಿ ಆಚಾರ್ಯ (32) ಎಂಬವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

accident
ಕ್ಯಾಂಟರ್​ ಲಾರಿ (ETV Bharat)

ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ತೆರಳುತ್ತಿದ್ದರು. ಇವರಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯ: ಕಂಟೈನರ್​ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - Mandya Road Accident

ETV Bharat Logo

Copyright © 2025 Ushodaya Enterprises Pvt. Ltd., All Rights Reserved.