ETV Bharat / state

ATM ಯಂತ್ರಗಳ ಬಳಿ ಸಹಾಯ ಕೇಳುವ ವೃದ್ಧರೇ ಇವರ ಟಾರ್ಗೆಟ್: ನಕಲಿ ಕಾರ್ಡ್ ಸ್ವೈಪ್ ಮಾಡಿ ವಂಚಿಸುತ್ತಿದ್ದ ಮೂವರ ಬಂಧ‌ನ - FRAUD CASE

ಎಟಿಎಂ ಯಂತ್ರಗಳ ಬಳಿ ಸಹಾಯ ಕೇಳಲು ಬರುತ್ತಿದ್ದ ವೃದ್ಧರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಮೂವರನ್ನು ಪುಲಿಕೇಶಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

FRAUD CASE
ಬಂಧಿತ ಆರೋಪಿಗಳು (ETV Bharat)
author img

By ETV Bharat Karnataka Team

Published : Feb 22, 2025, 1:17 PM IST

ಬೆಂಗಳೂರು : ವೃದ್ಧರನ್ನು ಗುರಿಯಾಗಿಸಿಕೊಂಡು ಎಟಿಎಂ ಯಂತ್ರಗಳ ಬಳಿ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಭಾರತ ಮೂಲದ ನಯಾಜ್, ಸುಧಾಂಶು ಹಾಗೂ ರಜೀಬ್ ಬಂಧಿತ ಆರೋಪಿಗಳು. ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಪುಲಕೇಶಿ ನಗರ ಪೊಲೀಸರು ತಿಳಿಸಿದ್ದಾರೆ.

ವಂಚಿಸುತ್ತಿದ್ದದ್ದು ಹೇಗೆ?: ಜನಸಂದಣಿ ಕಡಿಮೆ ಇರುವ ಅಥವಾ ನಿರ್ಜನ ಪ್ರದೇಶಗಳಲ್ಲಿರುವ ಎಟಿಎಂಗಳ ಬಳಿ ಇರುತ್ತಿದ್ದ ಆರೋಪಿಗಳು, ಹಣ ವಿತ್ ಡ್ರಾ ಮಾಡಲು ಬರುವ ವೃದ್ಧರನ್ನ ಟಾರ್ಗೆಟ್ ಮಾಡುತ್ತಿದ್ದರು. ಹಣ ವಿತ್ ಡ್ರಾ ಮಾಡಲು ನೆರವು ಕೇಳಿದಾಗ ಅವರಿಂದ ಡೆಬಿಟ್ ಕಾರ್ಡ್ ಹಾಗೂ ಪಿನ್ ಕೇಳಿ ಪಡೆದುಕೊಳ್ಳುತ್ತಿದ್ದರು. ಆದರೆ, ತಾವು ಮೊದಲೇ ಸಿದ್ಧವಿಟ್ಟುಕೊಂಡ ನಕಲಿ ಡೆಬಿಟ್ ಕಾರ್ಡ್‌ ಅನ್ನ ಎಟಿಎಂ ಯಂತ್ರದಲ್ಲಿ ಸ್ವೈಪ್ ಮಾಡಿ ಪಿನ್ ನಮೂದಿಸುತ್ತಿದ್ದರು. ಆದರೆ, ಹಣ ಬರದಿದ್ದಾಗ ತಾಂತ್ರಿಕ ಸಮಸ್ಯೆಯ ನೆಪ ಹೇಳಿ ಕಳುಹಿಸುತ್ತಿದ್ದರು. ಬಳಿಕ ತಾವು ಎಗರಿಸಿಟ್ಟುಕೊಂಡಿದ್ದ ಅಸಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ಹಣ ವಿತ್ ಡ್ರಾ ಮಾಡಿಕೊಂಡು ಪರಾರಿಯಾಗುತ್ತಿದ್ದರು.

ಎಗರಿಸಿದ ಹಣದಲ್ಲಿ ಸುಧಾಂಶು ಮತ್ತು ರಜೀಬ್ ತಮ್ಮ ತಮ್ಮ ಪತ್ನಿಯೊಂದಿಗೆ ಪ್ರವಾಸ ಕೈಗೊಂಡು ವಿಲಾಸಿ ಜೀವನ‌ ನಡೆಸಿದ್ದರು. ಸದ್ಯ ಮೂವರನ್ನೂ ಹೆಚ್ಚಿನ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದೇಶದಲ್ಲಿ ಹಾರ್ಸ್​ ಜಾಕಿ ಕೆಲಸಕ್ಕೆ ವೀಸಾ ಮಾಡಿಸಿಕೊಡುವುದಾಗಿ ವಂಚನೆ ಆರೋಪ: ದಂಪತಿ ಬಂಧನ - VISA FRAUD CASE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.