ETV Bharat / state

ಸೈಬರ್‌ ಕಳ್ಳರ ಬಗ್ಗೆ ಎಚ್ಚರಿಕೆ! ಕಸ್ಟಮ್ಸ್ ಅಧಿಕಾರಿ ಹೆಸರಿನಲ್ಲಿ ಉಡುಪಿಯ ವೈದ್ಯರಿಗೆ ₹1.33 ಕೋಟಿ ವಂಚನೆ - Udupi Cyber Crime Case - UDUPI CYBER CRIME CASE

ವಂಚನೆಗೊಳಗಾಗಿರುವ ಬಗ್ಗೆ ಡಾ.ಅರುಣ್ ಕುಮಾರ್ ಅವರು ಉಡುಪಿ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Udupi City Police Station
ಉಡುಪಿ ನಗರ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Aug 14, 2024, 5:38 PM IST

ಉಡುಪಿ: ಮುಂಬೈ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಹಣ ಕಳೆದುಕೊಂಡವರು. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?: ಜು.29ರಂದು ಡಾ.ಅರುಣ್ ಕುಮಾರ್​ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್‌ನಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾನೆ. ಬಳಿಕ, ನಿಮ್ಮ ಆಧಾರ್ ಸಂಖ್ಯೆ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200 ಗ್ರಾಂ ಎಂಡಿಎಂಎ ಹಾಗೂ 5,000 ಯುಎಸ್ ಡಾಲರ್ ಇದ್ದು, ಕೊರಿಯರ್ ಮುಂಬೈ ಕಸ್ಟಮ್ಸ್‌ ವಶದಲ್ಲಿರುವುದಾಗಿ ತಿಳಿಸಿದ್ದಾನೆ.

ಬಳಿಕ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಅರುಣ್ ಕುಮಾರ್‌ಗೆ ಕರೆ ಮಾಡಿ, ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯ ಬಗ್ಗೆ ದೂರು ಸ್ವೀಕರಿಸಲಾಗಿದೆ. ನಿಮ್ಮ ಆಧಾರ್ ಕಾರ್ಡ್‌ ಅನ್ನು ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿದ್ದು, ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದರು.

ಜು.29ರಿಂದ ಆ.9ರ ತನಕ ಅವರ ಮನೆಯ ರೂಮ್ ಒಂದರಲ್ಲಿ ಇರುವಂತೆ ಹಾಗೂ ಬೇರೆಯವರೊಂದಿಗೆ ಸಂಪರ್ಕಿಸದಂತೆಯೂ ಸೂಚಿಸಿದ್ದರು. ಈ ಪ್ರಕರಣವನ್ನು ಸರಿಪಡಿಸಲು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು, ಅದರಂತೆ ಅರುಣ್ ಕುಮಾರ್, ಆ.6ರಿಂದ ಆ.9ರತನಕ ಹಂತ ಹಂತವಾಗಿ ಒಟ್ಟು 1,33,81,000 ರೂ. ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಉಡುಪಿ ಆತ್ರಾಡಿ ನಿವಾಸಿ ಡಾ.ಅರುಣ್ ಕುಮಾರ್, ನೇಪಾಳದ ಕಠ್ಮಂಡುವಿನಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರೂ ಆಗಿದ್ದಾರೆ.

ಇದನ್ನೂ ಓದಿ: ಕೆಐಡಿಬಿಯಲ್ಲಿ ಬಹುಕೋಟಿ ವಂಚನೆ ಪ್ರಕರಣ: ಇಂದು ಮುಂದುವರಿದ ತನಿಖೆ, ಓರ್ವ ವಶ - ED Raids Continue

ETV Bharat Logo

Copyright © 2025 Ushodaya Enterprises Pvt. Ltd., All Rights Reserved.