ETV Bharat / state

ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ : ಡಿಸಿಎಂ ಡಿ ಕೆ ಶಿವಕುಮಾರ್ - GANDHI STATUE UNVEIL

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು ಎಂದಿದ್ದಾರೆ.

DCM DK Shivakumar
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Jan 18, 2025, 2:44 PM IST

ಬೆಳಗಾವಿ: "ಸುವರ್ಣ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ" ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದರು.

ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದರು. "ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ" ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು (ETV Bharat)

"ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು" ಎಂದು ಮಾಹಿತಿ ನೀಡಿದರು.

ಮುಡಾ ಅಕ್ರಮದ ಕುರಿತು ಇಡಿ ಸಂಸ್ಥೆಯ ತನಿಖೆ ವಿಚಾರದ ಕುರಿತು ಮಾತನಾಡಿ, "ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೇ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನೂ ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ" ಎಂದು ಹೇಳಿದರು.

Randeep Singh Surjewala, DK Shivakumar
ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದ ರಣದೀಪ್ ಸಿಂಗ್ ಸುರ್ಜೇವಾಲ , ಡಿ ಕೆ ಶಿವಕುಮಾರ್ (ETV Bharat)

ಈ ವೇಳೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿ.ಪಂ ಸಿಇಒ ರಾಹುಲ್ ಶಿಂಧೆ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ : ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ: ವರ್ಷವಿಡೀ ಶತಮಾನೋತ್ಸವ ಕಾರ್ಯಕ್ರಮ, ಸಚಿವ ಪಾಟೀಲ್ - CONGRESS SESSION CENTENARY

ETV Bharat Logo

Copyright © 2025 Ushodaya Enterprises Pvt. Ltd., All Rights Reserved.