ETV Bharat / state

ಗದಗ ಶಿವಾನಂದ ಮಠದ ಜಾತ್ರಾ ಮಹೋತ್ಸವ ರದ್ದು, 144 ಸೆಕ್ಷನ್​ ಜಾರಿ: ತಹಶೀಲ್ದಾರ್ ಆದೇಶ

author img

By ETV Bharat Karnataka Team

Published : Mar 9, 2024, 9:25 AM IST

ಶಿವಾನಂದ ಮಠದ ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

Gadaga fair cancelled
ಗದಗ ಜಾತ್ರಾ ಮಹೋತ್ಸವ ರದ್ದು
ಗದಗ ಜಾತ್ರಾ ಮಹೋತ್ಸವ ರದ್ದು

ಗದಗ: ಉತ್ತರಾಧಿಕಾರಿ ವಿವಾದ ಹಿನ್ನೆಲೆಯಲ್ಲಿ ಶಿವಾನಂದ ಮಠದ ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಗದಗ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಆದೇಶಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್​ 144 ಜಾರಿಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.

ತಹಶೀಲ್ದಾರ್​​ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರ (ನಿನ್ನೆ) ರಾತ್ರಿ ನಡೆಯಬೇಕಿದ್ದ ಸತ್ಸಂಗ ಹಾಗೂ ಮಾರ್ಚ್​​ 9 ಅಂದರೆ ಇಂದು ನಡೆಯಬೇಕಾಗಿದ್ದ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ, ರಥೋತ್ಸವಗಳು ರದ್ದಾಗಿವೆ. ಈ ಬಗ್ಗೆ ಶಿವಾನಂದ ಮಠದ ಹಿರಿಯ ಶ್ರೀ ಅಭಿನವ ಶಿವಾನಂದ ಶ್ರೀಗಳು ಹಾಗೂ ಕಿರಿಯ ಸದಾಶಿವಾನಂದ ಭಾರತಿ ಶ್ರೀಗಳಿಗೆ ಪೊಲೀಸ್ ಅಧಿಕಾರಿಗಳು ಶುಕ್ರವಾರ ರಾತ್ರಿ ಮಠಕ್ಕೆ ಆಗಮಿಸಿ ಮಾಹಿತಿ ನೀಡಿದರು. ತಹಶೀಲ್ದಾರ್​​ ಆದೇಶದಂತೆ ಭಕ್ತರು ಮಠದ ಕತೃಗದ್ದುಗೆಯ ದರ್ಶನ ಪಡೆಯಬಹುದಾಗಿದೆ. ಆದರೆ, ಅಡ್ಡಪಲ್ಲಕ್ಕಿ, ರಥೋತ್ಸವ ಹಾಗೂ ಸತ್ಸಂಗ ಸೇರಿದಂತೆ ಯಾವುದೇ ರೀತಿಯ ಸಮಾರಂಭಗಳು ನಡೆಯುವುದಿಲ್ಲ.

ಕಳೆದ ನಾಲ್ಕು ವರ್ಷಗಳ ಹಿಂದೆ ಶಿವಾನಂದ ಬೃಹನ್ಮಠದ ಉತ್ತರಾಧಿಕಾರಿ ಪಟ್ಟಾಧಿಕಾರ ಮಹೋತ್ಸವ ಜರುಗಿತ್ತು. ಆದರೆ, ಹಿರಿಯ ಸ್ವಾಮೀಜಿ ಶ್ರೀ ಅಭಿನವ ಶಿವಾನಂದ ಶ್ರೀಗಳು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಿರಿಯ ಶ್ರೀಗಳನ್ನು ಉತ್ತರಾಧಿಕಾರಿ ಹುದ್ದೆಯಿಂದ ವಜಾಗೊಳಿಸಿದ್ದಾಗಿ ದಾಖಲೆ ನೋಂದಾಯಿಸಿದ್ದರು. ಹಿರಿಯ ಶ್ರೀಗಳ ನಡವಳಿಕೆಯನ್ನು ಖಂಡಿಸಿ ಕಿರಿಯ ಶ್ರೀ ಧಾರವಾಡದ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಶಿವರಾತ್ರಿಯಂದು ಹಾಗೂ ಮರುದಿನ ನಡೆಯುವ ಜಾತ್ರಾಮಹೋತ್ಸವದಲ್ಲಿ ಕಿರಿಯ ಶ್ರೀಗಳ ಹಕ್ಕಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳುವಂತೆ ಮಧ್ಯಂತರ ಆದೇಶ ನೀಡಿತ್ತು.

ಆದರೆ, ನ್ಯಾಯಾಲಯದ ಆದೇಶದ ಹೊರತಾಗಿಯೂ, ಹಿರಿಯ ಶ್ರೀಗಳು ಕಿರಿಯ ಶ್ರೀಗಳನ್ನು ಮಠದ ಜಾತ್ರೆಯ ಯಾವದೇ ಕಾರ್ಯದಲ್ಲಿ ತೊಡಗಿಸಿಕೊಂಡಿರಲಿಲ್ಲ. ಕಿರಿಯ ಶ್ರೀಗಳ ಭಕ್ತರು ಹಿರಿಯ ಶ್ರೀಗಳ ಮನವೋಲಿಸಲು ಸಾಕಷ್ಟು ಪ್ರಯತ್ನಿಸಿದರೂ ಒಪ್ಪಿಗೆ ನೀಡಿರಲಿಲ್ಲ. ಕಿರಿಯ ಶ್ರೀಗಳ ಭಕ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಬಾಸಾಹೇಬ ನೇಮಗೌಡ ಅವರಿಗೆ ಮನವಿ ಸಲ್ಲಿಸಿದ ನಂತರ ಉಭಯ ಶ್ರೀಗಳ ಭಕ್ತರ ಸಭೆ ನಡೆಸಿ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವದಾಗಿ ಎಚ್ಚರಿಸಿದ್ದರು. ಕಳೆದ ಮೂರು ದಿನಗಳ ಹಿಂದೆ ಮಠದಲ್ಲಿ ನಡೆದ ಪ್ರಣವ ಧ್ವಜಾರೋಹಣವನ್ನು ಉಭಯ ಶ್ರೀಗಳು ಜಂಟಿಯಾಗಿ ನೆರವೇರಿಸಿದ್ದರು.

ನಿನ್ನೆ ಸಂಜೆ ಮಠದಲ್ಲಿ ನಡೆದ ಭಕ್ತರ ಸಭೆಯಲ್ಲಿ, ''ಮಠದ ಭಕ್ತರ ಅಪೇಕ್ಷೆ ಹಾಗೂ ಮಠದ ಪರಂಪರೆಗೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಪ್ರವಚನ ಕಾರ್ಯಕ್ರಮದಲ್ಲಿ ಕಿರಿಯ ಶ್ರೀಗಳೊಂದಿಗೆ ಸಾನಿಧ್ಯ ವಹಿಸುವೆ. ಪರಂಪರೆಯಂತೆ ತಾವೊಬ್ಬರೇ ಕಿರೀಟ ಪೂಜೆ, ರಥೋತ್ಸವ, ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಕೂರುತ್ತೇನೆ'' ಎಂದು ಪತ್ರಿಕಾಗೋಷ್ಠಿ ನಡೆಸಿ ಘೋಷಿಸಿದ್ದರು. ಹಿರಿಯ ಶ್ರೀಗಳ ಘೋಷಣೆಗೆ ಕಿರಿಯ ಶ್ರೀಗಳು ಸಮ್ಮತಿ ಸೂಚಿಸಿದ್ದರು. ಆದರೆ, ರಾತ್ರಿ ಒಮ್ಮೆಲೆ ತಮ್ಮ ನಡೆ ಬದಲಿಸಿದ ಹಿರಿಯ ಶ್ರೀಗಳು, ತಾವೊಬ್ಬರೇ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾನ್ನಿಧ್ಯ ವಹಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಮತ್ತಷ್ಟು ಅಭ್ಯರ್ಥಿಗಳ ಹೆಸರು ಅಂತಿಮ: ಡಿಸಿಎಂ ಡಿ.ಕೆ ಶಿವಕುಮಾರ್

ಇದರಿಂದ ಅಸಮಾಧಾನಗೊಂಡ ಕಿರಿಯ ಶ್ರೀಗಳ ಭಕ್ತರು ಮುಂದಿನ ಕಾರ್ಯಯೋಜನೆ ಬಗ್ಗೆ ಸಭೆ ನಡೆಸಿದರು. ಮಠದ ಪರಿಸರದಲ್ಲಿ ಶಾಂತಿ, ಸುವ್ಯವಸ್ಥೆ ಕದಡಬಹುದೆಂಬ ಹಿನ್ನೆಲೆಯಲ್ಲಿ, ಪೊಲೀಸ್ ಅಧಿಕಾರಿಗಳ ಶಿಫಾರಸಿನಂತೆ ತಹಶೀಲ್ದಾರರು ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಆದೇಶಿಸಿದ್ದಾರೆ. ಸದ್ಯ, ಶಿವಾನಂದ ಬೃಹನ್ಮಠದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಗತಿ ಕಳೆದುಕೊಂಡ ಪ್ರಗತಿ: ಅಭಿವೃದ್ಧಿಗಾಗಿ ಬಂಡವಾಳ ವೆಚ್ಚ ಮಾಡುವಲ್ಲಿ ಹಿಂದೆ ಬಿದ್ದ ರಾಜ್ಯ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.